Homeಕರ್ನಾಟಕನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌...

ನಕಲಿ ಚಿತ್ರ ಹಂಚಿಕೆ | ಬಿಜೆಪಿ ಬೆಂಬಲಿಗ ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ನಟ ಪ್ರಕಾಶ್‌ ರಾಜ್ ದೂರು

- Advertisement -
- Advertisement -

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್‌ ರಾಜ್ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಪ್ರತಿಪಾದಿಸಿ ನಕಲಿ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದ‌ ಬಿಜೆಪಿ ಬೆಂಬಲಿಗ, ದುಷ್ಕರ್ಮಿ ಪ್ರಶಾಂತ್‌ ಸಂಬರಗಿ ವಿರುದ್ಧ ಶನಿವಾರ ಪ್ರಕಾಶ್‌ ರಾಜ್ ದೂರು ದಾಖಲಿಸಿದ್ದಾರೆ. ನಕಲಿ ಚಿತ್ರ ಹಂಚಿಕೆ

“ಪ್ರಶಾಂತ್ ಸಂಬರಗಿ ಅವರು ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಫೇಸ್‌ಬುಕ್‌ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಸಿದ್ದು, ಸುಳ್ಳು ಶೀರ್ಷಿಕೆ ನೀಡಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಿ ಮೈಸೂರಿನ ಲಕ್ಷ್ಮಿಪುರಂ ಠಾಣೆಗೆ ನಟ ಪ್ರಕಾಶ್ ರಾಜ್ ದೂರು ನೀಡಿದ್ದಾರೆ.

“ಪ್ರಶಾಂತ್ ಸಂಬರಗಿ ಅವರಿಗೆ ಇ-ಮೇಲ್ ಮೂಲಕ ನೋಟಿಸ್ ಕಳುಹಿಸಿದ್ದು, ತನಿಖೆ ಮುಂದುವರಿದಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಚಿತ್ರ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಶಾಂತ್ ಸಂಬರಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, ‘‘ಕುಂಭಮೇಳದಲ್ಲಿ ನಟ ಪ್ರಕಾಶ್‌ ರಾಜ್.‌ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಅವರ ಎಲ್ಲ ಪಾಪಗಳನ್ನು ಕ್ಷಮಿಸಿ, ತೆಗೆದುಹಾಕಲಾಗುವುದು ಎಂದು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದರು.‌

“ಸುಳ್ಳ ರಾಜನ ಹೇಡಿಗಳ ಸೈನ್ಯಕ್ಕೆ… ಅವರ ಪವಿತ್ರ ಪೂಜೆಯಲ್ಲೂ ಸುಳ್ಳು ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ. ಪೊಲೀಸ್‌ ದೂರು ದಾಖಲಾಗಿದೆ. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ” ಎಂದು ಎಕ್ಸ್‌ ತಾಣದಲ್ಲಿ ಪ್ರಕಾಶ್‌ ರಾಜ್ ಬರೆದುಕೊಂಡಿದ್ದರು.

ತಾವು ಹಾಕಿರುವ ಚಿತ್ರ ನಕಲಿ ಎಂದು ಗೊತ್ತಾದ ತಕ್ಷಣ ಪ್ರಶಾಂತ್ ಸಂಬರಗಿ ಪೋಸ್ಟ್‌ ಅನ್ನು ಡಿಲೀಟ್‌ ಮಾಡಿದ್ದಾರೆ. ಇದನ್ನು ಗಮನಸಿದ ಪ್ರಕಾಶ್‌ ರಾಜ್‌, “ಹಬ್ಬಿಸಿದ ಸುಳ್ಳು ಸುದ್ದಿಯನ್ನು ಮಹಾವೀರ ಸಂಬರಗಿ ತಮ್ಮ ಖಾತೆಯಿಂದ ಈಗ ಹೆದರಿ ತೆಗೆದಾಯ್ತು. ಆದರೆ ಮಾಡಿದ ಕಿಡಿಗೇಡಿತನದಿಂದ ತಪ್ಪಿಸಿಕೊಳ್ಳಲಾಗದು ಎಂದು ಯಾರಾದರು ಉಗಿದು ಹೇಳಿ” ಎಂದು ಕುಟುಕಿದ್ದರು.

ಲಕ್ಷ್ಮೀಪುರಂ ಠಾಣೆಯಲ್ಲಿ ದೂರು ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ನಟ ಪ್ರಕಾಶ್‌ ರಾಜ್,‌ “ನಟಿಯರೂ ಸೇರಿದಂತೆ ಅನೇಕರಿಗೆ ಪ್ರಶಾಂತ್ ಸಂಬರಗಿ ಈ ರೀತಿ ತೊಂದರೆ ನೀಡಿದ್ದಾನೆ. ಆತನಿಗೆ ಪಾಠ ಆಗಬೇಕು. ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿ ಹರಡುವವರಿಗೂ ಇದೊಂದು ಪಾಠವಾಗಲಿ. ತಪ್ಪು ಪ್ರಚಾರ ಮಾಡುವುದು, ಅನುಮತಿ ಇಲ್ಲದೆ ಯಾರದೋ ಫೋಟೊಗಳನ್ನು ಬಳಸುವುದು ಅಕ್ಷಮ್ಯ ಅಪರಾಧ” ಎಂದು ಹೇಳಿದ್ದಾರೆ.

“ನಾನು ಮೂಢನಂಬಿಕೆಯನ್ನಷ್ಟೇ ಪ್ರಶ್ನಿಸುತ್ತೇನೆ. ಈ ಹಿಂದೆ ಕ್ರಿಶ್ಚಿಯನ್‌ಗಿಂತ ದೊಡ್ಡ ಮಾಫಿಯಾ ಇನ್ನೊಂದಿಲ್ಲ. ಮುಸ್ಲಿಂರಲ್ಲೂ ದೊಡ್ಡ ಟೆರೆರಿಸ್ಟ್‌ಗಳು ಇದ್ದಾರೆ ಎಂದು ಹೇಳಿದ್ದೇನೆ. ಅದು ಹೈಲೈಟ್ ಆಗಿಲ್ಲ. ನಾನು ಯಾವತ್ತೂ ಧರ್ಮ ಧರ್ಮಗಳನ್ನು ಎತ್ತಿ ಕಟ್ಟುವ ಕೆಲಸ ಮಾಡಿಲ್ಲ. ಅದೇ ಕೆಲಸ ಮಾಡುವವರು ದೂಷಿಸುತ್ತಾರೆ” ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

“ಸ್ನಾನ ಮಾಡುವುದರಲ್ಲಿ ತಪ್ಪೇನಿದೆ. ಅದು ಅವರ ನಂಬಿಕೆ. ನನಗೆ ದೇವರ ಮೇಲೆ ನಂಬಿಕೆಯಿಲ್ಲ. ಮನುಷ್ಯರ ಮೇಲೆ ನಂಬಿಕೆ. ದೇವರಿಲ್ಲದೆ ಬದುಕಬಹುದು ಆದರೆ, ಮನುಷ್ಯರಿಲ್ಲದೆ ಬದುಕಲು ಸಾಧ್ಯವಿಲ್ಲ. ಹಾಗೆಂದು ಅವರ ನಂಬಿಕೆಯನ್ನು ಪ್ರಶ್ನಿಸುವುದಿಲ್ಲ. ಆದರೆ ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು” ಎಂದು ಹೇಳಿದ್ದಾರೆ.

ಕುಂಭಮೇಳದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿದೆ ಎಂಬ ಆರೋಪದ ಬಗ್ಗೆ ಉತ್ತರಿಸಿದ ಅವರು, “ಅವರವರ ಭಾವಕ್ಕೆ ಅವರ ಬಕುತಿಗೆ ಹೇಳುತ್ತಾ ಹೋಗಲಿ. ನಾನು ಯಾರ ಬಗ್ಗೆಯೂ ಮಾತನಾಡುವುದಿಲ್ಲ. ಯಾವ ನಂಬಿಕೆಯ ಬಗ್ಗೆ ಟೀಕೆ ಮಾಡಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

Union Budget 2025 | ಎಲ್ಲವೂ ಬಿಹಾರಕ್ಕೆ ಕೊಟ್ಟರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರುವುದ? – ಸಚಿವ ಕೃಷ್ಣಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...