Homeಕರ್ನಾಟಕಒಕ್ಕೂಟ ಸರ್ಕಾರದ ಹೊಸ ಮಂತ್ರಿಗಳನ್ನು ಪರಿಚಯಿಸಲು ಬಿಜೆಪಿಯಿಂದ ‘ಜನಾಶೀರ್ವಾದ ಯಾತ್ರೆ’

ಒಕ್ಕೂಟ ಸರ್ಕಾರದ ಹೊಸ ಮಂತ್ರಿಗಳನ್ನು ಪರಿಚಯಿಸಲು ಬಿಜೆಪಿಯಿಂದ ‘ಜನಾಶೀರ್ವಾದ ಯಾತ್ರೆ’

- Advertisement -
- Advertisement -

ರಾಜ್ಯದ ಬಿಜೆಪಿ ಘಟಕವು ಆಗಸ್ಟ್ 16 ರಿಂದ “ಜನಾಶೀರ್ವಾದ ಯಾತ್ರೆ” ಯನ್ನು ಕೈಗೆತ್ತಿಕೊಳ್ಳಲಿದೆ. ಒಕ್ಕೂಟ ಸರ್ಕಾರದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಯಾದ ರಾಜ್ಯದ ನಾಲ್ಕು ಹೊಸ ಮಂತ್ರಿಗಳನ್ನು ಕರ್ನಾಟಕದ ಜನರಿಗೆ ಪರಿಚಯಿಸುವ ಉದ್ದೇಶದಿಂದ ಈ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.

ಸಂಸತ್‌ ಅಧಿವೇಶನದಲ್ಲಿ ಹೊಸ ಮಂತ್ರಿಗಳನ್ನು ಪರಿಚಯಿಸಲು ಪ್ರಧಾನಿ ಮೋದಿ ಅನುಮತಿ ನೀಡದ ಕಾರಣ, ಇಂತಹ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಘಟಕಗಳಿಗೆ ಬಿಜೆಪಿ ಕೇಂದ್ರ ನಾಯಕತ್ವ ಸೂಚನೆ ನೀಡಿದೆ. ಆಗಸ್ಟ್ 16 ರಿಂದ ಐದು ದಿನಗಳವರೆಗೆ ನಾಲ್ಕು ತಂಡಗಳಲ್ಲಿ ‘ಜನಾಶೀರ್ವಾದ ಯಾತ್ರೆ’ ಕೈಗೊಳ್ಳಲು ಪಕ್ಷ ನಿರ್ಧರಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ತಿಳಿಸಿದ್ದಾರೆ.

ಇದನ್ನೂ ಓದಿ: ಹೊಸ ಸಂಪುಟ; ಬಿಡಿ ಚಿತ್ರಗಳಲ್ಲಿ ಸಿಗುವ ಪೂರ್ಣ ಚಿತ್ರಣ

ಕೊರೊನಾ ನಿಯಮಗಳನ್ನು ಅನುಸರಿಸಿ ಎಲ್ಲಾ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಯಾವುದೇ ದೊಡ್ಡ ಸಾರ್ವಜನಿಕ ಕಾರ್ಯಕ್ರಮಗಳು ನಡೆಯದಿದ್ದರೂ, ಜಿಲ್ಲೆಗಳಲ್ಲಿ ಚಾಲ್ತಿಯಲ್ಲಿರುವ ಕೊರೊನಾ ಪರಿಸ್ಥಿತಿ ಮತ್ತು ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತದಿಂದ ಹೊರಡಿಸಲಾದ ಮಾರ್ಗಸೂಚಿಗಳನ್ನು ಪರಿಗಣಿಸಿ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಹೊಸ ಸಚಿವರ ನೇತೃತ್ವದ ನಾಲ್ಕು ತಂಡಗಳು 24 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿವೆ. ಒಟ್ಟು 161 ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕ ಸಭೆಗಳಲ್ಲಿ, ಅವರು ಒಕ್ಕೂಟ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಕೊರೊನಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡುತ್ತಾರೆ. ಬರಹಗಾರರು, ಕಲಾವಿದರು ಮತ್ತು ಹಿರಿಯ ಬಿಜೆಪಿ ನಾಯಕರ ಮನೆಗಳು ಮತ್ತು ಮಠಾಧೀಶರನ್ನು ಭೇಟಿ ಮಾಡುತ್ತಾರೆ ಎಂದು ಸಿದ್ದರಾಜು ಹೇಳಿದರು.

ಇದನ್ನೂ ಓದಿ: ಹೊಸ ಮಂತ್ರಿಮಂಡಲ ಹಳೆಯ ಅಸಮತೋಲನ: ಎ ನಾರಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಒಂದು ಕಡೆ ಕರೊನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಸರ್ಕಾರ, ಜನ ಸೇರುವ ಜನಾಶೀರ್ವಾದ ಯಾತ್ರೆಗೆ ಹೇಗೆ ಪರವಾನಗಿ ಕೊಡುತ್ತದೆ? ಇದ್ಯಾವ ದೊಂಬರಾಟ?

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...