Homeಮುಖಪುಟಪಂಜಾಬ್‌ ಸ್ಥಳೀಯ ಚುನಾವಣಾ ಫಲಿತಾಂಶ ತಿರಸ್ಕರಿಸುತ್ತೇವೆ ಎಂದ ಬಿಜೆಪಿ

ಪಂಜಾಬ್‌ ಸ್ಥಳೀಯ ಚುನಾವಣಾ ಫಲಿತಾಂಶ ತಿರಸ್ಕರಿಸುತ್ತೇವೆ ಎಂದ ಬಿಜೆಪಿ

ಚುನಾವಣೆಯಲ್ಲಿ ಕೃಷಿ ಕಾನೂನಿನ ವಿರುದ್ದ ರೈತರ ಆಕ್ರೋಶ ಹೊರಬಿದ್ದಿದ್ದು ಬಿಜೆಪಿ ಧೂಳಿಪಟವಾಗಿತ್ತು

- Advertisement -
- Advertisement -

ಇತ್ತೀಚೆಗೆ ಪಂಜಾಬ್‌ನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪಲಿತಾಂಶವನ್ನು ತಿರಸ್ಕರಿಸುವುದಾಗಿ ರಾಜ್ಯದ ಬಿಜೆಪಿ ಮುಖ್ಯಸ್ಥ ಅಶ್ವನಿ ಶರ್ಮಾ ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ.

ದೇಶವ್ಯಾಪಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದ ನಂತರ ಪಂಜಾಬ್‌ ಇದೆ ಮೊದಲ ಬಾರಿಗೆ ಚುನಾವಣೆ ಎದುರಿಸಿತ್ತು. ಚುನಾವಣೆಯಲ್ಲಿ ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದ್ದು, 7 ಮುನ್ಸಿಪಲ್ ಕಾರ್ಪೋರೇಷನ್‌ಗಳಲ್ಲಿ ಏಳನ್ನೂ ಕಾಂಗ್ರೆಸ್ ಗೆದ್ದುಕೊಂಡಿತ್ತು.

ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿಯ ಪಂಜಾಬ್‌ ಮುಖ್ಯಸ್ಥ ಅಶ್ವನಿ ಶರ್ಮಾ, “ಸ್ಥಳೀಯ ಸಂಸ್ಥೆಗಳ ಫಲಿತಾಂಶಗಳನ್ನು ನಾವು ತಿರಸ್ಕರಿಸುತ್ತೇವೆ. ಸರ್ಕಾರಿ ಯಂತ್ರೋಪಕರಣಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಈ ಚುನಾವಣೆಗಳಲ್ಲಿ ಜಯಗಳಿಸಿತು. ಇದು ಪ್ರಜಾಪ್ರಭುತ್ವದ ಕಗ್ಗೋಲೆ” ಎಂದು ಹೇಳಿದ್ದಾರೆ.

‌ಫೆಬ್ರವರಿ 14 ರಂದು ರಾಜ್ಯದ 109 ನಗರ ಪಂಚಾಯತ್ ಹಾಗೂ ಮುನ್ಸಿಪಲ್ ಕೌನ್ಸಿಲ್ ಮತ್ತು 8 ಮುನಿಸಿಪಲ್ ಕಾರ್ಪೋರೇಷನ್‌‌‌ಗಳಲ್ಲಿ ಚುನಾವಣೆ ನಡೆದಿತ್ತು. ಅವುಗಳಲ್ಲಿ 7 ಮುನ್ಸಿಪಲ್ ಕಾರ್ಪೋರೇಷನ್‌ಗಳಾದ ಮೊಗ್ಗ, ಹೋಶಿಯಾರ್‌ಪುರ್, ಕಪುರ್ಥಾಲಾ, ಅಬೋಹರ್, ಪಠಾಣ್‌ಕೋಟ್, ಬತಾಲ ಮತ್ತು ಬಟಿಂಡಾ ಮುನ್ಸಿಪಲ್ ಕಾರ್ಪೋರೇಷನ್‌ಗಳು ಕಾಂಗ್ರೆಸ್ ಪಾಲಾಗಿವೆ.

ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ದಲಿತ ಸಮುದಾಯದ ಆಕ್ರೋಶಕ್ಕೆ ಮಣಿದ ರಾಜ್ಯ ಸರ್ಕಾರ; ‘ಪ್ರಬುದ್ಧ’ ಯೋಜನೆ ಪುನರಾರಂಭ

0
ಎಸ್‌ಸಿ-ಎಸ್‌ಟಿ ಮತ್ತು ಇತರ ದುರ್ಬಲ ಸಮುದಾಯಗಳ ವಿದ್ಯಾರ್ಥಿಗಳು ತಮ್ಮ ಸ್ನಾತಕೋತ್ತರ ಮತ್ತು ಪಿಎಚ್‌ಡಿ ಕೋರ್ಸ್‌ಗಳನ್ನು ವಿದೇಶದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ನಡೆಸಲು ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಆರ್ಥಿಕ ಯೋಜನೆಯಾದ 'ಪ್ರಬುದ್ಧ' ಕಾರ್ಯಕ್ರಮವನ್ನು ನಿಲ್ಲಿಸಿದ್ದ...