Homeಮುಖಪುಟಧುಪ್ಗುರಿ ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲು: ಪರಾಮರ್ಶೆಗೆ ಬಿಎಲ್ ಸಂತೋಷ್ ನೇತೃತ್ವದ ತಂಡ ಬಂಗಾಳಕ್ಕೆ ಭೇಟಿ

ಧುಪ್ಗುರಿ ಉಪಚುನಾವಣೆಯಲ್ಲಿ ಬಿಜೆಪಿಗೆ ಸೋಲು: ಪರಾಮರ್ಶೆಗೆ ಬಿಎಲ್ ಸಂತೋಷ್ ನೇತೃತ್ವದ ತಂಡ ಬಂಗಾಳಕ್ಕೆ ಭೇಟಿ

- Advertisement -
- Advertisement -

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ಧುಪ್ಗುರಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದ್ದು, ಪಕ್ಷದ ಸೋಲಿನ ಹಿಂದಿನ ಕಾರಣಗಳನ್ನು ಪರಿಶೀಲಿಸಲು ಬಿಜೆಪಿಯ ಕೇಂದ್ರ ತಂಡವು ರಾಜ್ಯಕ್ಕೆ ಭೇಟಿ ನೀಡಲಿದೆ.

ಪ್ರಾಧ್ಯಾಪಕ ನಿರ್ಮಲ್ ಚಂದ್ರ ರಾಯ್ ಅವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿಯ ತಾಪಸಿ ರಾಯ್ ಅವರಿಗಿಂತ ಸುಮಾರು 4,000 ಮತಗಳಿಂದ ಮುನ್ನಡೆ ಸಾಧಿಸಿದ್ದು, ಸಿಪಿಐ(ಎಂ)-ಕಾಂಗ್ರೆಸ್ ಮೈತ್ರಿಕೂಟದ ಈಶ್ವರ್ ಚಂದ್ರ ರಾಯ್ ಮೂರನೇ ಸ್ಥಾನದಲ್ಲಿದ್ದಾರೆ.

ಬಿಜೆಪಿಯ ಪರೀಶೀಲನಾ ಕೇಂದ್ರ ತಂಡದ ನೇತೃತ್ವವನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಅವರು ಭಾನುವಾರ ಮತ್ತು ಸೋಮವಾರ ಪಕ್ಷದ ರಾಜ್ಯ ನಾಯಕತ್ವದೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದು, ಕಡಿಮೆ ಅಂತರದ ಸೋಲಿಗೆ ಕಾರಣಗಳನ್ನು ಪರಿಶೀಲಿಸಲಿದ್ದಾರೆ.

2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿಷ್ಣು ಪದಾ ರಾಯ್ ಈ ಕ್ಷೇತ್ರದಿಂದ ಗೆಲುವು ಸಾಧಸಿದ್ದರು. ಹಾಗಾಗಿ ಬಿಜೆಪಿ ಕೇಂದ್ರ ನಾಯಕರು ಈ ಸೋಲನ್ನು ಸಾಕಷ್ಟು ಗಂಭೀರವಾಗಿ ಪರಿಗಣಿಸುತ್ತಿದೆ. ಈ ವರ್ಷದ ಆರಂಭದಲ್ಲಿ ಅವರ ಹಠಾತ್ ನಿಧನದಿಂದ ಉಪಚುನಾವಣೆ ಅಗತ್ಯವಾಯಿತು.

ಮುಂಬರುವ 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸೋಲನ್ನು ಕೇಂದ್ರ ನಾಯಕತ್ವವು ಹೆಚ್ಚು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಮೂಲಗಳು ತಿಳಿಸಿವ. ಅದರಲ್ಲೂ ವಿಶೇಷವಾಗಿ ಉತ್ತರ ಬಂಗಾಳದ ಹಲವಾರು ಕ್ಷೇತ್ರಗಳು ಬಿಜೆಪಿಯ ಭದ್ರಕೋಟೆಗಳಾಗಿ ಕಂಡುಬರುತ್ತವೆ.

2019ರ ಲೋಕಸಭಾ ಚುನಾವಣೆಯಲ್ಲಿ, ಆಡಳಿತಾರೂಢ ಟಿಎಂಸಿ ಉತ್ತರ ಬಂಗಾಳದಿಂದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರ ಕೂಡ ಗೆಲ್ಲಲು ಸಾಧ್ಯವಾಗಲಿಲ್ಲ. ಬಿಜೆಪಿ ಅಭ್ಯರ್ಥಿಗಳು ಏಳು ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಉಳಿದ ಒಂದು ಸ್ಥಾನವನ್ನು ಗೆದ್ದಿದೆ.

2021ರ ವಿಧಾನಸಭಾ ಚುನಾವಣೆಯಲ್ಲಿ, ದಕ್ಷಿಣ ಬಂಗಾಳಕ್ಕೆ ಹೋಲಿಸಿದರೆ ಉತ್ತರ ಬಂಗಾಳದಲ್ಲಿ ಬಿಜೆಪಿಯ ಸಾಧನೆ ಉತ್ತಮವಾಗಿತ್ತು.

ಇದನ್ನೂ ಓದಿ: ಉಪಚುನಾವಣೆ: NDAಗೆ ಮೊದಲ ಆಘಾತಕೊಟ್ಟ ಪ್ರತಿಪಕ್ಷಗಳ INDIA ಮೈತ್ರಿಕೂಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...