Homeಮುಖಪುಟಅಧಿಕಾರದಲ್ಲಿ ಉಳಿಯುವುದಕ್ಕೆ ಬಿಜೆಪಿ ಯಾವುದೇ ಅನೈತಿಕತೆಯ ಮಟ್ಟಕ್ಕೆ ಇಳಿಯಲು ಸಿದ್ಧ: ಮಲ್ಲಿಕಾರ್ಜುನ್ ಖರ್ಗೆ

ಅಧಿಕಾರದಲ್ಲಿ ಉಳಿಯುವುದಕ್ಕೆ ಬಿಜೆಪಿ ಯಾವುದೇ ಅನೈತಿಕತೆಯ ಮಟ್ಟಕ್ಕೆ ಇಳಿಯಲು ಸಿದ್ಧ: ಮಲ್ಲಿಕಾರ್ಜುನ್ ಖರ್ಗೆ

- Advertisement -
- Advertisement -

ಆಡಳಿತಾರೂಢ ಬಿಜೆಪಿ ಅಧಿಕಾರದಲ್ಲಿ ಉಳಿಯಲು ಯಾವುದೇ ಅನೈತಿಕತೆಯ ಮಟ್ಟಕ್ಕೆ ಇಳಿಯಲು ಸಿದ್ಧವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದರು.

ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಸ್ವಾತಂತ್ರ್ಯ ದಿನಾಚರಣೆಯ ಭಾಷಣ ಮಾಡಿದ ಅವರು, “ದೇಶಾದ್ಯಂತ ಚುನಾವಣೆಗಳಲ್ಲಿ ಹಲವಾರು ‘ಅಕ್ರಮಗಳು’ ಹೊರಹೊಮ್ಮುತ್ತಿವೆ. ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಹೆಸರಿನಲ್ಲಿ ವಿರೋಧ ಪಕ್ಷದ ಮತಗಳನ್ನು ಬಹಿರಂಗವಾಗಿ ಕಡಿತಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು. ಜೀವಂತ ಮತದಾರರನ್ನು ಸತ್ತವರು ಎಂದು ಘೋಷಿಸಲಾಗುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಅತ್ಯಂತ ಆಶ್ಚರ್ಯಕರ, ವಿಷಯವೆಂದರೆ 65 ಲಕ್ಷ ಜನರ ಮತಗಳನ್ನು ಕಡಿತಗೊಳಿಸಲು ಬಿಜೆಪಿಗೆ ಯಾವುದೇ ಆಕ್ಷೇಪವಿಲ್ಲ. ಎಸ್‌ಐಆರ್‌ ಪ್ರಕ್ರಿಯೆಯಿಂದ ಯಾರು ಪ್ರಯೋಜನ ಪಡೆದರು ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಅವರು ಹೇಳಿದರು.

“ಇದು ಚುನಾವಣೆಗಳನ್ನು ಗೆಲ್ಲುವ ಹೋರಾಟವಲ್ಲ. ಆದರೆ, ಭಾರತದ ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ಸಂವಿಧಾನವನ್ನು ರಕ್ಷಿಸಲು” ಎಂದು ಖರ್ಗೆ ಅವರು ಎಸ್‌ಐಆರ್‌ ಪ್ರಕ್ರಿಯೆಯ ಕಾಂಗ್ರೆಸ್‌ನ ವಿರೋಧವನ್ನು ಉಲ್ಲೇಖಿಸಿ ಹೇಳಿದರು.

“ಈಗ ಆಡಳಿತ ಪಕ್ಷವು ಅಧಿಕಾರದಲ್ಲಿ ಉಳಿಯಲು ಯಾವುದೇ ಅನೈತಿಕತೆಗೆ ಹೋಗಲು ಸಿದ್ಧವಾಗಿದೆ. ಚುನಾವಣೆಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ಬೆಳಕಿಗೆ ಬರುತ್ತಿವೆ” ಎಂದು ಅವರು ಆರೋಪಿಸಿದರು.

“ವಿಶೇಷ ತೀವ್ರ ಪರಿಷ್ಕರಣೆಯ ಹೆಸರಿನಲ್ಲಿ, ವಿರೋಧ ಪಕ್ಷದ ಮತಗಳನ್ನು ಬಹಿರಂಗವಾಗಿ ಕಡಿತಗೊಳಿಸಲಾಗುತ್ತಿದೆ. ಜೀವಂತವಾಗಿರುವವರನ್ನು ಸತ್ತವರು ಎಂದು ಘೋಷಿಸಲಾಗಿದೆ. ಯಾರ ಮತಗಳನ್ನು ಕಡಿತಗೊಳಿಸಲಾಗುತ್ತಿದೆ ಮತ್ತು ಯಾವ ಆಧಾರದ ಮೇಲೆ ಕಡಿತಗೊಳಿಸಲಾಗುತ್ತಿದೆ ಎಂದು ಹೇಳಲು ಚುನಾವಣಾ ಆಯೋಗ ಸಿದ್ಧವಾಗಿಲ್ಲದಿರುವುದರಿಂದ ಅದರ ನಿಷ್ಪಕ್ಷಪಾತತೆಯನ್ನು ಅರ್ಥಮಾಡಿಕೊಳ್ಳಬಹುದು” ಎಂದು ಅವರು ಹೇಳಿದರು.

ಇಡಿ ಮತ್ತು ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆ ಮುಂತಾದ ಕೇಂದ್ರ ತನಿಖಾ ಸಂಸ್ಥೆಗಳನ್ನು “ವಿರೋಧಿಗಳ ವಿರುದ್ಧ ರಾಜಕೀಯ ಉದ್ದೇಶಗಳಿಗಾಗಿ ಬಹಿರಂಗವಾಗಿ ಬಳಸಲಾಗಿದೆ, ದೇಶದ ಸುಪ್ರೀಂ ಕೋರ್ಟ್ ಅವರಿಗೆ ಕನ್ನಡಿ ತೋರಿಸಬೇಕಾಗಿದೆ” ಎಂದು ಕಾಂಗ್ರೆಸ್ ಮುಖ್ಯಸ್ಥರು ಹೇಳಿದ್ದಾರೆ.

‘ಅಲಿಪ್ತ ನೀತಿ’ಯಿಂದಾಗಿ ಭಾರತ ಗಳಿಸಿದ ವಿಶೇಷ ಸ್ಥಾನವನ್ನು ಕಳೆದುಕೊಂಡಿದೆ. ಸ್ವಾತಂತ್ರ್ಯದ ವೀರರು ಈ ದೇಶಕ್ಕಾಗಿ ಕಂಡ ಕನಸು ಇಂದು ನಮ್ಮಿಂದ ದೂರವಾಗುತ್ತಿದೆ ಎಂದು ಖರ್ಗೆ ಹೇಳಿದ್ದಾರೆ.

ಗಾಂಧಿ ಜೊತೆ ಸಾವರ್ಕರ್ ಚಿತ್ರ ಪ್ರಕಟಿಸಿದ ಕೇಂದ್ರ ಸರ್ಕಾರ; ಕೇಂದ್ರ ಸರ್ಕಾರವನ್ನು ಟೀಕಿಸಿದ ಜಾನ್ ಬ್ರಿಟ್ಟಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...