Homeಮುಖಪುಟಮಧ್ಯಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರ್‌ಎಸ್‌ಎಸ್‌ ಮುಖಂಡ, ಬಂಧನ

ಮಧ್ಯಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರ್‌ಎಸ್‌ಎಸ್‌ ಮುಖಂಡ, ಬಂಧನ

ತನ್ನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸೆದ್ದು, ಸಂಬಂಧಗಳಿಗೆ ಮಸಿ ಬಳಿದಿರುವ ಈತ ರಾಕ್ಷಸರಿಗಿಂತ ಕಡೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಟ್ವೀಟ್ ಮಾಡಿದೆ.

- Advertisement -
- Advertisement -

ಮಧ್ಯಪ್ರದೇಶದ ಬಿಜೆಪಿ, ಆರ್‌ಎಸ್‌ಎಸ್‌ ಮುಖಂಡನೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ನಡೆದಿದೆ. ತಂದೆ ಮಗಳ ಸಂಬಂಧಕ್ಕೆ ಮಸಿ ಬಳಿದಿರುವ ಆರೋಪಿಯ ಕೃತ್ಯವನ್ನು ಕಾಂಗ್ರೆಸ್ ಖಂಡಿಸಿದೆ.

ತನ್ನ ಸ್ವಂತ ಮಗಳ ಮೇಲೆ ಅತ್ಯಾಚಾರ ಎಸೆದ್ದು, ಸಂಬಂಧಗಳಿಗೆ ಮಸಿ ಬಳಿದಿರುವ ಈತ ರಾಕ್ಷಸರಿಗಿಂತ ಕಡೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಮಧ್ಯಪ್ರದೇಶದ ಪೊವಾಯ್ ಪೊಲೀಸ್ ಠಾಣಾ ವ್ಯಾಪ್ತಿಯ ಮುದ್ವಾರಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಆರೋಪಿಯನ್ನು ಬಿಜೆಪಿ, ಆರ್‌ಎಸ್‌ಎಸ್ ಮುಖಂಡ ಸತೀಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಮಗಳು ಪೊಲೀಸರಿಗೆ ದೂರು ನೀಡಿದ್ದಾರೆ.

ತಂದೆಯೇ ತನ್ನನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದನ್ನು ಪ್ರತಿಭಟಿಸಿದ 17 ವರ್ಷದ ಅಪ್ರಾಪ್ತ ಬಾಲಕಿ, ಕಷ್ಟಪಟ್ಟು ಪೊಲೀಸ್ ಠಾಣೆ ತಲುಪಿ ಅಲ್ಲಿ ತನ್ನ ತಂದೆಯ ದುಷ್ಕೃತ್ಯಗಳನ್ನು ವಿವರಿಸಿದ್ದಾಳೆ ಎಂದು ಹೇಳಲಾಗುತ್ತಿದೆ. ಬಾಲಕಿಯ ದೂರಿನ ಮೇರೆಗೆ ಪೊಲೀಸರು ಸಂಬಂಧಪಟ್ಟ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

ಎಫ್‌ಐಆರ್ ದಾಖಲಾದ ಬಳಿಕ, ಆರೋಪಿಯ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿವೆ. ಬಿಜೆಪಿ ರಾಜ್ಯ ಅಧ್ಯಕ್ಷ ವಿ.ಡಿ.ಶರ್ಮಾ ಸೇರಿದಂತೆ ಇತರ ಹಿರಿಯ ಬಿಜೆಪಿ ನಾಯಕರೊಂದಿಗಿನ ಆರೋಪಿಯ ಚಿತ್ರಗಳು ವೈರಲ್ ಆಗುತ್ತಿವೆ.

ಮಧ್ಯಪ್ರದೇಶ ಕಾಂಗ್ರೆಸ್ ಟ್ವೀಟ್ ಮಾಡಿ, ‘ಬಿಜೆಪಿ,ಆರ್‌ಎಸ್‌ಎಸ್‌ನ ಅಸಹ್ಯಕರ ಮುಖ ಇದು. ಬಿಜೆಪಿ ಮುಖಂಡರು ತಮ್ಮ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ. ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಕೆಟ್ಟ ರೂಪ ರಾಜ್ಯದ ಪನ್ನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಬಿಜೆಪಿ ಮುಖಂಡ ಸತೀಶ್ ಮಿಶ್ರಾ ತಮ್ಮ ಸ್ವಂತ ಮಗಳ ಮೇಲೆ ಅತ್ಯಾಚಾರ ಮಾಡಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಜೀ, ಈ ಮನುಷ್ಯ ರಾಕ್ಷಸನಿಗಿಂತ ಕಡೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

’ಮುದ್ವಾಯಿ ಗ್ರಾಮದ 17 ವರ್ಷದ ಬಾಲಕಿಯೊಬ್ಬಳು ತನ್ನ ತಂದೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊವಾಯ್  ಠಾಣೆಗೆ ದೂರು ನೀಡಿದ್ದಾರೆ. ಪೊವಾಯ್ ಪೊಲೀಸ್ ಠಾಣೆಯಲ್ಲಿ ‌ಎಫ್‌ಐಆರ್‌ ದಾಖಲಿಸಿಕೊಂಡು, ಅಪ್ರಾಪ್ತ ಬಾಲಕಿಗೆ ಭದ್ರತೆ ಒದಗಿಸಿದ್ದಾರೆ. ಜೊತೆಗೆ, ಶೀಘ್ರವೇ ಕ್ರಮ ಕೈಗೊಂಡು, ಪನ್ನಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮರಾಜ್ ಮೀನಾ ಅವರ ನೇತೃತ್ವದಲ್ಲಿ ತಂಡವನ್ನು ರಚಿಸುವ ಮೂಲಕ, ಅಮಾನವೀಯ ಕೃತ್ಯ ಎಸಗಿ  ಪರಾರಿಯಾಗಿದ್ದ ಆರೋಪಿ ಸತೀಶ್ ಮಿಶ್ರಾ ಅವರನ್ನು ಮುದ್ವಾರಿ ಬಳಿ ಬಂಧಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...