ಭ್ರಷ್ಟಾಚಾರದ ಆರೋಪ: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ಗೆ ಬಿಜೆಪಿಯಿಂದ ಲೀಗಲ್ ನೋಟಿಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ "ನಾವು ಮಾಡಿರುವ ಆರೋಪಗಳು ಸುಳ್ಳಾಗಿದ್ದರೆ ನನ್ನನ್ನು ನೇಣಿಗೇರಿಸಿ ಅಥವಾ ದೂರು ದಾಖಲಿಸಿ" ಎಂದು ಸವಾಲು ಹಾಕಿದ್ದಾರೆ.

0
32

ಕೊರೊನಾ ವೈದ್ಯಕೀಯ ಸಾಮಗ್ರಿ ಖರೀದಿ ವಿಚಾರದಲ್ಲಿ ಬಿಜೆಪಿ ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರಿಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್ ಲೀಗಲ್ ನೋಟಿಸ್ ನೀಡಿದ್ದಾರೆ.

ಕೊರೊನಾ ಸಾಂಕ್ರಮಿಕದ ನಡುವೆ ಸರ್ಕಾರ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 2 ಸಾವಿರ ಕೋಟಿ ಭ್ರಷ್ಟಾಚಾರ ನಡೆಸಿದೆ ಎಂದು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಜಂಟಿ ಪತ್ರಿಕಾಗೋಷ್ಟಿ ನಡೆಸಿ ಆರೋಪಿಸಿದ್ದರು.

ಸಿದ್ದರಾಮಯ್ಯನವರು ಸರ್ಕಾರಕ್ಕೆ 20 ಭಾರೀ ಪತ್ರ ಬರೆದರೂ ಉತ್ತರ ಬಂದಿಲ್ಲ ಎನ್ನುತ್ತಾರೆ. ಅವರು ಯಾವ ಅಂಕಿ ಅಂಶಗಳ ಮೂಲಕ 4 ಸಾವಿರ ಕೋಟಿ ಖರ್ಚಾಗಿದೆ ಹಾಗೂ 2 ಸಾವಿರ ಕೋಟಿ ಅಕ್ರಮ ನಡೆದಿದೆ ಎಂದು ಹೇಳುತ್ತಾರೆ? ಅವರ ಬಳಿ ಆಧಾರಗಳಿವೆಯೇ ಎಂದು ಎನ್. ರವಿಕುಮಾರ್ ಪ್ರಶ್ನಿಸಿದ್ದಾರೆ.

ಈ ತರಹದ ಸುಳ್ಳು ಆರೋಪಗಳು ಮಾಡಿದ್ದರಿಂದ ಇಬ್ಬರಿಗೂ ನೋಟಿಸ್ ನೀಡಲಾಗಿದೆ. 15 ದಿನಗಳಲ್ಲಿ ಉತ್ತರಿಸ ಬೇಕೆಂದು ಅವರು ಆಗ್ರಹಿಸಿದ್ದಾರೆ. ನೀವು ಕೇಳಿದ ಎಲ್ಲಾ ಮಾಹಿತಿಗಳನ್ನು ಸರ್ಕಾರ ಕೊಡಲು ಸಿದ್ದವಿತ್ತು. ಯಾವುದೆ ಅಕ್ರಮ ನೆಡಿದಿಲ್ಲವಾದ್ದರಿಂದ ಹತಾಶರಾದ ಅವರು ಸುಳ್ಳುಗಳನ್ನು ಹೇಳುವ ಮೂಲಕ ಸರ್ಕಾರಕ್ಕೆ ಕಪ್ಪು ಮಸಿ ಬಳಿಯಲು ಈ ಆರೋಪಗಳನ್ನು ಮಾಡಿದ್ದಾರೆ ಎಂದು ರವಿಕುಮಾರ್ ಹೇಳಿದ್ದಾರೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಬೆಲೆ ಬಾಳುವ ಹ್ಯೂಬ್ಲೊಟ್ ವಾಚ್ ಹೇಗೆ ಬಂತು ಎಂಬುದಕ್ಕೆ ಇನ್ನೂ ಉತ್ತರ ಕೊಟ್ಟಿಲ್ಲ, ಡಿ.ಕೆ ಶಿವಕುಮಾರ್‌ಗೆ ಅಲ್ಪಾವಧಿಯಲ್ಲಿ ಇಷ್ಟೊಂದು ಆಸ್ತಿ ಹೇಗೆ ಬಂತು ಎಂದು ಉತ್ತರ ಕೊಟ್ಟಿಲ್ಲ, ನೀವು ಯಾವ ನೈತಿಕತೆ ಆಧಾರಲ್ಲಿ ಜೋತೆಗಿದ್ದಿರಿ? ಎಂದು ಅವರು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಸರ್ಕಾರ ಜನಮನ್ನಣೆಯಿಂದ ಒಂದು ವರ್ಷ ಪೂರೈಸಿದೆ, ಅದನ್ನು ಸಹಿಸದೆ ಹೊಟ್ಟೆ ಉರಿಯಿಂದ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ರವಿಕುಮಾರ್ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ “ನಾವು ಮಾಡಿರುವ ಆರೋಪಗಳು ಸುಳ್ಳಾಗಿದ್ದರೆ ನನ್ನನ್ನು ನೇಣಿಗೇರಿಸಿ ಅಥವಾ ದೂರು ದಾಖಲಿಸಿ” ಎಂದು ಸವಾಲು ಹಾಕಿದ್ದಾರೆ.

ವೈದ್ಯಕೀಯ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬುದರ ಬಗ್ಗೆ ಎಲ್ಲಾ ದಾಖಲೆಗಳನ್ನು ನೀಡಲು ಸಿದ್ದರಿದ್ದೇವೆ. ನ್ಯಾಯಾಧೀಶರ ನೇತೃತ್ವದಲ್ಲಿ ವಿಚಾರಣೆ ನಡೆಯಲಿ ಎಂದು ಡಿಕೆಶಿ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿಗಳ ಕೋವಿಡ್ ಸಂದರ್ಭದಲ್ಲಿ ಸರ್ಕಾರದೊಂದಿಗೆ ಪ್ರತಿಪಕ್ಷಗಳು ಸ್ಪಂದಿಸಬೇಕೆಂದು ಮನವಿ ಮಾಡುತ್ತಾರೆ. ಜನರು ಸಾಯುತ್ತಿರುವಾಗಲೂ ಹಣ ಲೂಟಿ ಹೊಡೆಯುವ ಸರ್ಕಾರಕ್ಕೆ ಯಾವ ರೀತಿ ಸ್ಪಂದಿಸಬೇಕೆಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಬಲಪಂಥೀಯ ಧೋರಣೆಯ ಫೇಸ್‌ಬುಕ್ ಸೆನ್ಸಾರ್‌ಶಿಪ್‌ಗೆ ಮತ್ತೊಂದು ಹೆಸರು ‘ತಾಂತ್ರಿಕ ದೋಷ’ 

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here