Homeಮುಖಪುಟಕೋವಿಶೀಲ್ಡ್ ಅಡ್ಡ ಪರಿಣಾಮ: 'ಬಿಜೆಪಿ' ದೇಣಿಗೆಗಾಗಿ 'ಜನರ ಜೀವ'ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

ಕೋವಿಶೀಲ್ಡ್ ಅಡ್ಡ ಪರಿಣಾಮ: ‘ಬಿಜೆಪಿ’ ದೇಣಿಗೆಗಾಗಿ ‘ಜನರ ಜೀವ’ವನ್ನು ಪಣಕ್ಕಿಟ್ಟಿದೆ; ಅಖಿಲೇಶ್ ಯಾದವ್

- Advertisement -
- Advertisement -

ಕೋವಿಶೀಲ್ಡ್ ಲಸಿಕೆಯ “ಅಡ್ಡಪರಿಣಾಮಗಳ” ವಿವಾದದ ಮಧ್ಯೆ ಲಸಿಕೆ ತಯಾರಕರಿಂದ “ರಾಜಕೀಯ ದೇಣಿಗೆಗಳನ್ನು” ಪಡೆಯಲು ‘ಬಿಜೆಪಿ’ ಜನರ ಜೀವನವನ್ನು ಪಣಕ್ಕಿಟ್ಟಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.

ಈ ಕುರಿತು ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ಅಖಿಲೇಶ್‌ ಯಾದವ್, ಇಂತಹ ಮಾರಕ ಔಷಧಗಳನ್ನು ಅನುಮತಿಸುವುದು “ಯಾರನ್ನಾದರೂ ಕೊಲೆ ಮಾಡುವ ಪಿತೂರಿ” ಗೆ ಸಮಾನವಾಗಿದೆ ಮತ್ತು ಹೊಣೆಗಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ.

ಸುಮಾರು 80 ಕೋಟಿ ಭಾರತೀಯರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ, ಪ್ರತಿ ವ್ಯಕ್ತಿಗೆ ಎರಡು ಡೋಸ್‌ನಂತೆ ನೀಡಲಾಗಿದೆ. ಲಸಿಕೆಯನ್ನು ತಯಾರಿಸಿದ ಕಂಪನಿಯು ಹೃದಯಾಘಾತದ ಅಪಾಯವನ್ನುಂಟುಮಾಡುತ್ತದೆ ಎಂದು ಹೇಳಿದೆ ಎಂದು ಯಾದವ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲಸಿಕೆಯ ದುಷ್ಪರಿಣಾಮಗಳಿಂದಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರು ಅಥವಾ ಲಸಿಕೆಯ ದುಷ್ಪರಿಣಾಮಗಳ ಬಗ್ಗೆ ಭಯಪಡುವವರು, ಅವರ ಅನುಮಾನಗಳು ಮತ್ತು ಭಯಗಳು ಈಗ ಕಂಪೆನಿ ಸ್ವಯಂ ಒಪ್ಪಿಕೊಂಡಿದ್ದರಿಂದ ಸಾಬೀತಾಗಿದೆ. ಜನರ ಬದುಕಿನೊಂದಿಗೆ ಚೆಲ್ಲಾಟವಾಡುವವರನ್ನು ಕ್ಷಮಿಸಬಾರದು ಎಂದು ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ಆಡಳಿತ ಪಕ್ಷವು ಲಸಿಕೆ ತಯಾರಿಕಾ ಕಂಪನಿಯಿಂದ ರಾಜಕೀಯ ದೇಣಿಗೆ ಸಂಗ್ರಹಿಸುವ ಮೂಲಕ ಜನರ ಪ್ರಾಣವನ್ನು ಪಣಕ್ಕಿಟ್ಟಿದೆ. ಕಾನೂನು ಅಥವಾ ಜನರು ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ. ಈ ವಿಷಯದಲ್ಲಿ ಉನ್ನತ ಮಟ್ಟದಲ್ಲಿ ನ್ಯಾಯಾಂಗ ತನಿಖೆಯಾಗಬೇಕು, ಬಿಜೆಪಿಯು ಕೋವಿಡ್ ಲಸಿಕೆ ತಯಾರಕರಿಂದ ಕಮಿಷನ್ ತೆಗೆದುಕೊಂಡಿದೆ. ಅದನ್ನು ಭೀತಿಗೊಳಿಸಿ ಜನರಿಗೆ ಬಲವಂತವಾಗಿ ನೀಡಲಾಗಿದೆ ಎಂದು ಯಾದವ್ ಹೇಳಿದ್ದಾರೆ.

ಕೋವಿಡ್-19 ವಿರುದ್ಧದ ‘ಕೋವಿಶೀಲ್ಡ್‌’ ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿತ್ತು. TTS ಅಥವಾ ಥ್ರಂಬೋಸಿಸ್ ಜೊತೆಗೆ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗುತ್ತದೆ ಮತ್ತು ರಕ್ತದಲ್ಲಿ ಪ್ಲೇಟ್ಲೆಟ್‌ ಅಂಶಗಳು ಕಡಿಮೆಯಾಗಲು ಕಾರಣವಾಗುತ್ತದೆ ಎನ್ನುವುದು ಆ ಬಳಿಕ ಬಹಿರಂಗವಾಗಿತ್ತು.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್‌ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿದೆ ಮತ್ತು ದೇಶದಲ್ಲಿ ವ್ಯಾಪಕವಾಗಿ ಈ ಲಸಿಕೆಯನ್ನು ನೀಡಲಾಗಿದೆ.

ಕೋವಿಡ್‌ ಲಸಿಕೆ ಅಡ್ಡಪರಿಣಾಮದ ಬಗ್ಗೆ ಮಾಹಿತಿ ಬಯಲಾಗುತ್ತಿದ್ದಂತೆ ಈ ಹೃದಯಾಘಾತದ ಸಾವಿಗೆ ಯಾರು ಹೊಣೆ ಎಂದು ರಾಷ್ಟ್ರೀಯ ಜನತಾದಳ(ಆರ್‌ಜೆಡಿ) ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನಿಸಿದೆ.

ಉತ್ತರಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಕೂಡ ಈ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಮೋದಿಯ ಗ್ಯಾರಂಟಿಯೇ? ಎಂದು ಪ್ರಶ್ನಿಸಿದ್ದಾರೆ.

ಎಸ್ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಪಾಲ್ ಯಾದವ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಲಸಿಕೆಗಳಲ್ಲಿ ಅವರು ಕಮಿಷನ್ ತೆಗೆದುಕೊಂಡಿರುವುದು ಈಗ ಬಹಿರಂಗವಾಗಿದೆ, ಜನರಿಗೆ ಕಡಿಮೆ ಗುಣಮಟ್ಟದ ಲಸಿಕೆಗಳು ಮತ್ತು ಔಷಧಿಗಳನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದೇಶದಲ್ಲಿ ಜನರಿಗೆ ಬಲವಂತವಾಗಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. 200-300ಕೋಟಿ ರೂ. ದೇಣಿಗೆಯನ್ನು ಬಿಜೆಪಿ ತೆಗೆದುಕೊಂಡು ಕಂಪೆನಿಗೆ ಲಸಿಕೆಯನ್ನು ಮಾರುಕಟ್ಟೆ ಮಾಡಲು ಅನುಮತಿ ನೀಡಿದೆ. ಜನರಿಗೆ ಬಲವಂತವಾಗಿ ಲಸಿಕೆಗಳನ್ನು ನೀಡಲಾಯಿತು. ವಿಶ್ವದಲ್ಲಿ ಎಲ್ಲಿಯೂ ಲಸಿಕೆಗಳನ್ನು ಬಲವಂತವಾಗಿ ನೀಡಲಾಗಿಲ್ಲ, ಲಸಿಕೆ ತಯಾರಿಕೆಯಲ್ಲಿನ ಭ್ರಷ್ಟಾಚಾರವು ಈಗ ಮುಂಚೂಣಿಗೆ ಬಂದಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...