Homeಮುಖಪುಟಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ಉರೀಗೌಡ ನಂಜೇಗೌಡ ಸಿನಿಮಾ ಶೀರ್ಷಿಕೆ ನೋಂದಣಿಗೆ ಮುಂದಾದ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಕಿಡಿ

ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳನ್ನಿಟ್ಟುಕೊಂಡು ಸಿ.ಟಿ.ರವಿ ದಿನವೂ ವಿಷ ಕಕ್ಕುತ್ತಿದ್ದಾರೆ. ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ- ಹೆಚ್ ಡಿ ಕುಮಾರಸ್ವಾಮಿ

- Advertisement -
- Advertisement -

ಇತಿಹಾಸದಲ್ಲಿ ಇಲ್ಲದ ಪಾತ್ರಗಳನ್ನು ಸೃಷ್ಟಿಸಿ ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳನ್ನಿಟ್ಟುಕೊಂಡು ಸಿ.ಟಿ.ರವಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸಚಿವ ಮತ್ತು ಚಿತ್ರ ನಿರ್ಮಾಪಕರಾದ ಮುನಿರತ್ನರವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ‘ಉರೀಗೌಡ ನಂಜೇಗೌಡ’ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿಯವರು ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸರಣಿ ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕಿರುವ ಅವರು, “ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆ ಇರುವುದಂತೂ ಸತ್ಯ. ಈ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ” ಎಂದಿದ್ದಾರೆ.

ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ಬಿಜೆಪಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು ಬಿಜೆಪಿ ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಹೆಸರನ್ನು ಮರೆಮಾಚಿ ಕಲ್ಪಿತ ಹೆಸರುಗಳ ಕಮಾನು ಕಟ್ಟಿದ್ದೇ ಪರಮದ್ರೋಹ.
ಕುಲಕ್ಕೆ, ಕುಲ ಗುರುವಿಗಾದ ಈ ಘೋರ ಅಪಮಾನದಿಂದ ಕುದಿಯುತ್ತಿರುವ ಒಕ್ಕಲಿಗ ಸಮಾಜವನ್ನು ಇನ್ನಷ್ಟು ಹೀನಾಯವಾಗಿ ಕಳಂಕದ ಕೂಪಕ್ಕೆ ತಳ್ಳಲು ಇದೇ ಬಿಜೆಪಿ ಸರಕಾರದ ಸಚಿವರೊಬ್ಬರು ಧೂರ್ತ ಪ್ರಯತ್ನ ನಡೆಸಿದ್ದಾರೆ ಎಂದಿದ್ದಾರೆ.

ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ. ಬಿಜೆಪಿ ಸೃಷ್ಟಿಸಿದ ಕಿರಾತಕ ಸುಳ್ಳನ್ನೇ ಸಿನಿಮಾ ಮಾಡಿ ಒಕ್ಕಲಿಗರನ್ನು ಇತಿಹಾಸದಲ್ಲಿ ಶಾಶ್ವತವಾಗಿ ಖಳನಾಯಕರನ್ನಾಗಿ ಚಿತ್ರಿಸುವುದೇ ಅವರ ದುರುದ್ದೇಶವಾಗಿದೆ. ಈ ದ್ರೋಹವನ್ನು ಒಕ್ಕಲಿಗರು ಸಹಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು? ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು ಎಂದು ತಿಳಿಸಿದ್ದಾರೆ.

ಮುನಿರತ್ನ ಮಾಡುವ ಸಿನಿಮಾಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಥೆ ಬರೆಯುತ್ತಾರಾ? ಟಿಪ್ಪು ನೆಪದಲ್ಲಿ ಜನ್ಮತೆಳೆದ ಜಾತಿ ವಿರುದ್ಧವೇ ವಿಷ ಕಕ್ಕುತ್ತಿರುವ, ಬಿಜೆಪಿಯನ್ನು ಎತ್ತಿ ಕಟ್ಟುತ್ತಿರುವ ಸಿ.ಟಿ.ರವಿ ಅವರು ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳ ನೆಪದಲ್ಲಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದಿದ್ದಾರೆ.

ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ. ಅವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆಯುತ್ತಾರಾಯೇ? ಬರೆದರೂ ಬರೆಯಬಹುದು. ಏಕೆಂದರೆ, ಇವರಿಬ್ಬರೂ ಕುಲದ್ರೋಹಿಗಳಷ್ಟೇ ಅಲ್ಲ, ಒಕ್ಕಲು ಸಂಕುಲದ ವಿನಾಶಕರು ಎಂದು ಕಿಡಿಕಾರಿದ್ದಾರೆ.

ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಬಿಜೆಪಿ ಸ್ಥಿತಿ. ಪ್ರತೀ ಸೂಕ್ಷ್ಮ ವಿಷಯದಲ್ಲೂ ಮತ ರಾಜಕಾರಣ ಮಾಡುವ ಕಮಲ ಪಕ್ಷಕ್ಕೆ ಕರ್ನಾಟಕವೇ ಪ್ರಯೋಗ ಶಾಲೆ. ಜಾತಿ, ಧರ್ಮಗಳ ನಡುವೆ ಕಿಚ್ಚಿಟ್ಟು, ಸರ್ವಜನಾಂಗದ ತೋಟವಾದ ಕರ್ನಾಟಕಕ್ಕೆ ಕೋಮುಪ್ರಾಷನ ಮಾಡಿಸುತ್ತಿದೆ ಬಿಜೆಪಿ . ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಒಕ್ಕಲಿಗ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ ಬಿಜೆಪಿ ಬೀರುತ್ತಿರುವ ವಕ್ರದೃಷ್ಟಿ… ಇದೆಲ್ಲವೂ ಒಕ್ಕಲಿಗರನ್ನು ರಾಜಕೀಯವಾಗಿ ಮುಗಿಸಿಬಿಡುವ ಬಿಜೆಪಿ ರಕ್ಕಸ ಹಿಡೆನ್ ಅಜೆಂಡಾ ಅಲ್ಲದೆ ಮತ್ತೇನೂ ಅಲ್ಲ ಎಂದಿದ್ದಾರೆ.

ಇದನ್ನೂ ಓದಿ: ವಿಶ್ವದಲ್ಲಿ ಭಾರತದ ಮಾನ ತೆಗೆದ ನಿಜವಾದ ಅಪರಾಧಿ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...