Homeಕರ್ನಾಟಕಹಿಜಾಬ್ ನಿಷೇಧದ ಪ್ರತಿಭಟನಾಕಾರರನ್ನು 'ಭಯೋತ್ಪಾದಕರು' ಎಂದವನಿಗೆ ಬಿಜೆಪಿ ಟಿಕೆಟ್

ಹಿಜಾಬ್ ನಿಷೇಧದ ಪ್ರತಿಭಟನಾಕಾರರನ್ನು ‘ಭಯೋತ್ಪಾದಕರು’ ಎಂದವನಿಗೆ ಬಿಜೆಪಿ ಟಿಕೆಟ್

- Advertisement -
- Advertisement -

ರಾಜ್ಯದಲ್ಲಿ ಹಿಜಾಬ್ ನಿಷೇಧದ ವಿರುದ್ಧ ಪ್ರತಿಭಟನೆ ಮಾಡುವವರನ್ನು ಭಯೋತ್ಪಾದಕರು ಎಂದು ಕರೆದಿದ್ದ ಯಶಪಾಲ್ ಸುವರ್ಣಗೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಿದೆ.

ಯಶಪಾಲ್ ಸುವರ್ಣ ಅವರು ಉಡುಪಿಯ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿದ್ದಾರೆ. ಕಳೆದ ವರ್ಷ ಕಾಲೇಜಿನಲ್ಲಿ ಹಿಜಾಬ್ ಧರಿಸುವುದನ್ನು ನಿಲ್ಲಿಸಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆ ರಾಜ್ಯದ ಇತರ ಭಾಗಗಳಿಗೆ ಹರಡುತ್ತಿದ್ದಂತೆ, ಬಿಜೆಪಿ ಸರ್ಕಾರವು ”ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ” ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಿತು.

ಪ್ರತಿಭಟನೆಯ ಸಂದರ್ಭದಲ್ಲಿ, ಸರ್ಕಾರದ ಹಿಜಾಬ್ ನಿಷೇಧ ಆದೇಶದ ವಿರುದ್ಧ ನ್ಯಾಯಾಲಯಕ್ಕೆ ಹೋದ ಆರು ವಿದ್ಯಾರ್ಥಿನಿಯರು ”ಭಯೋತ್ಪಾದಕರು” ಎಂದು ಸುವರ್ಣ ಹೇಳಿದ್ದರು. ಮಂಗಳವಾರ ಈ ಬಗ್ಗೆ ಮಾತನಾಡಿದ ಅವರು, ದೇಶದ ಕಾನೂನನ್ನು ಪಾಲಿಸದವರು ದೇಶವಿರೋಧಿಗಳು ಎಂಬುದಕ್ಕೆ ಈಗಲೂ ಅದೇ ಧೋರಣೆ ಇದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಯಶಪಾಲ್ ಸುವರ್ಣ ಅವರು ಹಿಂದುತ್ವದ ಸೈದ್ಧಾಂತಿಕ ಕುಟುಂಬದಿಂದ ಬಂದಿದ್ದಾರೆ. ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಚಿತ್ತಾಪುರ: ಗಡಿಪಾರಾಗಿದ್ದ ರೌಡಿಶೀಟರ್‌ ಮಣಿಕಂಠಗೆ ಬಿಜೆಪಿ ಟಿಕೆಟ್

ಸುವರ್ಣ ಅವರು ಹಿಂದುತ್ವ ಸಂಘಟನೆಯಾದ ಬಜರಂಗದಳಕ್ಕೆ ಸೇರುವ ಮೊದಲು ಆರ್‌ಎಸ್‌ಎಸ್‌ನ ವಿದ್ಯಾರ್ಥಿ ವಿಭಾಗ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಸದಸ್ಯರಾಗಿದ್ದರು. 2005ರಲ್ಲಿ ಕರುಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ ತಂದೆಮಗನನ್ನು ಬಜರಂಗದಳದವರು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ್ದರು. ಆ ಪ್ರಕರಣದಲ್ಲಿ ಈ ಸುವರ್ಣ ಕೂಡ ಒಬ್ಬ ಆರೋಪಿಯಾಗಿದ್ದನು.

ಬಿಜೆಪಿ ಮಂಗಳವಾರ ಪ್ರಕಟಿಸಿರುವ 189 ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾವುದೇ ಮುಸ್ಲಿಮರ ಹೆಸರಿಲ್ಲ. ಹಾಲಿ ಶಾಸಕ ರಘಪತಿ ಭಟ್ ಅವರನ್ನು ಕೈಬಿಟ್ಟು, ಮುಸ್ಲಿಂ ವಿದ್ಯಾರ್ಥಿನಿಯರನ್ನು ಭಯೋತ್ಪಾದಕರು ಎಂದು ಹೇಳಿದ್ದ ಸುವರ್ಣಗೆ ಟಿಕೆಟ್ ನೀಡಿದೆ.

ಕರ್ನಾಟಕ ಹಿಜಾಬ್ ನಿಷೇಧ
ಕಳೆದ ವರ್ಷ ಜನವರಿಯಲ್ಲಿ ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಗುಂಪೊಂದು ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸದಂತೆ ತಡೆದ ನಂತರ ವಿವಾದಕ್ಕೆ ಕಾರಣವಾಗಿತ್ತು.

ಈ ವಿಚಾರ ರಾಜ್ಯದ್ಯಾಂತ ದೊಡ್ಡ ವಿವಾದವನ್ನೇ ಹುಟ್ಟುಹಾಕಿತು. ವಿದ್ಯಾರ್ಥಿಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು. ಫೆಬ್ರವರಿ 5ರಂದು, ಕರ್ನಾಟಕ ಸರ್ಕಾರವು ”ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ” ಬಟ್ಟೆಗಳನ್ನು ನಿಷೇಧಿಸುವ ಆದೇಶವನ್ನು ಜಾರಿಗೊಳಿಸಿತು.

ಸರ್ಕಾರದ ಈ ಆದೇಶದ ವಿರುದ್ಧ ಉಡುಪಿ ಕಾಲೇಜಿನ ಆರು ವಿದ್ಯಾರ್ಥಿನಿಯರು ಹೈಕೋರ್ಟ್‌ ಮೆಟ್ಟಿಲೇರಿದರು. ಆದರೆ ಹೈಕೋರ್ಟ್ ಸರ್ಕಾರದ ಆದೇಶವನ್ನು ಎತ್ತಿಹಿಡಿಯಿತು. ಹಿಜಾಬ್ ಧರಿಸುವುದು ಇಸ್ಲಾಂಗೆ ಅನಿವಾರ್ಯವಲ್ಲ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿತು.

ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಯಿತು, ಅಲ್ಲಿ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಹೇಮಂತ್ ಗುಪ್ತಾ ಅವರ ದ್ವಿಸದಸ್ಯ ಪೀಠವು ಅಕ್ಟೋಬರ್‌ನಲ್ಲಿ ಈ ವಿಷಯದ ಕುರಿತು ದ್ವಂದ್ವ ತೀರ್ಪು ನೀಡಿತು. ಮುಂದಿನ ಕ್ರಮದ ಕುರಿತು ಅವರ ನಿರ್ದೇಶನಕ್ಕಾಗಿ ವಿಷಯವನ್ನು ಮುಖ್ಯ ನ್ಯಾಯಾಧೀಶರ ಮುಂದೆ ಇಡಲಾಗುವುದು ಎಂದು ನ್ಯಾಯಾಧೀಶರು ಹೇಳಿದರು. ಈ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಇನ್ನೂ ಪೀಠವನ್ನು ರಚಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...