Homeಮುಖಪುಟಬಿಜೆಪಿ ‘ಸರಕಾರಗಳ ಸರಣಿ ಕೊಲೆಗಾರ’: ಕೇಜ್ರಿವಾಲ್

ಬಿಜೆಪಿ ‘ಸರಕಾರಗಳ ಸರಣಿ ಕೊಲೆಗಾರ’: ಕೇಜ್ರಿವಾಲ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿಯನ್ನು “ಸರಕಾರಗಳ ಸರಣಿ ಕೊಲೆಗಾರ” ಎಂದು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ಒಬ್ಬನೇ ಒಬ್ಬ ಶಾಸಕರನ್ನು ಸೆಳೆಯಲು ಬಿಜೆಪಿ ವಿಫಲವಾಗಿದೆ ಎಂಬುದನ್ನು ಸಾಬೀತುಪಡಿಸಲು ವಿಶ್ವಾಸ ಮತ ಯಾಚನೆ ಮಾಡಲು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ. ದೆಹಲಿಯ ಎಎಪಿ ಸರ್ಕಾರ ಸೋಮವಾರ ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ನಡೆಸಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ದೆಹಲಿ ವಿಧಾನಸಭೆಯ ವಿಶೇಷ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, “ಬಿಜೆಪಿಗೆ ಒಬ್ಬೇ ಒಬ್ಬ ಶಾಸಕನನ್ನು ಸೆಳೆಯಲು ಸಾಧ್ಯವಾಗಿಲ್ಲ ಎಂಬುವುದನ್ನು ನಿರೂಪಿಸಲು ನಾನು ವಿಶ್ವಾಸ ಮತಯಾಚನೆ ಮಾಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಉರುಳಿಸಲು “ಆಪರೇಷನ್ ಕಮಲ” ಮತ್ತು ದೆಹಲಿ ಮದ್ಯದ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಂತಹ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ತನಿಖೆ ನಡೆಸುತ್ತಿರುವ ಬಗ್ಗೆ ಚರ್ಚಿಸಲು ಎಎಪಿ ಅಧಿವೇಶನವನ್ನು ಕರೆದಿದೆ.

ಸಿಸೋಡಿಯಾ ಅವರು ಬಿಜೆಪಿ ಸೇರಿದರೆ ಅವರ ವಿರುದ್ಧದ ಪ್ರಕರಣಗಳನ್ನು ಕೈಬಿಡುವುದಾಗಿ ಬಿಜೆಪಿ ಪ್ರಸ್ತಾಪಿಸಿದೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಸರ್ಕಾರ ಉರುಳಿಸಲು ಬಿಜೆಪಿ ಯತ್ನ: ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಶಾಸಕರ ಸಭೆ

ಗುರುವಾರದಂದು ಕೇಜ್ರಿವಾಲ್ ಅವರು ತಮ್ಮ ನಿವಾಸದಲ್ಲಿ ಶಕ್ತಿ ಪ್ರದರ್ಶನ ನಡೆಸಲು ಶಾಸಕರ ಸಭೆಯನ್ನು ಕರೆದಿದ್ದರು. ದೆಹಲಿ ಎಎಪಿಯ 62 ಶಾಸಕರಲ್ಲಿ 53 ಮಂದಿ ಸದಸ್ಯರು ಇದರಲ್ಲಿ ಹಾಜರಾಗಿದ್ದರು ಮತ್ತು ಉಳಿದವವರು ಕೂಡಾ ಕೇಜ್ರಿವಾಲ್ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ ಎಂದು ಎಎಪಿ ತಿಳಿಸಿದೆ.

“ಸಿಬಿಐ ತನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದೆಯಾದರೂ ಸಿಸೋಡಿಯಾ ಅವರ ಮನೆಯಲ್ಲಿ 25 ಪೈಸೆಯೂ ಸಿಗಲಿಲ್ಲ. ಮರುದಿನ ಬಿಜೆಪಿ ನಾಯಕರೊಬ್ಬರು ಮನೀಶ್ ಅವರನ್ನು ಸಂಪರ್ಕಿಸಿ, ನಾವು ನಿಮ್ಮನ್ನು ಮುಖ್ಯಮಂತ್ರಿ ಮಾಡುತ್ತೇವೆ ಮತ್ತು ಎಎಪಿಯಿಂದ ಹೊರಬರಲು ತಲಾ 20 ಕೋಟಿ ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಮನೀಶ್ ಅದನ್ನು ತಿರಸ್ಕರಿಸಿದ್ದಾರೆ. ಇದರ ನಂತರ ಬಿಜೆಪಿ ಇತರ ಶಾಸಕರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ನನ್ನ ಪ್ರತಿಯೊಬ್ಬ ಶಾಸಕರೂ ವಜ್ರವಾಗಿದ್ದು, ಅವರನ್ನು ಖರೀದಿಸಲು ಸಾಧ್ಯವಿಲ್ಲ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಬಿಜೆಪಿ ತನ್ನ 40 ಶಾಸಕರನ್ನು ಒಡೆಯಲು ಪ್ರಯತ್ನಿಸುತ್ತಿದ್ದು, ಪ್ರತಿಯೊಬ್ಬರಿಗೂ 20 ಕೋಟಿ ನೀಡಲು ಮುಂದಾಗಿದೆ ಎಂದು ಎಎಪಿ ಆರೋಪಿಸಿದೆ. ‘‘ಬಿಜೆಪಿ ಹಲವಾರು ಸರ್ಕಾರಗಳನ್ನು ಕೆಡವಿದೆ ಮತ್ತು ಈಗ ಅವರು ದೆಹಲಿಯತ್ತ ಮುಖ ಮಾಡಿದ್ದಾರೆ. ನಮ್ಮ ದೇಶದಲ್ಲಿ ಸರ್ಕಾರಗಳ ಸರಣಿ ಕೊಲೆಗಾರ ಇದ್ದಾರೆ. ಅದೇ ಮಾದರಿಯಲ್ಲಿ ಇದು ನಡೆದಿದೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ‘40 ಶಾಸಕರ ಬೇಟೆಗೆ ಪ್ರಯತ್ನ’: ಆಪರೇಷನ್‌ ಕಮಲ ವಿಫಲ ಎಂದ ಎಎಪಿ

ಇತ್ತೀಚಿನ ವರ್ಷಗಳಲ್ಲಿ ಪ್ರತಿಪಕ್ಷದ ಸರ್ಕಾರಗಳನ್ನು ಉರುಳಿಸಲು ಬಿಜೆಪಿ 277 ಶಾಸಕರನ್ನು ಖರೀದಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಆರೋಪಿಸಿದ್ದಾರೆ. “ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ 277 ಶಾಸಕರನ್ನು ಖರೀದಿಸಿದೆ. ಆಪರೇಷನ್ ಕಮಲಕ್ಕೆ ಬಿಜೆಪಿ 5,500 ಕೋಟಿ ರೂ. ಖರ್ಚು ಮಾಡಿದೆ. ದೆಹಲಿಗೆ 800 ಕೋಟಿ ರೂ. ಇಟ್ಟುಕೊಂಡಿದೆ’’ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...