Homeಕರ್ನಾಟಕಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು

- Advertisement -
- Advertisement -

ಚುನಾವಣಾ ಬಾಂಡ್‌ಗಳ ನೆಪದಲ್ಲಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ

ಹೋರಾಟಗಾರ ಆದರ್ಶ್ ಆರ್. ಅಯ್ಯರ್ ಅವರ ದೂರಿನ ಆಧಾರದ ಮೇಲೆ ಸೆಪ್ಟೆಂಬರ್‌ನಲ್ಲಿ ಬೆಂಗಳೂರು ಪೊಲೀಸರು ದಾಖಲಿಸಿದ ಎಫ್‌ಐಆರ್‌ನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮತ್ತು ರಾಜ್ಯ ಮತ್ತು ರಾಷ್ಟ್ರಮಟ್ಟದ ಬಿಜೆಪಿ ಪದಾಧಿಕಾರಿಗಳನ್ನು ಹೆಸರಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೂರು ದಾಖಲಾಗಿದ್ದ ಸಮಯದಲ್ಲಿ ವಿಜಯೇಂದ್ರ ಬಿಜೆಪಿ ಉಪಾಧ್ಯಕ್ಷರಾಗಿದ್ದರೆ, ಮತ್ತೊಬ್ಬ ಆರೋಪಿ ನಳಿನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದರು. ಡಿಸೆಂಬರ್ 3ರಂದು ನಳಿನ್ ವಿರುದ್ಧದ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ

“ಚುನಾವಣಾ ಬಾಂಡ್‌ಗಳ ಮೂಲಕ ಸಂಪೂರ್ಣ ಸುಲಿಗೆ ದಂಧೆಗೆ ವಿವಿಧ ಹಂತದ ಬಿಜೆಪಿ ಅಧಿಕಾರಿಗಳೊಂದಿಗೆ ಕೈ ಜೋಡಿಸಲಾಗಿದೆ” ಎಂದು ದೂರುದಾರರು ಆರೋಪಿಸಿದ್ದರು. ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 384 (ಸುಲಿಗೆ), 120 ಬಿ (ಅಪರಾಧದ ಪಿತೂರಿ), ಮತ್ತು 34 (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಫೆಬ್ರವರಿಯಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿತ್ತು. ಈ ವೇಳೆ ನ್ಯಾಯಾಲಯವು ಯೋಜನೆಯನ್ನು “ಅಸಂವಿಧಾನಿಕ” ಮತ್ತು ಇದು ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು. ಕೇಂದ್ರ ಸರ್ಕಾರವು 2018 ರಲ್ಲಿ ಯೋಜನೆಯನ್ನು ಪರಿಚಯಿಸಿ, ರಾಜಕೀಯ ಪಕ್ಷಗಳಿಗೆ ನಗದು ದೇಣಿಗೆಗಳನ್ನು ನೀಡುವ ನೀತಿಗೆ ಬದಲಾವಣೆ ತಂದಿತ್ತು.

ಇದನ್ನೂ ಓದಿ: ‘ಸುಲಿಗೆ’ | ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನಲ್ಲಿ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...