Homeಕರ್ನಾಟಕಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

ಬಿಜೆಪಿಯಿಂದ MLA ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ ಆರೋಪ: ಸಿಎಂಗೆ ಬರೆದ ಪತ್ರ ವೈರಲ್‌

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ‘ಮೀಸಲು ವಿಧಾನಸಭಾ ಕ್ಷೇತ್ರ (ಎಸ್‌.ಸಿ)ದಲ್ಲಿ ಟಿಕೆಟ್ ಕೊಡಿಸುವುದಾಗಿ ಬಿಜೆಪಿ ಮುಖಂಡರು ನಂಬಿಸಿ ಹಣ ಪಡೆದು ವಂಚಿಸಿದ್ದಾರೆ ಎಂದು ಪಿ.ಡಬ್ಲ್ಯೂಡಿ ಇಲಾಖೆಯ ನಿವೃತ್ತ ಸಹಾಯಕ ಅಭಿಯಂತರ ಶಿವಮೂರ್ತಿ ಎಂಬುವವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ವೈರಲ್ ಆಗಿದೆ.

ʼಪುತ್ತೂರಿನ ಬಿಜೆಪಿ ಮುಖಂಡರ ಶೇಖರ್.ಎಸ್.ಪಿ. ಮತ್ತು ಕೊಟ್ಟೂರಿನ ರೇವಣಸಿದ್ದಪ್ಪ ಎಂಬುವವರು ಹಣ ಪಡೆದು ವಂಚನೆ ಮಾಡಿದ್ದಾರೆʼʼ ಎಂದು ಶಿವಮೂರ್ತಿಯವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಈ ಪತ್ರ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ”ಹಣ ವಂಚನೆ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ನನ್ನ ಹಣವನ್ನು ವಾಪಸ್ಸು ಕೊಡಿಸಿ ನ್ಯಾಯ ಒದಗಿಸಬೇಕು” ಎಂದು ದೂರುದಾರರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?

”ರೇವಣಸಿದ್ದಪ್ಪ ಎಂಬುವವನು ನನ್ನ ನಿವೃತ್ತಿ ಕಾರ್ಯಕ್ರಮದಲ್ಲಿ ಪರಿಚಯವಾಗಿದ್ದು, ಆ ಬಳಿಕ ಒಂದೆರಡು ಕಾರ್ಯಕ್ರಮದಲ್ಲಿ ಭೇಟಿಯಾದಾಗ, 2023ರ ವಿಧಾನಸಭಾ ಚುನಾವಣೆಯಲ್ಲಿ ನನಗೆ ಟಿಕೆಟ್ ಕೊಡಿಸುವುದಾಗಿ 2022ರ ಅಕ್ಟೋಬರ್ 23 ರಂದು ಬೆಂಗಳೂರಿನ ಒಂದು ಹೋಟೆಲ್‌ನಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಶೇಖರ್ ಎನ್.ಪಿ. ಎಂಬವರನ್ನು ಪರಿಚಯಿಸಿದ್ದಾನೆ. ಶೇಖರ್.ಎಸ್.ಪಿ. ನನ್ನ ಪರಿಚಯ ಆದ ಮೇಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಬೆಂಗಳೂರಿನ ಬಿಜೆಪಿ ಕಚೇರಿಗೆ ಕರೆದುಕೊಂಡು ಹೋಗಿ ಮತ್ತು ಕಟೀಲು ಅವರು ನನ್ನ ಆತ್ಮೀಯ ಸ್ನೇಹಿತರೆಂದು ಹೇಳಿ ಪರಿಚಯಿಸಿದ್ದರು. ಆ ಬಳಿಕ ನಳಿನ್ ಕುಮಾರ್ ಕಟೀಲು ನನ್ನ ಬಳಿ ಮಾತನಾಡಿ ಟಿಕೆಟ್‌ ವಿಚಾರದ ಎಲ್ಲಾ ವ್ಯವಹಾರವನ್ನು ಶೇಖರ್ ಅವರ ಬಳಿ ಮಾತನಾಡಿ ಎಂದು ತಿಳಿಸಿದ್ದಾರೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

”ಆ ನಂತರ ಶೇಖರ್.ಎನ್.ಪಿ. ಅವರು ನನ್ನ ಬಳಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹಣವನ್ನು ಕೇಳುತ್ತಾರೆ, ಟಿಕೆಟ್‌ ಸಿಗದೆ ಇದ್ದ ಪಕ್ಷದಲ್ಲಿ ನಿಮ್ಮ ಹಣವನ್ನು ವಾಪಸ್ಸು ನೀಡುತ್ತೇನೆಂದು ತಿಳಿಸುತ್ತಾರೆ. ಇದರಂತೆ 2022 ಆಕ್ಟೋಬರ್ 9ರಿಂದ ಶುರುವಾದ ಹಣದ ವ್ಯವಹಾರ ಎಪ್ರಿಲ್ 2023 ಕ್ಕೆ ರೂ.2 ಕೋಟಿ 55 ಲಕ್ಷದ ವರೆಗೂ ಹಣ ಪಡೆದುಕೊಂಡಿರುತ್ತಾರೆ” ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

”2002 ಅಕ್ಟೋಬರ್ 15ರಂದು ಚಿತ್ರದುರ್ಗದಲ್ಲಿ ರಸ್ತೆಯ ಬಳಿ ಶೇಖರ್ ಒಬ್ಬ ವ್ಯಕ್ತಿಯನ್ನು ಕಳುಹಿಸಿ 50 ಲಕ್ಷ ರೂ. ಗಳ ನಗದು ಹಣವನ್ನು ಪಡೆದಿದ್ದಾನೆ. ತದನಂತರ ಆನ್‌ಲೈನ್ ಪೇಮೆಂಟ್ ಸೇರಿ ಇದೇ ತರ ರೂ.1 ಕೋಟಿ 65 ಲಕ್ಷ ರೂ. ಶೇಖರ್ ಎನ್.ಪಿ. ಅವರಿಗೆ ಸೇರಿರುತ್ತದೆ”ʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.

”ಇದರ ಜೊತೆಗೆ ಕೊಟ್ಟೂರು ತಾಲೂಕಿನ, ಬೆನಕನಹಳ್ಳಿ ಗ್ರಾಮದ ಬಿಜೆಪಿ ಮುಖಂಡನಾಗಿದ್ದ ರೇವಣಸಿದ್ದಪ್ಪ ಬೆಂಗಳೂರಿನ ಒಂದು ಹೋಟೆಲ್‌ಗೆ ಕರೆದುಕೊಂಡು, ಹೋಗಿ, ಬಿ.ಜೆ.ಪಿ ಹಿರಿಯ ನಾಯಕರಿಗೆ ಮತ್ತು ಇತ್ತರರಿಗೆ ಕೊಡಬೇಕೆಂದು ಹೇಳಿ 50 ಲಕ್ಷ ರೂ. ಗಳ ನಗದನ್ನು ಕುಡ್ಲಿಗಿ ತಾಲೂಕಿನ ಚಿಕ್ಕಹೋಗಿಗಹಳ್ಳಿ ಗ್ರಾಮದ ಆರೆಸ್ಸೆಸ್ ಮುಖಂಡ ನಾಗಣ್ಣ ಎಂಬವರ ‌ಸಮ್ಮುಖದಲ್ಲಿ ಪಡೆದಿದ್ದಾನೆ” ಎಂದು ಶಿವಮೂರ್ತಿ ಪತ್ರದಲ್ಲಿ ಆರೋಪಿಸಿದ್ದಾರೆ.

”ಈ ಹಣವನ್ನು ನನ್ನ ಸ್ವಂತ ನಿವೇಶನವನ್ನು ಮಾರಿ ನನ್ನ ಜಮೀನಿನ ಬೆಳೆಗಳನ್ನು ಮಾರಾಟ ಮಾಡಿ, ಸ್ನೇಹಿತರಿಂದ ಸಾಲ ಪಡೆದು ಹಾಗೂ ನಿವೃತ್ತಿಯಿಂದ ಬಂದ ಹಣವನ್ನೆಲ್ಲಾ ಸೇರಿಸಿ ಇವರಿಗೆ ಕೊಟ್ಟಿರುತ್ತೇನೆ. ಇದಾದ ಮೇಲೆ ನಂತರದ ದಿನಗಳಲ್ಲಿ 2023ರ ಎಪ್ರಿಲ್ ತಿಂಗಳಿನಲ್ಲಿ ಹಗರಿಬೊಮ್ಮನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದ (ಎಸ್.ಸಿ) ಬಿಜೆಪಿ ಟಿಕೆಟ್ ಘೋಷಣೆಯಾದಾಗ, ಅದರಲ್ಲಿ ನನ್ನ ಬದಲಿಗೆ ಬಿ.ರಾಮು ಎಂಬುವವರಿಗೆ ಟಿಕೆಟ್ ಸಿಗುತ್ತದೆ.‌ ಇದರಿಂದ ನನಗೆ ವಂಚನೆ ಆಗಿರುವುದು ಅರಿವಾಗಿದೆ” ಎಂದು ತಿಳಿಸಿದ್ದಾರೆ.

”ಹಣ ಪಡೆದವರಿಗೆ ಕರೆ ಮಾಡಿದಾಗ ನನ್ನ ಕರೆ ಸ್ವೀಕರಿಸಿಲ್ಲ. ಬೇರೆಯವರ ಫೋನ್ ನಿಂದ್ ಕರೆ ಮಾಡಿ ಹಣ ಕೊಡುವಂತೆ ಒತ್ತಾಯಿಸಿದರೆ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಹಾಗಾಗಿ ನನ್ನ ಹಣವನ್ನು ನನಗೆ ಕೊಡಿಸಿ ನ್ಯಾಯ ಒದಗಿಸಿ ಕೊಡಬೇಕು” ಎಂದು ಮುಖ್ಯಮಂತ್ರಿಗಳನ್ನು ಶಿವಮೂರ್ತಿ ಒತ್ತಾಯಿಸಿದ್ದಾರೆ.

ವೈರಲ್ ಆಗಿರುವ ಪತ್ರದಲ್ಲಿ ಶಿವಮೂರ್ತಿ ಅವರ ಸಹಿ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟನೆ ಅವರು ನೀಡಿಲ್ಲ.

ಇದನ್ನೂ ಓದಿ: ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ: ಹಾಲಶ್ರೀ ಸ್ವಾಮೀಜಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...