Homeಮುಖಪುಟರಾಷ್ಟ್ರಪತ್ನಿ ಹೇಳಿಕೆಗೆ ಬಿಜೆಪಿ ಪ್ರತಿಭಟನೆ: ಕ್ಷಮೆಯಾಚಿಸಿ, ಸ್ಪಷ್ಟನೆ ನೀಡಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ

ರಾಷ್ಟ್ರಪತ್ನಿ ಹೇಳಿಕೆಗೆ ಬಿಜೆಪಿ ಪ್ರತಿಭಟನೆ: ಕ್ಷಮೆಯಾಚಿಸಿ, ಸ್ಪಷ್ಟನೆ ನೀಡಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ

- Advertisement -
- Advertisement -

ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿಯವರು ಮಾಧ್ಯಮಗಳೊಂದಿಗೆ ಮಾತನಾಡುವಾಗ ರಾಷ್ಟ್ರಪತ್ನಿ ಪದ ಬಳಸಿದ್ದಕ್ಕೆ ಬಿಜೆಪಿಯು ಭಾರೀ ಪ್ರತಿಭಟನೆ ನಡೆಸಿದೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ದೊಡ್ಡ ಗದ್ದಲ ಸೃಷ್ಟಿಯಾಗಿದ್ದು, ಈ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದಿದೆ.

ಬಿಜೆಪಿಯ ಮಹಿಳಾ ಸಚಿವರು ಮತ್ತು ಸಂಸದರ ನೇತೃತ್ವದಲ್ಲಿ ಎರಡೂ ಸದನಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮಧ್ಯಾಹ್ನದವರೆಗೂ ಸದನವನ್ನು ಮುಂದೂಡಲಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿಯವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿಯವರು ಕ್ಷಮೆಯಾಚಿಸಿದ್ದು, ಅಚಾನಕ್‌ ಆಗಿ ಬಾಯ್ತಪ್ಪಿನಿಂದಾಗಿ ಆ ಪದ ಬಳಸಿದ್ದರ ಕುರಿತು ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯು ಬೆಲೆ ಏರಿಕೆಯ ವಿರುದ್ಧದ ಪ್ರತಿಭಟನೆಯನ್ನು ದಿಕ್ಕು ತಪ್ಪಿಸಲು ಈ ವಿಷಯವನ್ನು ವಿನಾಕಾರಣ ವಿವಾದವಾಗಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ವಿಡಿಯೋ ಸಂದೇಶ ನೀಡಿರುವ ಅವರು, “ಭಾರತದ ಅಧ್ಯಕ್ಷರು ಅವರು ಬ್ರಾಹ್ಮಣರಾಗಿರಲಿ ಅಥವಾ ಬುಡಕಟ್ಟು ಸಮುದಾಯದವರಾಗಿರಲಿ ರಾಷ್ಟ್ರಪತಿಯೇ ಆಗಿರುತ್ತಾರೆ. ಆ ಹುದ್ದೆಗೆ ಮಹಾನ್ ಗೌರವ ಮತ್ತು ಹೆಮ್ಮೆ ಇದೆ. ನಿನ್ನೆ ನಾವು ಪ್ರತಿಭಟನೆ ನಡೆಸುತ್ತಿದ್ದಾಗ ಪತ್ರಕರ್ತರು ನಮ್ಮ ಮುಂದಿನ ನಡೆ ಬಗ್ಗೆ ಕೇಳಿದರು. ಆಗ ನಾನು ‘ನಾವು ರಾಷ್ಟ್ರಪತಿ ಭವನಕ್ಕೆ ಹೋಗಿ ರಾಷ್ಟ್ರಪತಿಯವರನ್ನು ಭೇಟಿ ಮಾಡುತ್ತೇವೆ’ ಎಂದು ಹೇಳಿದೆ. ಆಗ ಬಾಯಿ ತಪ್ಪಿ ರಾಷ್ಟ್ರಪತ್ನಿ ಎಂದು ಒಮ್ಮೆ ಉಲ್ಲೇಖಿಸಿದೆ. ಕೂಡಲೇ ತಪ್ಪನ್ನು ಸರಿಪಡಿಸಿಕೊಂಡೆ ಮತ್ತು ಇದನ್ನು ಪ್ರಸಾರ ಮಾಡಬೇಡಿ ಎಂದು ಮಾಧ್ಯಮಗಳಲ್ಲಿ ಮನವಿ ಮಾಡಿದೆ. ಆದರೂ ಪ್ರಸಾರ ಮಾಡಿದರು ಮತ್ತು ಬಿಜೆಪಿಯವರು ಅದನ್ನು ದೊಡ್ಡ ವಿಷಯ ಮಾಡುತ್ತಿದ್ದಾರೆ” ಎಂದಿದ್ದಾರೆ.

ಒಂದು ಬಾರಿ ಮಾತ್ರ ಬಾಯ್ತಪ್ಪಿನಿಂದ ಆಡಿದ ಒಂದು ಪದವನ್ನು ಹಿಡಿದುಕೊಂಡು ಬಿಜೆಪಿಯವರು ವಿವಾದ ಸೃಷ್ಟಿಸುತ್ತಿದ್ದಾರೆ. ಏಕೆಂದರೆ ಅವರಿಗೆ ನಮ್ಮ ವಿರುದ್ಧ ಹೋರಾಡಲು ಯಾವುದೇ ಇಶ್ಯೂ ಇಲ್ಲ. ಹಾಗಾಗಿ ಈ ವಿಷಯಕ್ಕೆ ಮಸಾಲೆ ಸೇರಿಸುತ್ತಿದ್ದಾರೆ ಎಂದು ಚೌಧರಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ‘ಸಂಸತ್ತಿನಲ್ಲಿ ಮತ್ತು ಭಾರತದ ಬೀದಿಗಳಲ್ಲಿ, ಭಾರತದ ಪ್ರತಿಯೊಬ್ಬ ನಾಗರಿಕರಲ್ಲಿ ಕಾಂಗ್ರೆಸ್ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು “ಚೌಧರಿ ಈಗಾಗಲೇ ಕ್ಷಮೆ ಯಾಚಿಸಿದ್ದಾರೆ” ಎಂದಿದ್ದಾರೆ. ಅಲ್ಲದೆ ಸದನದಲ್ಲಿ ಭಾರೀ ಗದ್ದಲ ನಡೆಯುತ್ತಿದ್ದಾಗ ಬಿಜೆಪಿ ಎಂಪಿ ರಮಾ ದೇವಿಯವರ ಬಳಿ ತೆರಳಿ ಮಾತನಾಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಬಂಗಾಳ ಸಚಿವನ ಸಹಾಯಕಿಯ ಮನೆಗಳಿಂದ 50 ಕೋಟಿ ರೂ ಹಣ, 5 ಕೆಜಿ ಚಿನ್ನ ವಶ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಕಲ್ಕತ್ತಾ ಹೈಕೋರ್ಟ್ ಮಾರಾಟ ಆಗಿದೆ’ ಎಂದ ಮಮತಾ ಬ್ಯಾನರ್ಜಿ ವಿರುದ್ಧ ಕ್ರಮಕ್ಕೆ ವಕೀಲರ ಗುಂಪು...

0
‘ಕಲ್ಕತ್ತಾ ಹೈಕೋರ್ಟ್ ಮಾರಾಟ ಆಗಿದೆ' ಎಂದು ಹೈಕೋರ್ಟ್‌ ವಿರುದ್ಧ ಟೀಕೆಯನ್ನು ಮಾಡಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಬೇಕೆಂದು ವಕೀಲರ ಗುಂಪು ಗುರುವಾರ ಕಲ್ಕತ್ತಾ ಹೈಕೋರ್ಟ್‌ಗೆ ಒತ್ತಾಯಿಸಿದೆ. ಶಾಲಾ...