Homeಮುಖಪುಟಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

ಬಿಲ್ಕಿಸ್ ಬಾನೋ ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದಿದ್ದ ಶಾಸಕನಿಗೆ ಮತ್ತೆ ಟಿಕೆಟ್ ನೀಡಿದ ಬಿಜೆಪಿ

- Advertisement -
- Advertisement -

ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಉತ್ತಮ ಸಂಸ್ಕಾರ ಅಥವಾ ಗುಣಗಳನ್ನು ಹೊಂದಿರುವ ಬ್ರಾಹ್ಮಣ ಗಂಡಸರು ಎಂದು ಹೇಳಿದ್ದ ಸಿ.ಕೆ.ರೌಲ್ಜಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೋದ್ರಾ ಕ್ಷೇತ್ರದಿಂದ ಸಿ.ಕೆ.ರೌಲ್ಜಿ ಅವರನ್ನು ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರ್ಚ್ 3, 2002ರಂದು ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನೋ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು. ಆ ಸಮಯದಲ್ಲಿ 19 ವರ್ಷದವರಾಗಿದ್ದ ಬಿಲ್ಕಿಸ್‌ ಗರ್ಭಿಣಿಯಾಗಿದ್ದರು. ಬಿಲ್ಕಿಸ್‌ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬದ ಹದಿನಾಲ್ಕು ಸದಸ್ಯರನ್ನು ಅಹಮದಾಬಾದ್ ಬಳಿ ಗಲಭೆಕೋರರು ಹತ್ಯೆ ಮಾಡಿದ್ದರು. ಒಬ್ಬ ವ್ಯಕ್ತಿಯಂತೂ ತನ್ನ ತಾಯಿಯ ತೋಳುಗಳಿಂದ ಮಗುವನ್ನು ಕಿತ್ತುಕೊಂಡು ಆ ಮಗುವಿನ ತಲೆಯನ್ನು ಬಂಡೆಯ ಮೇಲೆ ಬಡಿದಿದ್ದನು. ಇಂಥವರನ್ನು ಸಂಸ್ಕಾರಿ ಬ್ರಾಹ್ಮಣರೆಂದು ಕರೆದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಎಲ್ಲಾ 11 ಅಪರಾಧಿಗಳನ್ನು ಗುಜರಾತ್ ಸರ್ಕಾರವು ಆಗಸ್ಟ್ 15 ರಂದು ಬಿಡುಗಡೆ ಮಾಡಿತ್ತು. ಸನ್ನಡತೆಯ ನೀತಿಯ ಅಡಿಯಲ್ಲಿ ಅಪರಾಧಿಗಳ ಅರ್ಜಿಯನ್ನು ಅನುಮೋದಿಸಿದ ನಂತರ ಗೋಧ್ರಾ ಜೈಲಿನಿಂದ ಬಿಡುಗಡೆ ಮಾಡಲಾಯಿತ್ತು.

ಗೋಧ್ರಾ ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿದ್ದ ರೌಲ್ಜಿ ಕಳೆದ ಆಗಸ್ಟ್‌ನಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಬಿಲ್ಕಿಸ್‌ ಪ್ರಕರಣದ ಅಪರಾಧಿಗಳು ಒಳ್ಳೆಯವರು ಎಂದು ತಿಳಿಸಿದ್ದರು.

“ಅವರು ಅಪರಾಧ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದು ನನಗೆ ತಿಳಿದಿಲ್ಲ…” ಎಂದು ರೌಲ್ಜಿ ಸಂದರ್ಶನವೊಂದರಲ್ಲಿ ಹೇಳಿದ್ದರು. “ಜೈಲಿನಲ್ಲಿ ಅವರ ನಡತೆ ಚೆನ್ನಾಗಿತ್ತು, ಅವರು ಬ್ರಾಹ್ಮಣರು… ಉತ್ತಮ ಸಂಸ್ಕಾರ [ಮೌಲ್ಯಗಳು] ಹೊಂದಿದವರು” ಎಂದು ಶ್ಲಾಘಿಸಿದ್ದರು.

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಅಡಿಯಲ್ಲಿ ಗುಜರಾತ್ ಸರ್ಕಾರ ರಚಿಸಿದ್ದ ಗೋಧ್ರಾ ಜೈಲು ಸಲಹಾ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಅಪರಾಧಿಗಳನ್ನು ಬಿಡುಗಡೆ ಮಾಡುವ ನಿರ್ಧಾರವನ್ನು ಮಾಡಲಾಗಿದೆ. ಕೋಮುಗಲಭೆ ಪ್ರಕರಣಗಳಲ್ಲಿ ಅಮಾಯಕರನ್ನು ಹೆಚ್ಚಾಗಿ ಗುರಿಯಾಗಿಸಲಾಗುತ್ತದೆ ಎಂದು ಸಮಿತಿಯ ಭಾಗವಾಗಿದ್ದ ರೌಲ್ಜಿ ಹೇಳಿದ್ದರು.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯೊಂದಿಗೆ ಡಿಸೆಂಬರ್ 8ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ.

“ಬಿಲ್ಕಿಸ್ ಬಾನೋ ಪ್ರಕರಣದ 11 ಅಪರಾಧಿಗಳು 14 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ನಡವಳಿಕೆ ಉತ್ತಮವಾಗಿದೆ ಎಂದು ಕಂಡುಬಂದಿದೆ ಮತ್ತು ಕೇಂದ್ರ ಸರ್ಕಾರವು ಅಪರಾಧಿಗಳ ಬಿಡುಗಡೆಗೆ ಅನುಮೋದನೆ ನೀಡಿದೆ” ಎಂದು ಗುಜರಾತ್ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಕೈದಿಗಳಿಗೆ ನೀಡಲಾದ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಗುಜರಾತ್ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. “ಪೊಲೀಸ್ ವರಿಷ್ಠಾಧಿಕಾರಿ, ಸಿಬಿಐ, ಮುಂಬೈ ವಿಶೇಷ ಅಪರಾಧ ವಿಭಾಗ ಮತ್ತು ವಿಶೇಷ ಸಿವಿಲ್ ನ್ಯಾಯಾಧೀಶರು (ಸಿಬಿಐ), ಗ್ರೇಟರ್ ಬಾಂಬೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್” ಕಳೆದ ವರ್ಷದ ಮಾರ್ಚ್‌ನಲ್ಲಿ ಕೈದಿಗಳ ಬಿಡುಗಡೆಯನ್ನು ವಿರೋಧಿಸಿತ್ತು.

ಇದನ್ನೂ ಓದಿರಿ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಆಹ್ವಾನಿಸದೆ ಅವಮಾನಿಸಿದ ಬಿಜೆಪಿ: ಜೆಡಿಎಸ್ ಆಕ್ರೋಶ

ಗೋಧ್ರಾ ಉಪ ಕಾರಾಗೃಹದ ಅಧೀಕ್ಷಕರಿಗೆ ಬರೆದ ಪತ್ರದಲ್ಲಿ ಸಿಬಿಐ ಅಧಿಕಾರಿಯು, “ಇಲ್ಲಿನ ಅಪರಾಧವು ಘೋರ ಮತ್ತು ಗಂಭೀರವಾಗಿದೆ. ಆದ್ದರಿಂದ ಅವರನ್ನು ಅಕಾಲಿಕವಾಗಿ ಬಿಡುಗಡೆ ಮಾಡಲಾಗುವುದಿಲ್ಲ. ಅವರಿಗೆ ಯಾವುದೇ ವಿನಯವನ್ನು ನೀಡಲಾಗುವುದಿಲ್ಲ” ಎಂದು ಹೇಳಿದ್ದರು.

ಮುಂಬೈನಲ್ಲಿ ವಿಚಾರಣೆ ನಡೆಸಲಾಗಿರುವುದರಿಂದ ಮಹಾರಾಷ್ಟ್ರ ಸರ್ಕಾರದ 2008ರ ನೀತಿ ಅನ್ವಯವಾಗಬೇಕು ಎಂದು ಸಿವಿಲ್ ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದರು.

“ಇಲ್ಲಿನ ಎಲ್ಲಾ ಆರೋಪಿಗಳು ಅಮಾಯಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಗಳೆಂದು ಕಂಡುಬಂದಿದೆ. ಅಪರಾಧಿಗಳಿಗೆ ಸಂತ್ರಸ್ತರು ಶತ್ರುಗಳಾಗಿರಲಿಲ್ಲ ಅಥವಾ ಸಂತ್ರಸ್ತೆಯೊಂದಿಗೆ ಯಾವುದೇ ಸಂಬಂಧವೂ ಇರಲಿಲ್ಲ. ಸಂತ್ರಸ್ತರು ನಿರ್ದಿಷ್ಟ ಧರ್ಮಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಮಾತ್ರ ಅಪರಾಧ ಎಸಗಲಾಗಿದೆ. ಈ ವೇಳೆ ಅಪ್ರಾಪ್ತ ಮಕ್ಕಳನ್ನೂ ಬಿಡಲಿಲ್ಲ. ಇದು ಮಾನವೀಯತೆಯ ವಿರುದ್ಧದ ಅಪರಾಧದ ಅತ್ಯಂತ ಕೆಟ್ಟ ರೂಪವಾಗಿದೆ. ಇದು ಸಮಾಜದ ಆತ್ಮಸಾಕ್ಷಿಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಸಿವಿಲ್ ನ್ಯಾಯಾಧೀಶರು ಹೇಳಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋಲ್ಕತ್ತಾದಲ್ಲಿ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಕೊಲೆ ಪ್ರಕರಣ: ಮೂವರ ಬಂಧನ

0
ಭಾರತಕ್ಕೆ ಚಿಕಿತ್ಸೆಗೆಂದು ಬಂದು ಕಳೆದ ವಾರ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅವರನ್ನು ಬುಧವಾರ ಕೋಲ್ಕತ್ತಾದಲ್ಲಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ಢಾಕಾದಲ್ಲಿ ಸುದ್ದಿಗೋಷ್ಠಿಯಲ್ಲಿ...