Homeಕರ್ನಾಟಕಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ‘ಬುರುಡೆ’ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ

ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ‘ಬುರುಡೆ’ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

‘ದೇಶದಲ್ಲಿರುವ ಎಲ್ಲ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿಯವರಿಗೆ ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಅವರು ಸತ್ಯದ ತಲೆ ಮೇಲೆ ಹೊಡೆದಂತೆ ಬುರುಡೆ ಬಿಡ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಜಗತ್ತಿನಲ್ಲಿ ಸತ್ಯಾಗ್ರಹದ ಮೂಲಕ ಸ್ವಾತಂತ್ರ್ಯ ಗಳಿಸುವ ಮಾರ್ಗವನ್ನು ಸಾಧಿಸಿದವರು ಮಹಾತ್ಮಗಾಂಧಿಯವರು. ನೆಹರು-ಇಂದಿರಾ ಮತ್ತು ರಾಜೀವ್ ಗಾಂಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಆಧುನಿಕ ಭಾರತದ ನಿರ್ಮಾತೃಗಳು. ಕಾಂಗ್ರೆಸ್ ಜನರ ಪ್ರಗತಿಗಾಗಿ ಹುಟ್ಟಿದ ಹೋರಾಟದ ಸಿದ್ಧಾಂತ ಮತ್ತು ಚಳವಳಿ; ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್‌ನಿಂದ ಮಾತ್ರ’ ಎಂದರು.

‘ಹಿಂದೂ ಬೇರೆ – ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ’ ಎಂದು ವಾಗ್ದಾಳಿ ನಡೆಸಿದರು.

‘ಸ್ವಾತಂತ್ರ್ಯದ ಹೊಸ್ತಿಲಲ್ಲಿ ಭಾರತದ ತುಂಬೆಲ್ಲ ಸಾವಿರಾರು ಸಮಸ್ಯೆಗಳಿದ್ದವು. ಆ ಎಲ್ಲ ಸಮಸ್ಯೆಗಳಿಗೆ ಪರಿಹಾರವಾಗಿ ಬಂದಿದ್ದು ಕಾಂಗ್ರೆಸ್. ಈಗಲೂ ಹಲವು ಸಮಸ್ಯೆಗಳಿವೆ. ಇವುಗಳ ಪರಿಹಾರಕ್ಕೂ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ಕಾಂಗ್ರೆಸ್ ಹೋರಾಟದ ಮಾರ್ಗದಲ್ಲೇ ಅಧಿಕಾರಕ್ಕೆ ಬರುತ್ತದೆ. ಭಾರತ್ ಜೋಡೋ ನಂತರ ರಾಹುಲ್ ಗಾಂಧಿ ಅವರು ಮತ್ತೊಂದು ಸುತ್ತು ಪಾದಯಾತ್ರೆ ಹೊರಟಿದ್ದಾರೆ. ರಾಹುಲ್ ಗಾಂಧಿ ಅವರು ದೇಶದ ನೇತೃತ್ವ ವಹಿಸುತ್ತಾರೆ, ಪ್ರಧಾನಿ ಆಗುತ್ತಾರೆ ಎಂಬ ಭರವಸೆ ನನಗಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಮಹಾತ್ಮ ಗಾಂಧಿಯವರು ಬ್ರಿಟಿಷರನ್ನು ಅಹಿಂಸೆಯ ಮೂಲಕ ಮಣಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಹುತಾತ್ಮರಾದರು. ಲಕ್ಷಾಂತರ ಮಂದಿಯ ತ್ಯಾಗ-ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಸ್ವಾತಂತ್ರ್ಯ ಚಳವಳಿ ನಡೆಯಿತು’ ಎಂದರು.

‘ಬಿಜೆಪಿ, ಜನ ಸಂಘ, ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದ ಒಬ್ಬೇ ಒಬ್ಬರು ಬ್ರಿಟಿಷರ ವಿರುದ್ಧ ಹೋರಾಟ ಮಾಡಲಿಲ್ಲ. ಬ್ರಿಟಿಷರ ಅವಧಿಯಲ್ಲೇ ಆರ್‌ಎಸ್‌ಎಸ್ ಹುಟ್ಟಿತ್ತು. ಆದರೆ, ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಒಂದೇ ಒಂದು ದಿನವೂ ಇವರು ಭಾಗವಹಿಸಲಿಲ್ಲ. ಆದ್ದರಿಂದ ಬಿಜೆಪಿಯ ಡೋಂಗಿತನವನ್ನು ಅರ್ಥ ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಸಬೇಕು’ ಎಂದು ಹೇಳಿದರು.

‘ಸ್ವಾತಂತ್ರ್ಯಾ ನಂತರ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ವ ರಂಗಗಳಲ್ಲೂ ಪ್ರಗತಿ ಸಾಧಿಸಿತು. ದೇಶದಲ್ಲಿರುವ ಎಲ್ಲ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿಯವರು ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಇಂಟರ್ ನೆಟ್ ದೇಶದ ತುಂಬ ವಿಸ್ತರಿಸಲು ಅಡಿಪಾಯ ಹಾಕಿದವರು ರಾಜೀವ್ ಗಾಂಧಿ. ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ’ ಎಂದು ಅವರು ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ಗೋವಿಂದರಾಜು, ಮಾಜಿ ಸಚಿವೆ ರಾಣಿ ಸತೀಶ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ; ರಾಮಮಂದಿರ ಉದ್ಘಾಟನೆಗೆ ಆಹ್ವಾನ: ‘ಕೈ’ ನಾಯಕರ ಭಿನ್ನ ಹೇಳಿಕೆ, ಕೇರಳ ಕಾಂಗ್ರೆಸ್‌ನಲ್ಲಿ ಗೊಂದಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...