Homeಮುಖಪುಟಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ: ಪ್ರತಿಪಕ್ಷಗಳ ಗಂಭೀರ ಆರೋಪ

ಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ: ಪ್ರತಿಪಕ್ಷಗಳ ಗಂಭೀರ ಆರೋಪ

- Advertisement -
- Advertisement -

ಅಸ್ಸಾಂ ಎರಡನೇ ಹಂತದ ಮತದಾನ ಮುಗಿಯುತ್ತಿದ್ದಂತೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಮತದಾನ ಸಿಬ್ಬಂದಿ ಇವಿಎಂಗಳೊಂದಿಗೆ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಪ್ರಯಾಣಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ.

ಎಐಯುಡಿಎಫ್ ಮುಖಂಡ ಮೌಲನಾ ಬದ್ರುದ್ದೀನ್ ಅಜ್ಮಲ್ ಟ್ವೀಟ್ ಮಾಡಿ,
“ಧ್ರುವೀಕರಣ? ವಿಫಲವಾಗಿದೆ.
ಮತಗಳನ್ನು ಖರೀದಿಸುವುದು? ವಿಫಲವಾಗಿದೆ.
ಅಭ್ಯರ್ಥಿಗಳನ್ನು ಖರೀದಿಸುವುದು? ವಿಫಲವಾಗಿದೆ.
ಸುಳ್ಳುಗಳು? ವಿಫಲವಾಗಿದೆ.
ಇಬ್ಬರು ಸಿಎಂಗಳು? ವಿಫಲವಾಗಿದೆ.
ಸಿಎಎ ಕುರಿತು ಎರಡು ಮಾತು? ವಿಫಲವಾಗಿದೆ.
ಸೋತ ಬಿಜೆಪಿಯ ಕೊನೆಯ ಉಪಾಯ: ಇವಿಎಂಗಳನ್ನು ಕದಿಯಿರಿ.
ಇದು ಪ್ರಜಾಪ್ರಭುತ್ವದ ಕೊಲೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಡಳಿತದಲ್ಲಿರುವ ಬಿಜೆಪಿ ಸರ್ಕಾರವು ಇವಿಎಂಗಳನ್ನು ವಶಪಡಿಸಿಕೊಂಡು ತಿರುಚುತ್ತಿದೆ. ಕೇವಲ ಇದೊಂದೇ ಮಾರ್ಗದಲ್ಲಿ ಮಾತ್ರ ಬಿಜೆಪಿ ಅಸ್ಸಾಂನಲ್ಲಿ ಜಯಗಳಿಸುತ್ತಿದೆ” ಎಂದು ಕಾಂಗ್ರೆಸ್‌ ವಕ್ತಾರ ಗೌರವ್ ಗೊಗೊಯ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸರಣಿ ಟ್ವೀಟ್ ಮಾಡಿ ಇವಿಎಂ ಬಳಕೆಯ ಕುರಿತು ಗಂಭೀರವಾಗಿ ಪುನರ್ ವಿಮರ್ಶೆ ನಡೆಸಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಪ್ರತಿ ಬಾರಿಯೂ ಇವಿಎಂ ಹೊತ್ತು ಸಾಗಿಸುವ ಖಾಸಗಿ ವಾಹನಗಳ ಚುನಾವಣಾ ವೀಡಿಯೊಗಳು ಕಂಡುಬರುತ್ತವೆ. ಆಶ್ಚರ್ಯಕರವಾಗಿ ಅವು ಈ ಕೆಳಗಿನ ವಿಷಯಗಳನ್ನು ಸಾಮಾನ್ಯವಾಗಿ ಹೊಂದಿತ್ತುವೆ.
1. ವಾಹನಗಳು ಸಾಮಾನ್ಯವಾಗಿ ಬಿಜೆಪಿ ಅಭ್ಯರ್ಥಿಗಳು ಅಥವಾ ಅವರ ಸಹವರ್ತಿಗಳಿಗೆ ಸೇರಿವೆ.
2. ಆ ವೀಡಿಯೊಗಳನ್ನು ಕೇವಲ ಆ ಒಂದು ಘಟನೆಯಾಗಿ ನೋಡಲಾಗುತ್ತದೆ ಮತ್ತು ತಿರುಚಿದ ವಿಡಿಯೋ ಎಂದು ತಳ್ಳಿಹಾಕಲಾಗುತ್ತದೆ.
3. ವೀಡಿಯೊಗಳನ್ನು ಬಹಿರಂಗಪಡಿಸಿದವರನ್ನು ಸೋಲಿನ ಭಯವುಳ್ಳವರು ಎಂದು ಆರೋಪಿಸಲು ಬಿಜೆಪಿ ತನ್ನ ಮಾಧ್ಯಮ ಯಂತ್ರೋಪಕರಣಗಳನ್ನು ಬಳಸುತ್ತದೆ.
ಆತಂಕದ ಸಂಗತಿಯೆಂದರೆ, ಇಂತಹ ಹಲವಾರು ಘಟನೆಗಳು ವರದಿಯಾಗುತ್ತಿವೆ ಮತ್ತು ಅವುಗಳ ಬಗ್ಗೆ ಇಸಿ ಏನೂ ಮಾಡಲಾಗುತ್ತಿಲ್ಲ. ಈ ದೂರುಗಳ ಬಗ್ಗೆ ಇಸಿ ನಿರ್ಣಾಯಕವಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಬೇಕಾಗಿದೆ ಮತ್ತು ಎಲ್ಲಾ ರಾಷ್ಟ್ರೀಯ ಪಕ್ಷಗಳು ಇವಿಎಂ ಬಳಕೆಯ ಬಗ್ಗೆ ಗಂಭೀರವಾದ ಮರು ಮೌಲ್ಯಮಾಪನವನ್ನು ನಡೆಸಬೇಕಾಗಿದೆ” ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ.

ನಿನ್ನೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದಲ್ಲಿ ಮತದಾನ ಮುಗಿದ ನಂತರ ಇವಿಎಂಗಳನ್ನು ಸರ್ಕಾರಿ ಭದ್ರತಾ ವಾಹನದಲ್ಲಿ ಇವಿಎಂಗಳನ್ನು ಇರಿಸುವ ಸ್ಟ್ರಾಂಗ್‌ ರೂಂಗೆ ಸಾಗಿಸಬೇಕಿತ್ತು. ಆದರೆ ತಮಗಾಗಿ ನಿಯೋಜಿಸಿದ ವಾಹನ ಕೆಟ್ಟುಹೋದ ಕಾರಣ ಬದಲಿ ವಾಹನಕ್ಕಾಗಿ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಯನ್ನು ಸಂಪರ್ಕಿಸಿದ್ದರು. ಕೆಲ ಗಂಟೆಗಳಲ್ಲಿ ವಾಹನ ಕಳಿಸುವುದಾಗಿ ಅವರಿಗೆ ಭರವಸೆ ನೀಡಲಾಗಿತ್ತು. ಆದರೂ ಮತದಾನದ ಸಿಬ್ಬಂದಿ ಖಾಸಗಿ ವಾಹನದಲ್ಲಿ ಇವಿಎಂಗಳೊಂದಿಗೆ ಸ್ಟ್ರಾಂಗ್‌ ರೂಂ ತಲುಪಿದ್ದಾರೆ. ಆ ಕಾರು ಕರೀಮ್‌ಗಂಜ್ ಜಿಲ್ಲೆಯ ಪಥಾರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗೆ ಸೇರಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ಉಲ್ಲೇಖಿಸಿದೆ.

ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಹೋಗುತ್ತಿದ್ದನ್ನು ಪ್ರತಿಪಕ್ಷದ ಕಾರ್ಯಕರ್ತರು ತಡೆದು ಘೇರಾವ್ ಹಾಕಿದ್ದಾರೆ. ಗುಂಪು ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠೀಚಾರ್ಜ್ ನಡೆಸಿದ್ದಾರೆ. ಆಗ ಹಿಂಸೆಗೆ ತಿರುಗಿದೆ.


ಇದನ್ನೂ ಓದಿ: ಅಸ್ಸಾಂ ಚುನಾವಣಾ ಅಧಿಕಾರಿಗಳು, ಇವಿಎಂ ಜೊತೆ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ: ಗಲಭೆಗೆ ತಿರುಗಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...