Homeಮುಖಪುಟಪುದುಚೇರಿಯಲ್ಲಿ ಸರ್ಕಾರ ರಚಿಸಲ್ಲ ಎಂದ ಬಿಜೆಪಿ: ಕೇಂದ್ರಾಡಳಿತ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ?

ಪುದುಚೇರಿಯಲ್ಲಿ ಸರ್ಕಾರ ರಚಿಸಲ್ಲ ಎಂದ ಬಿಜೆಪಿ: ಕೇಂದ್ರಾಡಳಿತ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ?

- Advertisement -
- Advertisement -

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಸರ್ಕಾರ ಪತನಗೊಂಡಿದೆ. ಆದರೆ ಸರ್ಕಾರ ರಚಿಸಲು ಬಿಜೆಪಿ ಒಪ್ಪದ ಕಾರಣಕ್ಕೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬರಲಿದೆ.

ವಿಧಾನಸಭೆಯಲ್ಲಿ ವಿಶ್ವಾಸ ಮತ ಕಳೆದುಕೊಂಡ ನಂತರ ಮುಖ್ಯಮಂತ್ರಿ ವಿ ನಾರಾಯಣಸಾಮಿ ಇಂದು (ಫೆ. 22) ರಾಜೀನಾಮೆಯನ್ನು ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರ್‌ರಾಜನ್ ಅವರಿಗೆ ನೀಡಿದರು.

ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಬಿಜೆಪಿ ಅಧ್ಯಕ್ಷ ವಿ ಸಾಮಿನಾಥನ್, “ನಾವು ಈ ಹಂತದಲ್ಲಿ ಸರ್ಕಾರವನ್ನು ರಚಿಸಲು ಪ್ರಯತ್ನಿಸುವುದಿಲ್ಲ. ಮುಂಬರುವ ಚುನಾವಣೆಗಳಲ್ಲಿ ಜನರ ಆಶೀರ್ವಾದ ಮತ್ತು ಮೋದಿಯವರ ನಾಯಕತ್ವದೊಂದಿಗೆ, ಎನ್‌ಡಿಎ ಮೈತ್ರಿಯ ಭಾಗವಾಗಿರುವ ಎಐಎಡಿಎಂಕೆ ಜೊತೆ ಸರ್ಕಾರ ರಚಿಸಲಿದ್ದೇವೆ. ಇದು ಪುದುಚೇರಿಯ ಜನರಿಗೆ ಉಜ್ವಲ ಭವಿಷ್ಯವನ್ನು ನೀಡುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುದುಚೇರಿ ಕಾಂಗ್ರೆಸ್ ಸರ್ಕಾರ ಪತನ – ಮುಖ್ಯಮಂತ್ರಿ ರಾಜೀನಾಮೆ

ಈ ಸರ್ಕಾರದ ಪತನದೊಂದಿಗೆ ಕೇಂದ್ರಾಡಳಿತ ಪ್ರದೇಶದ ಇತಿಹಾಸದಲ್ಲಿ ಕೆಟ್ಟ ಅಧ್ಯಾಯ ಕೊನೆಗೊಂಡಿದೆ ಎಂದು ಬಿಜೆಪಿ ಬಣ್ಣಿಸಿದೆ.

“ಕಳೆದ ಐದು ವರ್ಷಗಳಲ್ಲಿ ಕೇಂದ್ರಾಡಳಿತದ ಹಣಕಾಸನ್ನು ಲೂಟಿ ಮಾಡಲಾಗಿದೆ. ಉದ್ಯೋಗಗಳು, ಪಡಿತರ, ಆರೋಗ್ಯ ರಕ್ಷಣೆ, ರಸ್ತೆಗಳು ಮತ್ತು ಶಿಕ್ಷಣಕ್ಕಾಗಿ ಕೇಂದ್ರವು ಕಳುಹಿಸಿದ ಹಣವನ್ನು ದುರುಪಯೋಗಪಡಿಸಲಾಗಿದೆ” ಎಂದು ಸಾಮಿನಾಥನ್ ಆರೋಪಿಸಿದ್ದಾರೆ.

“ರಾಹುಲ್ ಗಾಂಧಿಯವರ ಭೇಟಿಯ ಸಮಯದಲ್ಲಿ ಬಡ ಮಹಿಳೆಯರು ಚಂಡಮಾರುತದ ಪರಿಣಾಮದಿಂದ ಬಳಲುತ್ತಿರುವ ಬಗ್ಗೆ ದೂರು ನೀಡಿರುವುದನ್ನು ನೀವು ಕಂಡಿದ್ದೀರಿ. ಭ್ರಷ್ಟಾಚಾರ ಮತ್ತು ಶೋಷಣೆಯ ಸಂಸ್ಕೃತಿಯನ್ನು ಮಾತ್ರ ಕಾಂಗ್ರೆಸ್ ಮತ್ತು ಡಿಎಂಕೆ ನೀಡಿದೆ. ಪುದುಚೇರಿಯ ಜನರು ಮುಂಬರುವ ಚುನಾವಣೆಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ” ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 25 ರಂದು ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.


ಇದನ್ನೂ ಓದಿ: ‘ಇದೇನಾ ಅಚ್ಚೇ ದಿನ್’- ಮುಂಬೈಯ ಬೀದಿ ಬೀದಿಗಳಲ್ಲಿ ಬ್ಯಾನರ್‌ ಅಳವಡಿಸಿದ ಶಿವಸೇನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...