Homeಮುಖಪುಟಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

ಇನ್ನೂ ಆವಿಷ್ಕಾರವಾಗದ ಕೊರೊನಾ ಲಸಿಕೆಯನ್ನು ಉಚಿತ ನೀಡುತ್ತೇವೆಂದ BJP!

’ಮಹಾಘಟಬಂಧನ್’ ಮೈತ್ರಿ ಗೆದ್ದರೆ 10 ಲಕ್ಷ ಸರ್ಕಾರಿ ಉದ್ಯೋಗಗಳು ನೀಡುತ್ತೇವೆ ಎಂದಿದ್ದ ಪ್ರತಿಪಕ್ಷಗಳನ್ನು BJP ಮಿತ್ರಪಕ್ಷದ ನಾಯಕ ನಿತೀಶ್ ಕುಮಾರ್‌ ಅಪಹಾಸ್ಯ ಮಾಡಿದ್ದರು, ಇದೀಗ BJP 19 ಲಕ್ಷ ಉದ್ಯೋಗ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದೆ

- Advertisement -
- Advertisement -

ಮುಂದಿನ ವಾರದಿಂದ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ತನ್ನ ಪ್ರಣಾಳಿಕೆಯಲ್ಲಿ 19 ಲಕ್ಷ ಉದ್ಯೋಗಗಳು ಸೇರಿದಂತೆ ಎಲ್ಲರಿಗೂ ಉಚಿತ ಕೊರೊನಾ ವೈರಸ್ ಲಸಿಕೆ ನೀಡುವ ಭರವಸೆ ನೀಡಿದೆ. ಜೊತೆಗೆ ಮುಂದಿನ ಐದು ವರ್ಷಗಳ ಕಾಲ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪಕ್ಷ ಒತ್ತಿ ಹೇಳಿದೆ.

ಪ್ರತಿಪಕ್ಷ ನಾಯಕ ತೇಜಶ್ವಿ ಯಾದವ್ ತಮ್ಮ ”ಮಹಾಘಟಬಂಧನ್” ಮೈತ್ರಿಯೂ ಗೆದ್ದರೆ “10 ಲಕ್ಷ ಸರ್ಕಾರಿ ಉದ್ಯೋಗಗಳು” ನೀಡುತ್ತೇವೆ ಎಂಬ ಭರವಸೆ ನೀಡಿದ್ದರು. ಇದನ್ನು ಅಪಹಾಸ್ಯ ಮಾಡಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್, “ತೇಜಸ್ವಿ ಯಾದವ್ ಮುಗ್ದನಾಗಿದ್ದು ಆಡಳಿತದಲ್ಲಿ ಅನುಭವಿಲ್ಲ,‌‌ 10 ಲಕ್ಷ ಉದ್ಯೋಗಗಳಿಗೆ ಹೇಗೆ ಹಣ ಸಂಗ್ರಹಿಸುತ್ತಾರೆ” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ಆದರೆ ಇದೀಗ ಪ್ರತಿಪಕ್ಷಗಳನ್ನು ಮೀರಿಸಿರುವ ಬಿಜೆಪಿ 19 ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತೇವೆ ಎಂದಿದೆ. ಅಷ್ಟು ಮಾತ್ರವಲ್ಲದೆ ಇನ್ನೂ ಆವಿಷ್ಕಾರ ಮಾಡದ ಕೊರೊನಾ ಲಸಿಕೆಯನ್ನು ಉಚಿತ ನೀಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ.

ಬಿಹಾರ ಚುನಾವಣಾ ಕಣದಲ್ಲಿ ’ಉದ್ಯೋಗ’ ಕೇಂದ್ರ ಬಿಂದು ಆಗಿದ್ದು, ವಿರೋಧ ಪಕ್ಷದ ನಾಯಕ ತೇಜಶ್ವಿ ಯಾದವ್ ತಮ್ಮ ಪಕ್ಷವಾದ ರಾಷ್ಟ್ರೀಯ ಜನತಾದಳ(ಆರ್‌ಜೆಡಿ)ದ ರ್‍ಯಾಲಿಗಳಲ್ಲಿ ಉ‌ದ್ಯೋಗದ ವಿಚಾರಗಳನ್ನಿಟ್ಟು ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರ ಸರ್ಕಾರವನ್ನು ತರಾಟೆಗೆ ಪಡೆಯುತ್ತಿದ್ದಾರೆ.

ಪ್ರಣಾಳಿಕೆಯಲ್ಲಿ ಪಟ್ಟಿ ಮಾಡಲಾದ 19 ಲಕ್ಷ ಉದ್ಯೋಗಗಳ ಬಗ್ಗೆ ಮಾತನಾಡಿದ ಬಿಹಾರದ ಬಿಜೆಪಿ ಮುಖ್ಯಸ್ಥ ಸಂಜಯ್ ಜೈಸ್ವಾಲ್, “3 ಲಕ್ಷ ಶಿಕ್ಷಕರು ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಒಂದು ಲಕ್ಷ ಸೇರಿದಂತೆ ಒಟ್ಟು ನಾಲ್ಕು ಲಕ್ಷ ಉದ್ಯೋಗ ಮಾತ್ರ ಸರ್ಕಾರಿ ವಲಯದಲ್ಲಿ. ಉಳಿದ ಉದ್ಯೋಗಗಳು ಬಿಹಾರದಲ್ಲಿ ಸ್ಥಾಪಿಸುವ ಐಟಿ ಕೇಂದ್ರದಲ್ಲಿ ಹಾಗೂ ಕೃಷಿ ಕೇಂದ್ರಗಳಲ್ಲಿ ಸೃಷ್ಟಿಸುತ್ತೇವೆ” ಎಂದು ಹೇಳಿದ್ದಾರೆ.

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಚುನಾವಣೆಯ ಫಲಿತಾಂಶ ನವೆಂಬರ್ 10 ರಂದು ಪ್ರಕಟವಾಗುತ್ತದೆ.

ಇದನ್ನೂ ಓದಿ: ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...