Homeಕರ್ನಾಟಕಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಸಿಡಿದೆದ್ದ ಈಶ್ವರಪ್ಪ, ಯಡಿಯೂರಪ್ಪ ವಿರುದ್ದ ವಾಗ್ದಾಳಿ: ಬಂಡಾಯದ ಸುಳಿವು

ಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಸಿಡಿದೆದ್ದ ಈಶ್ವರಪ್ಪ, ಯಡಿಯೂರಪ್ಪ ವಿರುದ್ದ ವಾಗ್ದಾಳಿ: ಬಂಡಾಯದ ಸುಳಿವು

- Advertisement -
- Advertisement -

ಲೋಕಸಭೆ ಚುನಾವಣೆಗೆ ಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಬಿಜೆಪಿ ನಾಯಕ ಕೆ.ಎಸ್‌ ಈಶ್ವರಪ್ಪ ಸಿಡಿದೆದ್ದಿದ್ದಾರೆ. “ನನ್ನ ಮಗನಿಗೆ ಟಿಕೆಟ್ ತಪ್ಪಿಸಿದ್ದು ಯಡಿಯೂರಪ್ಪ” ಎಂದು ನೇರವಾಗಿ ಹೇಳಿದ್ದಾರೆ.

ಬುಧವಾರ ಸಂಜೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗದ ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯಡಿಯೂರಪ್ಪ ಅವರು ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿಗೆ ಪಟ್ಟು ಹಿಡಿದು ಟಿಕೆಟ್ ಕೊಡಿಸಿದ್ದಾರೆ. ಆದರೆ, ನನ್ನ ಮಗ ಕಾಂತೇಶ್‌ಗೆ ಅನ್ಯಾಯ ಮಾಡಿದ್ರು” ಎಂದಿದ್ದಾರೆ.

“ರಾಜ್ಯದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಲುಕಿದೆ. ಕುಟುಂಬದ ಕೈಯಿಂದ ಪಕ್ಷ ರಕ್ಷಿಸಬೇಕಿದೆ. ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ ಬಿಟ್ಟು ಬೇರೆ ಲಿಂಗಾಯತ ನಾಯಕರು ರಾಜ್ಯದಲ್ಲಿ ಇಲ್ವಾ? ಪಕ್ಷದ ಚುನಾವಣಾ ಸಮಿತಿಯ ಸಭೆಯಲ್ಲಿ ಹಾವೇರಿ ಟಿಕೆಟ್ ಕಾಂತೇಶ್‌ಗೆ ಕೊಡಿ ಎಂದು ಸ್ವತಃ ಬೊಮ್ಮಾಯಿ ಅವರೇ ಹೇಳಿದ್ದರು. ಆದರೂ, ಯಡಿಯೂರಪ್ಪ ಹಠ ಹಿಡಿದು ಅವರಿಗೇ ಯಾಕೆ ಟಿಕೆಟ್ ಕೊಡಿಸಿದ್ದು ಯಾಕೆ?” ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ.

“ನಾನು 40 ವರ್ಷಗಳಿಂದ ಈ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ನನಗೆ ಮಾತ್ರವಲ್ಲದೆ, ಪ್ರತಾಪ್ ಸಿಂಹ, ಸಿ.ಟಿ ರವಿ, ನಳಿನ್ ಕುಮಾರ್ ಕಟೀಲ್, ಸದಾನಂದಗೌಡರಂತಹ ಪಕ್ಷದ ನಾಯಕರಿಗೆ ಅನ್ಯಾಯವಾಗಿದೆ. ಬಿಎಸ್‌ವೈ ಪಕ್ಷದ ಕತ್ತು ಹಿಸುಕಿದ್ದಾರೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸಭೆ ಬಳಿಕ ತೀರ್ಮಾನ :

“ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಒಂದು ಕುಟುಂಬದ ಕೈಯಿಂದ ಪಕ್ಷವನ್ನು ರಕ್ಷಿಸುವಂತೆ ನಾನು ವಿನಂತಿ ಮಾಡುತ್ತೇನೆ. ಸ್ವತಂತ್ರವಾಗಿ ನಿಲ್ಲಿ, ಆಗ ಕೇಂದ್ರದ ನಾಯಕರಿಗೆ ನಿಮ್ಮ ಬೆಲೆ ಅರ್ಥವಾಗುತ್ತದೆ ಎಂದು ನನ್ನ ಅಭಿಮಾನಿಗಳು, ಹಿತೈಷಿಗಳು ಒತ್ತಾಯಿಸುತ್ತಿದ್ದಾರೆ. ಬೆಂಬಲಿಗರ ಸಭೆ ಬಳಿಕ ಮುಂದಿನ ತೀರ್ಮಾನ ಪ್ರಕಟಿಸುತ್ತೇನೆ. ಅಭಿಮಾನಿಗಳು ಹೇಳಿದಂತೆ ನಾನು ಮುಂದುವರೆಯುತ್ತೇನೆ” ಎಂದು ಈಶ್ವರಪ್ಪ ತಿಳಿಸಿದ್ದಾರೆ.

9 ಹಾಲಿ ಸಂಸದರಿಗೆ ಟಿಕೆಟ್ ಮಿಸ್ :

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ನಿನ್ನೆ (ಮಾ.13) ಸಂಜೆ ಪ್ರಕಟಗೊಂಡಿದೆ. ಒಟ್ಟು 72 ಅಭ್ಯರ್ಥಿಗಳ ಪಟ್ಟಿಯಲ್ಲಿ ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಈ ಬಾರಿ 9 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ. ಈ ಪೈಕಿ ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್, ಸದಾನಂದಗೌಡ ಸೇರಿದಂತೆ ಪ್ರಮುಖರು ಇದ್ದಾರೆ. ಇನ್ನು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಸಿ.ಟಿ ರವಿ ಮತ್ತು ಹಾವೇರಿ-ಗದಗ ಕ್ಷೇತ್ರದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ನಿರಾಸೆಯಾಗಿದೆ.

ಗಮನಾರ್ಹವಾಗಿ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹ ಬದಲಿಗೆ ಮೈಸೂರು ರಾಜ ಕುಟುಂಬದ ಉತ್ತರಾಧಿಕಾರಿ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರದಿಂದ ಕಣಕ್ಕಿಳಿಸಲಾಗಿದೆ.

ಇದನ್ನೂ ಓದಿ : ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ: ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್ ಸೇರಿ ರಾಜ್ಯದ 9 ಹಾಲಿ ಸಂಸದರಿಗೆ ಕೈ ತಪ್ಪಿದ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...