Homeಮುಖಪುಟಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಜಿ-20 ಲೋಗೋದಲ್ಲಿ ಬಿಜೆಪಿ ಚಿಹ್ನೆ: ‘ಕಮಲ’ ದೇಶದ ಸಂಸ್ಕೃತಿ ಎಂದ ರಾಜನಾಥ್ ಸಿಂಗ್‌

ಸಾರ್ವಜನಿಕ ಯೋಜನೆ, ಕಾರ್ಯಕ್ರಮಗಳನ್ನು ರಾಜಕೀಯ ಪಕ್ಷಗಳು ದುರ್ಬಳಕೆ ಮಾಡಿಕೊಂಡಿದ್ದು ಇದು ಮೊದಲೇನೂ ಅಲ್ಲ...

- Advertisement -
- Advertisement -

ಭಾರತ ಅಲಂಕರಿಸಲಿರುವ ‘ಜಿ 20- ಅಧ್ಯಕ್ಷ ಸ್ಥಾನ’ದ ಲೋಗೋದಲ್ಲಿ ಬಿಜೆಪಿಯ ಚಿಹ್ನೆಯನ್ನು ಬಳಸಲಾಗಿದೆ ಎಂಬ ವಿವಾದದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಪ್ರತಿಕ್ರಿಯಿಸಿದ್ದು, “ಕಮಲವು ದೇಶದ ಸಾಂಸ್ಕೃತಿಕ ಗುರುತಿನ ಭಾಗವಾಗಿದೆ” ಎಂದಿದ್ದಾರೆ.

“ಭಾರತೀಯ ಜನತಾ ಪಕ್ಷವನ್ನು ಪ್ರಚಾರ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಲೋಗೋದಲ್ಲಿ ಕಮಲದ  ಚಿತ್ರವನ್ನು ಬಳಸಿದೆ” ಎಂದು ಕಾಂಗ್ರೆಸ್ ಆರೋಪಿಸಿತ್ತು. ಕಮಲವು ಹಿಂದುತ್ವ ಪಕ್ಷದ ಚುನಾವಣಾ ಚಿಹ್ನೆಯೂ ಆಗಿದೆ.

“ಸತ್ಯವೆಂದರೆ ಭಾರತ ಸರ್ಕಾರವು 1950ರಲ್ಲಿ ಕಮಲವನ್ನು ರಾಷ್ಟ್ರೀಯ ಹೂವು ಎಂದು ಘೋಷಿಸಿದೆ” ಎಂದು ರಾಜನಾಥ್‌ ಸಿಂಗ್ ಪ್ರತಿಕ್ರಿಯಿಸಿದ್ದಾರೆ. “ಅವರು ಹಾಗೆ ಮಾಡಿದ್ದಾರೆ, ಏಕೆಂದರೆ ಕಮಲವು ನಮ್ಮ ಸಾಂಸ್ಕೃತಿಕ ಗುರುತಿನ ಸಂಕೇತವಾಗಿದೆ” ಎಂದು ಸಮರ್ಥಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಿ- 20 ಅಥವಾ 20 ದೇಶಗಳ ಸಮೂಹದ ಅಧ್ಯಕ್ಷ ಸ್ಥಾನವನ್ನು ಅದರ ಸದಸ್ಯರು ಕ್ರಮಬದ್ಧವಾಗಿ ವಹಿಸುವುದು ನಡೆದು ಬಂದಿದೆ. ಪ್ರಸ್ತುತ ಅಧ್ಯಕ್ಷ ಸ್ಥಾನ ಇಂಡೋನೇಷ್ಯಾ ವಹಿಸಿದ್ದು, ಡಿಸೆಂಬರ್ 1 ರಂದು ಭಾರತ ಈ ಸ್ಥಾನವನ್ನು ಅಲಂಕರಿಸುವ ನಿರೀಕ್ಷೆ ಇದೆ.

ನವೆಂಬರ್ 8ರಂದು ಲೋಗೋವನ್ನು ಬಿಡುಗಡೆ ಮಾಡಿದ ನಂತರ ಪ್ರಧಾನ ಮಂತ್ರಿ ಕಚೇರಿಯು ಪತ್ರಿಕಾ ಪ್ರಕಟಣೆ ನೀಡಿತ್ತು. “ಭಾರತದ ರಾಷ್ಟ್ರಧ್ವಜದ ರೋಮಾಂಚಕ ಬಣ್ಣಗಳಾದ ಕೇಸರಿ, ಬಿಳಿ, ಹಸಿರು ಮತ್ತು ನೀಲಿ ಬಣ್ಣಗಳಿಂದ ಸ್ಫೂರ್ತಿ ಪಡೆಯಲಾಗಿದೆ” ಎಂದು ಪ್ರಧಾನಿ ಕಚೇರಿ ತಿಳಿಸಿತ್ತು.

“ಇದು (ಲೋಗೋ) ಭೂಮಿಯನ್ನು ಕಮಲದೊಂದಿಗೆ ಜೋಡಿಸುತ್ತದೆ. ಭಾರತದ ರಾಷ್ಟ್ರೀಯ ಹೂವು- ಸವಾಲುಗಳ ನಡುವೆ ಬೆಳೆಯುವುದನ್ನು ಪ್ರತಿಬಿಂಬಿಸುತ್ತದೆ. ಭೂಮಿಯ ಚಿತ್ರವು ಭಾರತದ ಪರಿಸರಪ್ರಜ್ಞೆಯ ಜೀವನ ವಿಧಾನವನ್ನು ಪ್ರತಿಬಿಂಬಿಸುತ್ತದೆ, ಇದು ಪ್ರಕೃತಿಯೊಂದಿಗೆ ಪರಿಪೂರ್ಣ ಸಾಮರಸ್ಯವನ್ನು ಸೂಚಿಸುತ್ತದೆ” ಎಂದು ಕಚೇರಿ ಹೇಳಿತ್ತು.

ನವೆಂಬರ್ 9ರಂದು ಟ್ವೀಟ್ ಮಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಕಾಂಗ್ರೆಸ್ ಧ್ವಜವನ್ನು ಭಾರತದ ರಾಷ್ಟ್ರಧ್ವಜ ಮಾಡುವ ಪ್ರಸ್ತಾಪವನ್ನು ತಿರಸ್ಕರಿಸಿದ್ದರು” ಎಂದಿದ್ದರು.

“ಈಗ, ಬಿಜೆಪಿಯ ಚುನಾವಣಾ ಚಿಹ್ನೆಯು ಜಿ-20ರ ಭಾರತದ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತ ಲಾಂಛನವಾಗಿದೆ! ಆಘಾತಕಾರಿಯಾದರೂ, ಮೋದಿ ಮತ್ತು ಬಿಜೆಪಿ ತಮ್ಮನ್ನು ನಾಚಿಕೆಯಿಲ್ಲದೆ ಪ್ರಚಾರ ಮಾಡಿಕೊಳ್ಳುವ ಯಾವುದೇ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ” ಎಂದು ಕುಟುಕಿದ್ದರು.

ಇದಕ್ಕೆ ರಾಜನಾಥ್ ಸಿಂಗ್‌, “ಭಾರತದ ಸಂಸ್ಕೃತಿಯ ಪ್ರತೀಕಗಳ ಸುತ್ತ ವಿವಾದಗಳು ಸೃಷ್ಟಿಯಾಗುತ್ತಿರುವುದು ನೋವಿನ ಸಂಗತಿ” ಎಂದು ಪ್ರತಿಕ್ರಿಯಿಸಿದರು.

ಆರೋಪ ಮಾಡುವುದಕ್ಕೂ ಮಿತಿ ಇದೆ ಎಂದು ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. “ಇದು ಯಾವುದೋ ಪಕ್ಷದ ಚುನಾವಣಾ ಚಿಹ್ನೆಯಾಗಿರುವುದರಿಂದ, ನಾವು ಅದನ್ನು ಬಿಟ್ಟುಬಿಡಬೇಕೆ? ಕಮಲವನ್ನು ಭಾರತದ ರಾಷ್ಟ್ರೀಯ ಹೂವು ಎಂದು ಗುರುತಿಸುವುದನ್ನು ರದ್ದುಗೊಳಿಸಬೇಕೇ?” ಎಂದು ಪ್ರಶ್ನಿಸಿದ್ದಾರೆ.

ರಕ್ಷಣಾ ಸಚಿವರು ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ಉಲ್ಲೇಖಿಸಿದ್ದಾರೆ.“ಕೈ ಎಂಬ ಪದದ ಬಳಕೆಯನ್ನು ಸಹ ನಿಲ್ಲಿಸಬೇಕೇ?” ಎಂದು ಕೇಳಿದ್ದಾರೆ.

ಯಾವುದೋ ಪಕ್ಷದ ಚುನಾವಣಾ ಚಿಹ್ನೆ ಸೈಕಲ್ ಆಗಿದ್ದರೆ, ಅದು ಚುನಾವಣಾ ಚಿಹ್ನೆ ಎಂಬ ಕಾರಣಕ್ಕೆ ನಾವು ಸೈಕಲ್ ಮೇಲೆ ಕುಳಿತುಕೊಳ್ಳಬಾರದೇ ಎಂದಿದ್ದಾರೆ.

‘ಈ ರೀತಿಯ ಆರೋಪಗಳು ಮೊದಲೇನಲ್ಲ’

ಸರ್ಕಾರಿ ಯೋಜನೆಗಳಲ್ಲಿ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಬಿಜೆಪಿ ತನ್ನ ಪಕ್ಷವನ್ನು ಪ್ರಚಾರ ಮಾಡಿಕೊಳ್ಳುತ್ತಿದೆ ಎಂಬ ಆರೋಪ ಇದೇ ಮೊದಲೇನೂ ಅಲ್ಲ.

‘ಭಾರತೀಯ ಜನೌಷಧಿ ಪರಿಯೋಜನ’ವನ್ನು ಪಕ್ಷದ ಪ್ರಚಾರಕ್ಕೆ ಬಳಸಿದ್ದು ಟೀಕೆಗೆ ಒಳಗಾಗಿತ್ತು. ಔಷಧಿಯ ಪ್ಯಾಕೆಟ್ ಮೇಲೆ ‘ಭಾಜಪ’ ಎಂಬುದನ್ನು ಕೇಸರಿ ಬಣ್ಣದಲ್ಲಿ ಬಳಸಿದ್ದು ವರದಿಯಾಗಿತ್ತು.

“ಬಿಜೆಪಿ ಎಂದರೆ ‘ಭಾರತೀಯ ಜನತಾ ಪಕ್ಷ’. ಹಾಗೆಯೇ ‘ಭಾರತೀಯ ಜನೌಷಧಿ ಪರಿಯೋಜನ’ ಎಂದೂ ಹೌದು”- ಎಂದು ‘ನ್ಯೂಸ್‌ಲಾಂಡ್ರಿ’ ವರದಿ ಮಾಡಿತ್ತು.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಜೆನೆರಿಕ್ ಔಷಧಗಳನ್ನು ಒದಗಿಸುವ ಯೋಜನೆ- ‘ಭಾರತೀಯ ಜನೌಷಧಿ ಪರಿಯೋಜನಾ’. ಇದನ್ನು 2008ರಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರವು ಜನ್ ಔಷಧಿ ಯೋಜನೆಯಾಗಿ ಪ್ರಾರಂಭಿಸಿತು. 2015ರಲ್ಲಿ ಮೋದಿ ಸರ್ಕಾರವು ‘ಪ್ರಧಾನ ಮಂತ್ರಿ ಜನೌಷಧಿ ಯೋಜನೆ’ ಎಂದು ಮರು ಪ್ಯಾಕೇಜ್ ಮಾಡಿತು. ‘ಬಿಜೆಪಿ’ ಎಂಬ ಸಂಕ್ಷೇಪಿತ ರೂಪವನ್ನು ತೋರಿಸಲು ನವೆಂಬರ್ 2016ರಲ್ಲಿ ಇದನ್ನು ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ’ ಎಂದು ಮರುನಾಮಕರಣ ಮಾಡಲಾಗಿತ್ತು.

‘ಭಾಜಪ’ ಎಂಬುದು ಸ್ಪಷ್ಟವಾಗಿ ಗೋಚರಿಸದಿದ್ದರೂ ಔಷಧಿಗಳ ಪ್ಯಾಕೇಜಿಂಗ್ ನೋಡಿದರೆ ಅದರ ಕಲ್ಪನೆಗೆ ಅವಕಾಶ ನೀಡುತ್ತದೆ. ಪ್ರತಿಯೊಂದು ಪದದ ಮೊದಲ ಅಕ್ಷರವನ್ನು- (‘ಭಾ’, ‘ಜ’, ‘ಪ’) – ವಿಶಿಷ್ಟವಾದ ಕೇಸರಿ ಬಣ್ಣದಿಂದ ಮುದ್ರಿಸಲಾಗಿದೆ. ಉಳಿದ ಅಕ್ಷರಗಳು ಹಸಿರು ಮತ್ತು ನೀಲಿ ಬಣ್ಣದಲ್ಲಿದೆ. ಕೇಸರಿ ಬಣ್ಣವು ಸಹಜವಾಗಿ, ಬಿಜೆಪಿಯನ್ನು ಪ್ರತಿನಿಧಿಸುತ್ತದೆ ಎಂದು ವರದಿ ಉಲ್ಲೇಖಿಸಿತ್ತು.

ಇದನ್ನೂ ಓದಿರಿ: ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಹೀಗೆ ಯೋಜನೆಗಳ ದುರ್ಬಳಕೆ ಮಾಡಿಕೊಂಡಿದ್ದು ಬಿಜೆಪಿಯಷ್ಟೇ ಅಲ್ಲ. ಮಾಯಾವತಿಯವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ತಮ್ಮ ಮತ್ತು ಬಹುಜನ ಸಮಾಜ ಪಕ್ಷದ ಆನೆಯ ಚಿಹ್ನೆಯ ಪ್ರತಿಮೆಗಳನ್ನು ಬಳಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್ ಅವರು “ಸಮಾಜವಾದಿ” ಹೆಸರಿನಲ್ಲಿ ಯೋಜನೆಗಳನ್ನು ಪ್ರಾರಂಭಿಸಿದ್ದರು. ಹಾಲಿ ಮುಖ್ಯಮಂತ್ರಿ ಬಿಜೆಪಿಯ ಆದಿತ್ಯನಾಥ್ ಅವರು ಸಾರ್ವಜನಿಕ ಬಸ್‌ಗಳು, ಶೌಚಾಲಯಗಳು ಮತ್ತು ಶಾಲಾ ಬ್ಯಾಗ್‌ಗಳಿಗೆ ಕೇಸರಿ ಬಣ್ಣ ಬಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವು ತನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ನೀಲಿ ಮತ್ತು ಬಿಳಿ ಬಣ್ಣಗಳನ್ನು ಫ್ಲೈಓವರ್‌ಗಳಿಗೆ ಬಳಿಸಿದೆ. ರಾಜ್ಯದ ಶಾಲೆಗಳಲ್ಲಿ ನೀಲಿ ಮತ್ತು ಬಿಳಿ ಸಮವಸ್ತ್ರವನ್ನು ಪರಿಚಯಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಸರ್ಕಾರವು ಟಿವಿ ಜಾಹೀರಾತುಗಳಲ್ಲಿ ಸಾರ್ವಜನಿಕ ಹಣವನ್ನು ಬಳಸುತ್ತಿದೆ ಎಂದು 2016ರಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...