Homeಮುಖಪುಟಬಿಜೆಪಿಯು ಗೆದ್ದಾಗ ಅಬ್ಬರಿಸುತ್ತದೆ, ಸೋತಾಗ ಕುಸಿದು ಗೋಳಾಡುತ್ತದೆ: ಜೈರಾಮ್ ರಮೇಶ್ ವ್ಯಂಗ್ಯ

ಬಿಜೆಪಿಯು ಗೆದ್ದಾಗ ಅಬ್ಬರಿಸುತ್ತದೆ, ಸೋತಾಗ ಕುಸಿದು ಗೋಳಾಡುತ್ತದೆ: ಜೈರಾಮ್ ರಮೇಶ್ ವ್ಯಂಗ್ಯ

- Advertisement -
- Advertisement -

ಕರ್ನಾಟಕದಲ್ಲಿ ಚುನಾವಣೆ ನಡೆದು ಸರ್ಕಾರ ರಚನೆಯಾಗಿ ಒಂದು ತಿಂಗಳಿಗೂ ಅಧಿಕ ದಿನಗಳು ಕಳೆದರೂ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಯು ಶಾಸಕಾಂಗ ಪಕ್ಷದ ನಾಯಕನನ್ನು ಘೋಷಣೆ ಮಾಡಿಲ್ಲ. ಇಂದು (ಸೋಮವಾರ) ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಇಲ್ಲದೇ ವಿಧಾನಮಂಡಲ ಅಧಿವೇಶನ ಆರಂಭವಾಯಿತು. ಈ ವಿಚಾರವಾಗಿ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿ ಬಿಜೆಪಿಯನ್ನು ಗೇಲಿ ಮಾಡಿದ್ದಾರೆ.

ಜೈರಾಮ್ ರಮೇಶ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ”ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನವು ಇಂದಿನಿಂದ ಆರಂಭಗೊಂಡಿದೆ. 1952ರ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಮತ್ತು ರಾಷ್ಟ್ರದಲ್ಲಿ ಪ್ರಮುಖ ವಿರೋಧ ಪಕ್ಷವಿಲ್ಲದೆ ಅಧಿವೇಶನ ಆರಂಭಗೊಂಡಿದೆ. ಕರ್ನಾಟಕದಲ್ಲಿ ಬಿಜೆಪಿಯು ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಘೋಷಿಸಲಿದೆ. ಈ ಬಿಜೆಪಿಯು ಗೆದ್ದಾಗ ಅಬ್ಬರಿಸುತ್ತದೆ. ಸೋತಾಗ ಕುಸಿದು ಗೋಳಾಡುತ್ತದೆ” ಎಂದು ವ್ಯಂಗ್ಯ ಮಾಡಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ರಾಜ್ಯ ಘಟಕ ಬಿಜೆಪಿ ವಿರುದ್ಧ ಕಿಡಿಕಾರಿದ್ದು, ”ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು. ಕರ್ನಾಟಕದದ ಇತಿಹಾಸದಲ್ಲಿ ವಿರೋಧ ಪಕ್ಷದ ನಾಯಕನಿಲ್ಲದೆ ನಡೆಯುತ್ತಿರುವ ಮೊದಲ ಅಧಿವೇಶನವಿದು. ಅಧಿಕಾರದಲ್ಲಿದ್ದಾಗಲೂ ಪ್ರಜಾಪ್ರಭುತ್ವವನ್ನು ಗೌರವಿಸಲಿಲ್ಲ, ವಿಪಕ್ಷದಲ್ಲಿದ್ದಾಗಲೂ ಗೌರವಿಸುತ್ತಿಲ್ಲ” ಎಂದು ಟ್ವೀಟ್ ಮಾಡಿದೆ.

ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನವು ಇಂದು ಆರಂಭಗೊಂಡಿದ್ದು, 10 ದಿನಗಳವರೆಗೆ ನಡೆಯಲಿದೆ. ಕಲಾಪವು ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್‌ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಲಿದೆ.

‘ಕರ್ನಾಟಕ ಮಾದರಿ’ ಆಡಳಿತ ಪರಿಚಯಿಸುತ್ತೇವೆ: ರಾಜ್ಯಪಾಲ

ವಿಧಾನಸಭೆಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು, ”ಜನಕಲ್ಯಾಣ ಮತ್ತು ಆರ್ಥಿಕ ಸ್ಥಿತಿ ಎರಡನ್ನೂ ಸಮತೂಕದಲ್ಲಿ ನಿಭಾಯಿಸಿ ಕರ್ನಾಟಕದ್ದೇ ಆದ ಹೊಸ ಆಡಳಿತ ಮಾದರಿಯೊಂದನ್ನು ನನ್ನ ಸರ್ಕಾರ ದೇಶಕ್ಕೆ ಪರಿಚಯಿಸಲಿದೆ” ಎಂದು ಹೇಳಿದ್ದಾರೆ.

”ಶಾಂತಿಯುತವಾದ, ಸಮೃದ್ಧವಾದ, ಸೌಹಾರ್ದಯುತವಾದ ಸರ್ವ ಜನಾಂಗದ ಶಾಂತಿಯ ತೋಟವನ್ನು ನಿರ್ಮಿಸಲು ಬದ್ಧರಾಗಿದ್ದೇವೆ. ಯಾರನ್ನೂ ಹೊರಗಿಡದೆ ಎಲ್ಲರನ್ನೂ ಒಳಗೊಂಡು ‘ಇವ ನಮ್ಮವ’ ಎಂದು ಕೂಡಿ ಬಾಳುವ ನಮ್ಮ ಹಿರಿಯರ ಕನಸನ್ನು ನನಸು ಮಾಡಲು ನನ್ನ ಸರ್ಕಾರ ಬದ್ಧವಾಗಿದೆ” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವಿಪಕ್ಷ ನಾಯಕನಿಲ್ಲದೆ ಸದನ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...