ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ ನಾಯಕ, ಇಂತವರಿಗೆ ವಿರೋಧ ಪಕ್ಷದ ನಾಯಕರ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪದಚ್ಯುತಿಯ ಪ್ರಯತ್ನದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕೆ.ಎಸ್. ಈಶ್ವರಪ್ಪನವರ ಜೊತೆಯಲ್ಲಿ ಬಿ.ಎಲ್ ಸಂತೋಷ್ ಕೂಡಾ ಷಾಮೀಲಾಗಿದ್ದಾರೆ. ಈ ಕಾರಣದಿಂದಾಗಿಯೇ ಬಿಜೆಪಿ ಹೈಕಮಾಂಡ್ ಮೂಕಪ್ರೇಕ್ಷಕನಾಗಿ ಕೂತಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ:ಸಾರಿಗೆ ನೌಕರರ ಮುಷ್ಕರ: ಪಟ್ಟು ಬಿಡದ ಸರ್ಕಾರ, ರೋಡಿಗಿಳಿದ ಖಾಸಗಿ ಬಸ್‌ಗಳು
“ಮುಖ್ಯಮಂತ್ರಿಗಳ ವಿರುದ್ದ ದಿನನಿತ್ಯ ಹೇಳಿಕೆ ನೀಡಿ ಬಹಿರಂಗ ಸಮರ ಸಾರಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಚಿವ ಈಶ್ವರಪ್ಪ ವಿರುದ್ದ ಕ್ರಮಕೈಗೊಳ್ಳಲಾಗದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅಸಮರ್ಥ ನಾಯಕ. ಇಂತಹವರಿಗೆ ವಿರೋಧ ಪಕ್ಷದ ನಾಯಕರ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿ @BSYBJP ವಿರುದ್ದ ದಿನನಿತ್ಯ ಹೇಳಿಕೆ ನೀಡಿ ಬಹಿರಂಗ ಸಮರ ಸಾರಿರುವ @BasanagoudaBJP ಮತ್ತು ಸಚಿವ ಈಶ್ವರಪ್ಪ ವಿರುದ್ದ ಕ್ರಮಕೈಗೊಳ್ಳಲಾಗದ @BJP4Karnataka ರಾಜ್ಯಾಧ್ಯಕ್ಷ @nalinkateel ಒಬ್ಬ ಅಸಮರ್ಥ ನಾಯಕ.
ಇಂತಹವರಿಗೆ ವಿರೋಧ ಪಕ್ಷದ ನಾಯಕರ ಬಗ್ಗೆ ಮಾತನಾಡುವ ಯಾವ ಯೋಗ್ಯತೆ ಇದೆ?
2/2— Siddaramaiah (@siddaramaiah) April 7, 2021
ಬಿಜಿಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಅಪ್ಪ- ಮಗನ ನಿಜ ಬಣ್ಣ ಬಯಲಾಗಲಿದೆ, ಮೇ 2 ರ ನಂತರ ಮುಖ್ಯಮಂತ್ರಿ ಯಡಿಯೂರಪ್ಪರ ಬದಲಾವಣೆ ಆಗುವುದು ಗ್ಯಾರಂಟಿ. ಮೇ 2ರ ನಂತರ ಯಾವ ಸಮಯದಲ್ಲಾದರೂ ಬದಲಾವಣೆ ಆಗುತ್ತಾರೆ” ಎಂದು ಹೇಳಿದ್ದರು.
ಇದನ್ನೂ ಓದಿ: ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್


