Homeಮುಖಪುಟಬಿಜೆಪಿ ಹನಿಟ್ರ್ಯಾಪ್ ಮಾಡಿ 2022ರಲ್ಲಿ ಎಂವಿಎ ಸರ್ಕಾರವನ್ನು ಉರುಳಿಸಿತು: ಸಾಮ್ನಾ

ಬಿಜೆಪಿ ಹನಿಟ್ರ್ಯಾಪ್ ಮಾಡಿ 2022ರಲ್ಲಿ ಎಂವಿಎ ಸರ್ಕಾರವನ್ನು ಉರುಳಿಸಿತು: ಸಾಮ್ನಾ

"ಗುಪ್ತ ಕ್ಯಾಮರಾಗಳು, ಪೆಗಾಸಸ್ ತರಹದ ಕಣ್ಗಾವಲು ವ್ಯವಸ್ಥೆಗಳನ್ನು ಬಳಸಲಾಗಿತ್ತು"

- Advertisement -
- Advertisement -

ಗುಪ್ತ ಕ್ಯಾಮರಾಗಳು, ಪೆಗಾಸಸ್ ತರಹದ ಕಣ್ಗಾವಲು ವ್ಯವಸ್ಥೆಗಳನ್ನು ಬಳಸಿಕೊಂಡು ಶಾಸಕರು, ಸಂಸದರನ್ನು ಹನಿಟ್ರ್ಯಾಪ್ ಮಾಡಲಾಗಿತ್ತು. ಇದು 2022ರಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರದ ಪತನಕ್ಕೆ ಕಾರಣವಾಯಿತು ಎಂದು ಶಿವಸೇನೆ (ಯುಬಿಟಿ) ಮಂಗಳವಾರ ಆರೋಪಿಸಿದೆ.

ಕೇಂದ್ರ ಸಂಸ್ಥೆಗಳ ಒತ್ತಡದಿಂದಾಗಿ ಅವಿಭಜಿತ ಶಿವಸೇನೆ ಮತ್ತು ಎನ್‌ಸಿಪಿಯ ಕೆಲವು ಶಾಸಕರು ನಿಷ್ಠೆಯನ್ನು ಬದಲಾಯಿಸಿದರು ಎಂದು ಶಿವಸೇನೆಯ (ಯುಬಿಟಿ) ಮುಖವಾಣಿ ಸಾಮ್ನಾದ ಸಂಪಾದಕೀಯ ಹೇಳಿದೆ.

ಕನಿಷ್ಠ 18 ಶಾಸಕರು ಮತ್ತು ನಾಲ್ವರು ಸಂಸದರನ್ನು ‘ಹನಿಟ್ರ್ಯಾಪ್’ ಮಾಡಲಾಗಿತ್ತು. ಅವರು ತಮ್ಮ ಇಮೇಜ್ ಉಳಿಸಿಕೊಳ್ಳಲು ಬಿಜೆಪಿಯೊಂದಿಗೆ ಕೈ ಜೋಡಿಸಿದರು ಎಂದಿದೆ.

ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಅವರು ಸಂಸದರು ಮತ್ತು ಶಾಸಕರನ್ನು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂದು ಆರೋಪಿಸಿದ್ದು, ಮಾಜಿ ವಿರೋಧ ಪಕ್ಷದ ನಾಯಕರಾದ ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಾಮ್ನಾ ಒತ್ತಾಯಿಸಿದೆ.

“ಇಸ್ರೇಲ್‌ ಮೂಲದ ಗುಪ್ತ ಕ್ಯಾಮರಾಗಳು ಮತ್ತು ಪೆಗಾಸಸ್ ತರಹದ ವ್ಯವಸ್ಥೆಯನ್ನು (ಕಣ್ಗಾವಲುಗಾಗಿ) ಪೂರ್ಣ ಪ್ರಮಾಣದಲ್ಲಿ ಬಳಸಲಾಯಿತು. ಈ (ಹನಿ) ಟ್ರ್ಯಾಪಿಂಗ್‌ನಿಂದಾಗಿ ಎಂವಿಎ ಸರ್ಕಾರ ಪತನಗೊಂಡಿತು ಎಂಬುದು ಈಗ ಸ್ಪಷ್ಟವಾಗಿದೆ” ಎಂದು ತಿಳಿಸಿದೆ.

ಬಿಜೆಪಿಯಲ್ಲಿ ಹನಿಟ್ರ್ಯಾಪ್ ಮಾಡುವ ವ್ಯವಸ್ಥೆ ಇತ್ತು ಮತ್ತು ಪೊಲೀಸರು ಕೂಡ ವಿರೋಧ ಪಕ್ಷದವರ ಮೇಲೆ ಕಣ್ಗಾವಲು ಇಟ್ಟಿದ್ದರು ಎಂದು ಸಾಮ್ನಾ ಆರೋಪಿಸಿದೆ.

ಶಿವಸೇನಾ ಸಂಸದರು ಮತ್ತು ಶಾಸಕರನ್ನು ಒಳಗೊಂಡ ಹನಿಟ್ರ್ಯಾಪಿಂಗ್‌ನ ಪುರಾವೆಗಳನ್ನು ಹೊಂದಿರುವ ಪೆನ್ ಡ್ರೈವ್ ಅನ್ನು ಏಕನಾಥ್ ಶಿಂಧೆ ಅವರಿಗೆ ಹಸ್ತಾಂತರಿಸಿದಾಗ, ಅವರು ಸೂರತ್, ಗುವಾಹಟಿ ಮತ್ತು ನಂತರ ಗೋವಾಕ್ಕೆ ಪ್ರಯಾಣ ಬೆಳೆಸಿದರು. ‘ಇದೊಂದು ರೀತಿಯ ಸಸ್ಪೆನ್ಸ್ ಥ್ರಿಲ್ಲರ್’ ಎಂದಿದೆ.

ಶಿಂಧೆ ಅವರಿಗೆ ಆರಂಭದಲ್ಲಿ ಸಂಖ್ಯಾ ಬಲದ ಕೊರತೆಯಿತ್ತು. ಆ ಸಮಯದಲ್ಲಿ ಅವರಿಗೆ ಕೇವಲ ಒಂಬತ್ತು ಅಥವಾ ಹತ್ತು ಶಾಸಕರ ಬೆಂಬಲವಿತ್ತು. ಆದಾಗ್ಯೂ, ಗೃಹ ಇಲಾಖೆಯ ಜನರು ಮತ್ತು ಅಂದಿನ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್, ಸಂಸದರು ಮತ್ತು ಶಾಸಕರನ್ನು ಬ್ಲಾಕ್‌ಮೇಲ್ ಮಾಡಿದರು ಎಂದು ಸಾಮ್ನಾ ಆರೋಪಿಸಿದೆ.

ಶಿವಸೇನೆಯ ಸಚಿವರಾದ ಸಂಜಯ್ ಶಿರ್ಸಾತ್, ಯೋಗೇಶ್ ಕದಮ್ ಮತ್ತು ದಾದಾ ಭೂಸೆ ಮತ್ತು ಅವರ ಎನ್‌ಸಿಪಿ ಸಹೋದ್ಯೋಗಿ ಮಾಣಿಕ್ ಕೊಕಟೆ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಸಂಪಾದಕೀಯದಲ್ಲಿ ಆಗ್ರಹಿಸಲಾಗಿದೆ.

ಕೆಲವು ಸಚಿವರು ಹನಿಟ್ರ್ಯಾಪ್ ಹನಿಟ್ರ್ಯಾಪ್‌ಗೆ ಸಿಲುಕಿದ್ದು,ಅವರು ಕೂಡ ಸಂಪುಟದಿಂದ ಹೋಗಬೇಕಾಗುತ್ತದೆ ಎಂದಿದೆ.

ಕೆಲವು ಸಚಿವರ ನಡವಳಿಕೆಯು ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ಪುನರ್‌ರಚನೆ ನಡೆಯುವುದನ್ನು ಸೂಚಿಸುತ್ತದೆ ಎಂದು ಸಾಮ್ನಾ ಹೇಳಿದೆ.

ಎಸ್‌ಪಿ ಸಂಸದೆ ಇಕ್ರಾ ಹಸನ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕರ್ಣಿ ಸೇನಾ ನಾಯಕ ಯೋಗೇಂದ್ರ ರಾಣಾ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...