Homeಮುಖಪುಟಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ಜೋರು: ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧಾರ

ಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ಜೋರು: ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧಾರ

- Advertisement -
- Advertisement -

ಬೆಳಗಾವಿಯ 18 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಟಿಕೆಟ್ ಸಿಗದ ಆಕಾಂಕ್ಷಿಗಳು ಕನಿಷ್ಟ 8 ಕ್ಷೇತ್ರಗಳಲ್ಲಿ ಬಂಡಾಯ ಸಾರಿದ್ದಾರೆ. ಹಲವರು ಪಕ್ಷೇತರರಾಗಿ ಇನ್ನು ಕೆಲವರು ಕಾಂಗ್ರೆಸ್‌ನಿಂದ ಕಣಕ್ಕಿಳಿಯಲು ಮನಸ್ಸು ಮಾಡಿದ್ದಾರೆ.

ಬೆಳಗಾವಿ ಉತ್ತರ – ಅನಿಲ್ ಬೆನಕೆ

ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತ ಅನಿಲ್ ಬೆನಕೆ ಬೆಂಬಲಿಗರು ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 2018 ರಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಅನಿಲ್ ಎಸ್ ಬೆನಕೆ ಕಾಂಗ್ರೆಸ್‌ನ ಫೈರೋಜ್ ನೂರುದ್ದೀನ್ ಸೇಠ್‌ರವರನ್ನು 17,267 ಮತಗಳ ಅಂತರದಲ್ಲಿ ಸೋಲಿಸಿದ್ದರು. ಆದರೆ ಈ ಬಾರಿ ಅವರ ಬದಲಿಗೆ ಬಿಜೆಪಿ ಡಾ.ರವಿ ಪಾಟೀಲ್‌ಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಇನ್ನೂ ಅಭ್ಯರ್ಥಿ ಅಂತಿಮಗೊಳಿಸಿಲ್ಲ.

ಯಮಕನಮರಡಿ – ಮಾರುತಿ ಅಷ್ಟಗಿ

ಯಮಕನಮರಡಿ ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾರುತಿ ಅಷ್ಟಗಿಯವರಿಗೆ ಟಿಕೆಟ್ ಕೈ ತಪ್ಪಿದೆ. ಅವರು ಬದಲು ಬಸವರಾಜ ಹುಂದ್ರಿಯವರಿಗೆ ಟಿಕೆಟ್ ಸಿಕ್ಕಿದೆ. ಇದರಿಂದ ಕುಪಿತಗೊಂಡಿರುವ ಮಾರುತಿ ಅಷ್ಟಗಿಯವರು ಬಂಡಾಯ ಸಾರಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಅಥಣಿ – ಲಕ್ಷ್ಮಣ ಸವದಿ

ಅಥಣಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಅಲ್ಲಿ ಕಾಂಗ್ರೆಸ್‌ನಿಂದ ಪಕ್ಷಾಂತರ ಮಾಡಿದ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ನೀಡಿದೆ. ಹಾಗಾಗಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವ ಯೋಚನೆಯಲ್ಲಿದ್ದಾರೆ.

ರಾಮದುರ್ಗ – ಮಹಾದೇವಪ್ಪ ಯಾದವಾಡ

ರಾಮದುರ್ಗ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಶಾಸಕ ಮಹದೇವಪ್ಪ ಯಾದವಾಡ ಬೆಂಬಲಿಗರು ಬುಧವಾರ ರಾತ್ರಿ ಮತ್ತು ಇಂದು ಬೆಳಿಗ್ಗೆ ಪ್ರತಿಭಟನೆ ನಡೆಸಿದ್ದಾರೆ. ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಬುಧವಾರ ರಾತ್ರಿಯೇ ಮಹಾದೇವಪ್ಪ ಯಾದವಾಡ ಬೆಂಗಳೂರಿಗೆ ತೆರಳಿದ್ದಾರೆ.

ಮಹದೇವಪ್ಪ ಯಾದವಾಡರವರು ರಾಮದುರ್ಗದಲ್ಲಿ 1999 ರಲ್ಲಿ ಸೋಲು ಕಂಡಿದ್ದರು. ಆನಂತರ 2004 ಮತ್ತು 2018 ರಲ್ಲಿ ಗೆಲುವು ದಾಖಲಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ನ ಅಶೋಕ್ ಮಹದೇವಪ್ಪ ಪಟ್ಟಣ್ ವಿರುದ್ಧ 2,875 ಮತಗಳ ಅಂತರದಲ್ಲಿ ಜಯ ಕಂಡಿದ್ದರು. ಈಗ ಅವರ ಬದಲಿಗೆ ಬಿಜೆಪಿಯು ಚಿಕ್ಕರೇವಣ್ಣನವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್‌ ಸೋತ ಅಭ್ಯರ್ಥಿ ಮಾಜಿ ಶಾಸಕ ಅಶೋಕ್ ಮಹದೇವಪ್ಪ ಪಟ್ಟಣ್ ರವರಿಗೆ ಟಿಕೆಟ್ ನೀಡಿದೆ.

ಬೆಳಗಾವಿ ಗ್ರಾಮೀಣ – ಸಂಜಯ ಪಾಟೀಲ

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯ ಮೂಲ ಕಾರ್ಯಕರ್ತರಿಗೆ ಟಿಕೆಟ್ ನೀಡದೇ ಹೊಸಬರಾಗಿರುವ ನಾಗೇಶ ಮನ್ನೋಳಕರಗೆ ಟಿಕೆಟ್ ಘೋಷಿಸಿದ್ದನ್ನು ಖಂಡಿಸಿ ಬಿಜೆಪಿಯ ಜಿಲ್ಲಾ ಹಾಗೂ ಗ್ರಾಮೀಣ ಮಂಡಳದ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳು ಬುಧವಾರ ಸಾಮೂಹಿಕವಾಗಿ ರಾಜೀನಾಮೆ ನೀಡುವ ಮೂಲಕ ಆಕ್ರೋಶ ಹೊರ ಹಾಕಿದರು. ಮಾಜಿ ಶಾಸಕ ಸಂಜಯ ಪಾಟೀಲರವರಿಗೆ ಇಲ್ಲಿ ಟಿಕೆಟ್ ನಿರಾಕರಿಸಲಾಗಿದೆ.

ಬೈಲಹೊಂಗಲ – ಡಾ. ವಿಶ್ವನಾಥ ಪಾಟೀಲ್

ಡಾ. ವಿಶ್ವನಾಥ ಪಾಟೀಲ್ ಅವರು ಬೈಲಹೊಂಗಲ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜಗದೀಶ್ ಮೆಟಗುಡ್ಡ ಕೂಡ ಆಕಾಂಕ್ಷಿಯಾಗಿದ್ದರು. ಹೀಗಾಗಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಮತದಾನ ನಡೆಸಲಾಗಿತ್ತು. ವೀಕ್ಷಕರ ಸಮ್ಮುಖದಲ್ಲೇ ಈ ಮತದಾನ ನಡೆದಿತ್ತು. ಈ ವೇಳೆ 109 ಮತಗಳ ಪೈಕಿ 98 ಮತ ಡಾ. ವಿಶ್ವನಾಥ ಪಾಟೀಲ್ ರವರನ್ನು ಬಿಟ್ಟು ಜಗದೀಶ್‌ ಚನ್ನಪ್ಪ ಮೆಟಗುಡ್ಡರವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇದನ್ನು ವಿರೋಧಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 600ಕ್ಕೂ ಹೆಚ್ಚುಕಾರ್ಯಕರ್ತರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಖಾನಾಪುರ – ಡಾ.ಸೋನಾಲಿ ಸರನೋಬತ್‌

ಬಿಜೆಪಿ ಟಿಕೆಟ್‌ ಸಿಗುತ್ತದೆ ಎಂಬ ಭರವಸೆಯಲ್ಲಿದ್ದ ನನಗೆ ತುಂಬ ಆಘಾತವಾಗಿದೆ. ನನ್ನೊಂದಿಗೆ ಇಷ್ಟು ದಿನ ಇದ್ದ ಕಾರ್ಯಕರ್ತರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ಹೆಜ್ಜೆ ಇಡುತ್ತೇನೆ’ ಎಂದು ಬಿಜೆಪಿ ನಾಯಕಿ ಡಾ.ಸೋನಾಲಿ ಸರನೋಬತ್‌ ಹೇಳಿದರು. ಅದೇ ರೀತಿ ಮತ್ತೋರ್ವ ಟಿಕೆಟ್ ಆಕಾಂಕ್ಷಿತಯಾಗಿದ್ದ ಅರವಿಂದ್ ಪಾಟೀಲ್ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಇಲ್ಲಿ ವಿಠ್ಠಲ್ ಹಲಗೇಕಾರ್‌ರವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಸವದತ್ತಿ ಎಲ್ಲಮ್ಮ – ಬಸವರಾಜ ಪಟ್ಟಣಶೆಟ್ಟಿ

ಟಿಕೆಟ್ ವಂಚಿತ ಬಸವರಾಜ ಪಟ್ಟಣಶೆಟ್ಟಿಯವರು ಸಹ ಪಕ್ಷೇತರರಾಗಿ ಸ್ಪರ್ಧಿಸಬಹುದು ಎನ್ನಲಾಗುತ್ತಿದೆ. ಇಲ್ಲಿ ರತ್ನ ವಿಶ್ವನಾಥ್ ಮಾಮನಿಯವರಿಗೆ ಟಿಕೆಟ್ ಸಿಕ್ಕಿದೆ.

ಇದನ್ನೂ ಓದಿ: ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಇದುವರೆಗೂ ಬಂಡಾಯವೆದ್ದ ಆಕಾಂಕ್ಷಿಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...