Homeಕರ್ನಾಟಕಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ - ಮಂದಿರಗಳಿಗೆ ದುರುಪಯೋಗ!

ಬಿಜೆಪಿ ಆಡಳಿತದ ಅವಧಿಯಲ್ಲಿ ನಿರಾವರಿ ನಿಗಮದಿಂದ ₹300 ಕೋಟಿ ಮಠ – ಮಂದಿರಗಳಿಗೆ ದುರುಪಯೋಗ!

- Advertisement -
- Advertisement -

ಬಿಜೆಪಿ ಆಡಳಿತದ ಅವಧಿಯಲ್ಲಿ, 2020 ರಿಂದ 2023 ರ ನಡುವೆ ನೀರಾವರಿ ಕಾಮಗಾರಿಗಳಿಗಾಗಿ ಸ್ಥಾಪಿಸಲಾಗಿರುವ ಕರ್ನಾಟಕ ನೀರಾವಾರಿ ನಿಗಮ ಲಿಮಿಟೆಡ್ (KNNL)ನ ಸುಮಾರು 300 ಕೋಟಿ ರೂ. ಗಳನ್ನು ಬೇರೆ ಉದ್ದೇಶಗಳಿಗಾಗಿ ಖರ್ಚು ಮಾಡಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್‌ ಬುಧವಾರ ವರದಿ ಮಾಡಿದೆ. KNNL ಹಣವನ್ನು ಸಮುದಾಯ ಭವನಗಳು, ಮಠಗಳು ಮತ್ತು ಬೆರಳೆಣಿಕೆಯಷ್ಟು ಶಾದಿ ಮಹಲ್‌ಗಳನ್ನು ನಿರ್ಮಿಸಲು ಖರ್ಚು ಮಾಡಲಾಗಿದೆ ಎಂದು ವರದಿ ಹೇಳಿದೆ. ಬಿಜೆಪಿ ಅವಧಿಯಲ್ಲಿ

ಶಿವಮೊಗ್ಗ ಜಿಲ್ಲೆಯ ಶಾಸಕರು ಮತ್ತು ಸಂಸದರ ಕೋರಿಕೆಯ ಆಧಾರದ ಮೇಲೆ ಈ ಹಣವನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ವರದಿ ಉಲ್ಲೇಖಿಸಲಾಗಿದೆ. ಬಿಜೆಪಿ ಸರ್ಕಾರದ ಈ ನೀತಿಯಿಂದ ಕಳೆದ ಒಂದು ವರ್ಷದಲ್ಲಿ ಕೆಎನ್‌ಎನ್‌ಎಲ್‌ನಲ್ಲಿ ನಗದು ಕೊರತೆಯಾಗಿದ್ದು, ಕಾಲುವೆಗಳ ದುರಸ್ತಿಯಂತಹ ನಿರ್ಣಾಯಕ ಕೆಲಸಗಳ ಮೇಲೆ ಪರಿಣಾಮ ಬೀರಿದೆ ಎಂದು ವರದಿ ಉಲ್ಲೇಖಿಸಿದೆ. ಬಿಜೆಪಿ ಅವಧಿಯಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಗುತ್ತಿಗೆದಾರರಿಗೆ ಪಾವತಿ ಮಾಡಬೇಕಾಗಿರುವ ಬಾಕಿ 6,000 ಕೋಟಿ ರೂ.ಗಳಷ್ಟು ಇವೆ. 2 ಕೋಟಿ ರೂ.ಗಳ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಹಲವು ತಿಂಗಳು ಕಾಯಿಸಿ ನಂತರ 8 ಲಕ್ಷ ರೂ. ನೀಡಲಾಗಿದೆ. ಶಿವಮೊಗ್ಗ ಒಂದೆ ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಹಲವು ಯೋಜನೆಗಳಿಗೆ ಸುಮಾರು 2 ಸಾವಿರ ಕೋಟಿ ರೂ.ಗಳ ಅಗತ್ಯವಿದೆ” ಎಂದು KNNL ಅಧಿಕಾರಿಗಳು ಹೇಳಿದ್ದಾಗಿ ಪತ್ರಿಕೆ ವರದಿ ಮಾಡಿದೆ. ಬಿಜೆಪಿ ಅವಧಿಯಲ್ಲಿ

ಆಗಿನ ಶಿಕಾರಿಪುರ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಮತ್ತು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಮನವಿ ಮೇರೆಗೆ ಈ ಹಣವನ್ನು ನೀರಾವರಿಯೇತರ ಕಾಮಗಾರಿಗಳನ್ನು ಬಳಸಿಕೊಳ್ಳಲಾಗಿದೆ ಎಂದು ದಾಖಲೆಗಳು ತೋರಿಸುತ್ತವೆ ಎಂದು ವರದಿ ಉಲ್ಲೇಖಿಸಿದೆ.

KNNL ಮಂಡಳಿಯು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿದ್ದು, ತುಂಗಾ ಮೇಲ್ದಂಡೆ ಯೋಜನೆಯ ಜಲಾನಯನ ಪ್ರದೇಶಗಳಿಗೆ ಮೂಲ ಸೌಕರ್ಯ ಕಲ್ಪಿಸುವ ನೆಪದಲ್ಲಿ ಮಂಡಳಿಯು ಸಮುದಾಯ ಭವನ ಹಾಗೂ ಮಠಗಳ ನವೀಕರಣಕ್ಕೆ ಸುಮಾರು 300 ಕೋಟಿ ರೂ. ಖರ್ಚು ಮಾಡಿದೆ ಎಂದು ವರದಿ ಹೇಳಿದೆ.

KNNL ಹಣದಲ್ಲಿ ಬಸವತತ್ವ ಮಂದಿರ, ರಾಘವೇಂದ್ರ ಸ್ವಾಮಿ ದೇವಸ್ಥಾನ, ಸದ್ಗುರು ಸೇವಾ ಟ್ರಸ್ಟ್, ಬಸವೇಶ್ವರ ದೇವಸ್ಥಾನ, ಕಾಲಭೈರವೇಶ್ವರ ದೇವಸ್ಥಾನ, ನಂದಿಗುಡಿ ಬೃಹನ್ಮಠ, ತರಳಬಾಳು ಮಠ ಸೇರಿದಂತೆ ಧಾರ್ಮಿಕ ಸಭಾಂಗಣಗಳು ಮತ್ತು ಸಮುದಾಯ ಭವನಗಳ ನಿರ್ಮಾಣಕ್ಕೆ ಬಳಸಲಾಗಿದೆ ಎಂದು ಅದು ಹೇಳಿದೆ.

ಈ ಹಣದಲ್ಲಿ ಬೆಳಗಾವಿ ಮತ್ತು ದಾವಣಗೆರೆಯಲ್ಲಿ ಬೆರಳೆಣಿಕೆಯಷ್ಟು ಕಾಮಗಾರಿಗಳನ್ನು ಮಾಡಲಾಗಿದ್ದು, ಉಳಿದೆಲ್ಲ ಕಾಮಗಾರಿಗಳನ್ನು ಶಿವಮೊಗ್ಗದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಬ್ರಾಹ್ಮಣರು, ಬಿಲ್ಲವರು, ವಿಶ್ವಕರ್ಮ, ವಾಲ್ಮೀಕಿ ಮತ್ತು ಇತರ ಸಮುದಾಯಗಳ ಕೆಲವು ಸಭಾಂಗಣಗಳನ್ನು ನಿರ್ಮಿಸಲಾಗಿದ್ದು, ಉಳಿದವು ರಸ್ತೆಗಳ ನಿರ್ಮಾಣಕ್ಕೆ ಸಂಬಂಧಿಸಿ ಬಳಸಲಾಗಿವೆ.

ಇದನ್ನೂ ಓದಿ: ‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

‘ಈಶಾನ್ಯ ಭಾರತದಲ್ಲಿ ಕೇವಲ 38 ಜನರ ಹತ್ಯೆ!’ | ಸ್ಥಾಯಿ ಸಮಿತಿ ಮುಂದೆ ಸುಳ್ಳು ಹೇಳಿದ ಕೇಂದ್ರ ಗೃಹ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...