Homeಕರ್ನಾಟಕಕಾಂಗ್ರೆಸ್ ಬೆಂಬಲಕ್ಕೆ ನಿಂತ ಬಿಜೆಪಿ ಬಂಡಾಯ ಅಭ್ಯರ್ಥಿ ಗೂಳಿಹಟ್ಟಿ ಶೇಖರ್‌

ಕಾಂಗ್ರೆಸ್ ಬೆಂಬಲಕ್ಕೆ ನಿಂತ ಬಿಜೆಪಿ ಬಂಡಾಯ ಅಭ್ಯರ್ಥಿ ಗೂಳಿಹಟ್ಟಿ ಶೇಖರ್‌

- Advertisement -
- Advertisement -

ಬಿಜೆಪಿ ಟಿಕೆಟ್ ವಂಚಿತರಾಗಿ ಹೊಸದುರ್ಗ ವಿಧಾನಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಈಗ ಬಿಜೆಪಿಗೆ ಮತ್ತೊಂದು ಶಾಕ್ ನೀಡಿದ್ದಾರೆ.

“ಕ್ಷೇತ್ರದಲ್ಲೇನಾದರೂ ನನಗೆ ಕಠಿಣ ಸ್ಥಿತಿ ಬಂದರೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲು ಹೇಳುತ್ತೇನೆ” ಎಂದು ಅವರು ಹೇಳಿದ್ದಾರೆ. ಈ ಹೇಳಿಕೆ ಈಗ ಬಿಜೆಪಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಗುರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಗೂಳಿಹಟ್ಟಿ ಶೇಖರ್, ಇದುವರೆಗೆ ಯಾವುದೇ ಬಿಜೆಪಿ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ. ಮುಂದೆಯೂ ಅವರ ಓಲೈಕೆಗೆ ಬಗ್ಗುವುದಿಲ್ಲ, ನಾನು ಸ್ಪರ್ಧಿಸುವುದು ಶತಸಿದ್ದ, ಆದರೆ ಯಾವುದೇ ಕಾರಣಕ್ಕೂ ಬಿಜೆಪಿಯ ಲಿಂಗಮೂರ್ತಿಯವರನ್ನು ನಾನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

“ಅಂತಹ ಕಠಿಣ ಸ್ಥಿತಿ ಬಂದರೇ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಲು ಹೇಳುತ್ತೇನೆ” ಎಂದಿರುವ ಗೂಳಿಹಟ್ಟಿ ಶೇಖರ್, “ನನಗೆ ಇವರೆಲ್ಲರೂ ಸಹಿಸದಷ್ಟು ಕಾಟ ಕೊಟ್ಟಿದ್ದಾರೆ” ಎಂದು ಆರೋಪಿಸಿದ್ದಾರೆ.

ಇತ್ತೀಚೆಗೆ ಬಿಜೆಪಿಗೆ ರಾಜೀನಾಮೆ ನೀಡಿರುವ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್‌ ಮತ್ತು ಲಕ್ಷ್ಮಣ್‌ ಸವದಿ ಕಾಂಗ್ರೆಸ್ ಸೇರ್ಪಡೆಯಾಗಿ ಬಿಜೆಪಿ ವಿರುದ್ಧ ಬಂಡಾಯವೆದ್ದಿದ್ದಾರೆ. ಬಿಜೆಪಿ ನಾಯಕ ಬಿ.ಎಲ್.ಸಂತೋಷ್‌ ವಿರುದ್ಧ ಶೆಟ್ಟರ್‌ ಗುಡುಗಿದ್ದಾರೆ.

“ಹಿರಿಯ ನಾಯಕರನ್ನು ಮೂಲೆಗುಂಪು ಮಾಡಲು ಬಿ.ಎಲ್.ಸಂತೋಷ್ ಕಾರಣ. ಹಿರಿತನವನ್ನು ಕಡೆಗಣಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಭ್ಯರ್ಥಿಗಳ ಟಿಕೆಟ್ ಘೋಷಣೆಯಾದ ಬಳಿಕ ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಕಾವು ಜೋರಾಗಿದೆ. ಮತ್ತೊಂದೆಡೆ ಮಾಜಿ ಸಚಿವ, ದಿವಂಗತ ಅನಂತಕುಮಾರ್‌ ಅವರ ಪಾಳೆಯದಲ್ಲಿದ್ದ ಬಿಜೆಪಿ ನಾಯಕರಿಗೆ ಟಿಕೆಟ್ ಕೈತಪ್ಪುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಹೀಗಿರುವಾಗ ಅನಂತಕುಮಾರ್‌ ಅವರ ಪತ್ನಿ, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಅವರು ಮಾಡಿರುವ ಟ್ವೀಟ್ ರಾಜಕೀಯ ಅರ್ಥಗಳನ್ನು ಹೊಮ್ಮಿಸಿದಂತೆ ಭಾಸವಾಗಿದೆ.

ಇದನ್ನೂ ಓದಿರಿ: ಅನಂತಕುಮಾರ್‌ ನೆಟ್ಟ ಗಿಡ ಉಳಿಸಬೇಕಿದೆ: ರಾಜಕೀಯ ಅರ್ಥ ಧ್ವನಿಸಿತೇ ತೇಜಸ್ವಿನಿ ಟ್ವೀಟ್?

ಸೋಮವಾರ ಮಾಡಿರುವ ಟ್ವೀಟ್‌ವೊಂದರಲ್ಲಿ ತೇಜಸ್ವಿನಿ ಅನಂತಕುಮಾರ್‌, “ಈ ಗಿಡ ಜೂನ್ 5, 2015ರಂದು ಲಾಲ್‌‌ಬಾಗ್ ಪಶ್ಚಿಮ ದ್ವಾರದ ಬಳಿ ಶ್ರೀ ಅನಂತಕುಮಾರ್ ಅವರು ನೆಟ್ಟಿದ್ದು. ಯಾಕೋ ಮುದುರಿ ಹೋಗಿದೆ. ಲಾಲ್‌ಬಾಗ್ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದೇವೆ. ಶ್ರೀ ಅನಂತಕುಮಾರರ ಅನುಪಸ್ಥಿತಿಯಲ್ಲಿ ಈ ಗಿಡವನ್ನು ಉಳಿಸುವ ಜವಾಬ್ದಾರಿ ನಮ್ಮದು, ಎಂಬುದು ನನ್ನ ಭಾವನೆ” ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ “ಮಾತು ಬೆಳ್ಳಿ ಹೌದೋ ಅಲ್ಲವೋ ಗೊತ್ತಿಲ್ಲ, ಆದರೆ ಮೌನ ಮಾತ್ರ ಬಂಗಾರ. ಏನಂತಿರಿ?” ಎಂದು ಕೇಳಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಆಗುತ್ತಿರುವ ಬೆಳವಣಿಗೆಗಳಿಗೂ ತೇಜಸ್ವಿನಿಯವರ ಟ್ವೀಟ್‌ಗಳಿಗೂ ಕಾಕತಾಳೀಯವೆಂಬಂತೆ ಹೋಲಿಕೆ ಮಾಡಿ ಅನೇಕರು ಪ್ರತಿಕ್ರಿಯಿಸಿದ್ದಾರೆ. ಅನಂತಕುಮಾರ್‌ ಅವರೊಂದಿಗೆ ಗುರುತಿಸಿಕೊಂಡು ಬೆಳೆದ ಅನೇಕರಿಗೆ ಬಿಜೆಪಿ ಟಿಕೆಟ್ ಕೈತಪ್ಪಿರುವಾಗ ಹಾಗೂ ರಾಜ್ಯ ಬಿಜೆಪಿಯೊಳಗೆ ಬಿಕ್ಕಟ್ಟು ತಾರಕ್ಕೇರುತ್ತಿರುವಾಗ ತೇಜಸ್ವಿನಿಯವರ ಪೋಸ್ಟ್‌ ವಿವಿಧ ಅರ್ಥಗಳಿಗೆ ಅವಕಾಶ ಮಾಡಿಕೊಟ್ಟಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...