ಚುನಾವಣಾ ಬಾಂಡ್‌ಗಳ ನೆಪದಲ್ಲಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ
ಹೋರಾಟಗಾರ ಆದರ್ಶ್ ಆರ್. ಅಯ್ಯರ್ ಅವರ ದೂರಿನ ಆಧಾರದ ಮೇಲೆ ಸೆಪ್ಟೆಂಬರ್‌ನಲ್ಲಿ ಬೆಂಗಳೂರು ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತು ರಾಜ್ಯ ಮತ್ತು ರಾಷ್ಟ್ರಮಟ್ಟದ ಬಿಜೆಪಿ ಪದಾಧಿಕಾರಿಗಳನ್ನು ಹೆಸರಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ದೂರು ದಾಖಲಾಗಿದ್ದ ಸಮಯದಲ್ಲಿ ವಿಜಯೇಂದ್ರ ಬಿಜೆಪಿ ಉಪಾಧ್ಯಕ್ಷರಾಗಿದ್ದರೆ, ಮತ್ತೊಬ್ಬ ಆರೋಪಿ ನಳಿನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದರು. ಡಿಸೆಂಬರ್ 3ರಂದು ನಳಿನ್ ವಿರುದ್ಧದ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ
“ಚುನಾವಣಾ ಬಾಂಡ್‌ಗಳ ಮೂಲಕ ಸಂಪೂರ್ಣ ಸುಲಿಗೆ ದಂಧೆಗೆ ವಿವಿಧ ಹಂತದ ಬಿಜೆಪಿ ಅಧಿಕಾರಿಗಳೊಂದಿಗೆ ಕೈ ಜೋಡಿಸಲಾಗಿದೆ” ಎಂದು ದೂರುದಾರರು ಆರೋಪಿಸಿದ್ದರು. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 384 (ಸುಲಿಗೆ), 120 ಬಿ (ಅಪರಾಧದ ಪಿತೂರಿ), ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಫೆಬ್ರವರಿಯಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿತ್ತು. ಈ ವೇಳೆ ನ್ಯಾಯಾಲಯವು ಯೋಜನೆಯನ್ನು “ಅಸಂವಿಧಾನಿಕ” ಮತ್ತು ಇದು ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು. ಕೇಂದ್ರ ಸರ್ಕಾರವು 2018 ರಲ್ಲಿ ಯೋಜನೆಯನ್ನು ಪರಿಚಯಿಸಿ, ರಾಜಕೀಯ ಪಕ್ಷಗಳಿಗೆ ನಗದು ದೇಣಿಗೆಗಳನ್ನು ನೀಡುವ ನೀತಿಗೆ ಬದಲಾವಣೆ ತಂದಿತ್ತು.
ಇದನ್ನೂ ಓದಿ: ‘ಸುಲಿಗೆ’ | ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನಲ್ಲಿ FIR


