ಸಂವಿಧಾನದಿಂದ ‘ಜಾತ್ಯತೀತತೆ, ಸಮಾಜವಾದ’ ಕೈಬಿಡಲು ಬಿಜೆಪಿ ಪ್ರಯತ್ನಿಸುತ್ತಿದೆ: ಖರ್ಗೆ ಆರೋಪ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನದಿಂದ ಜಾತ್ಯತೀತತೆ ಮತ್ತು ಸಮಾಜವಾದವನ್ನು ಕೈಬಿಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ. ಭುವನೇಶ್ವರದಲ್ಲಿ ನಡೆದ ಪಕ್ಷದ ‘ಸಂವಿಧಾನ್ ಬಚಾವೋ ಸಮಾವೇಶ’ವನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಬಿಜೆಪಿ ಆಡಳಿತದಲ್ಲಿ ದೇಶದ ದಲಿತರು, ಬುಡಕಟ್ಟು ಜನಾಂಗದವರು ಮತ್ತು ಯುವಕರು ತಮ್ಮ ಹಕ್ಕುಗಳಿಗಾಗಿ ಹೋರಾಡಲು ಕಲಿಯಬೇಕಾಗುತ್ತದೆ ಎಂದು ಹೇಳಿದರು. “ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವು ನಮ್ಮ ಸಂವಿಧಾನದಿಂದ ಜಾತ್ಯತೀತತೆ ಮತ್ತು ಸಮಾಜವಾದವನ್ನು ಕೈಬಿಡಲು ಪ್ರಯತ್ನಿಸುತ್ತಿದೆ” ಎಂದು ಅವರು ಪ್ರತಿಪಾದಿಸಿದರು. ಒಡಿಶಾದಲ್ಲಿ ಬಿಜೆಪಿ ಬೆಂಬಲಿಗರು … Continue reading ಸಂವಿಧಾನದಿಂದ ‘ಜಾತ್ಯತೀತತೆ, ಸಮಾಜವಾದ’ ಕೈಬಿಡಲು ಬಿಜೆಪಿ ಪ್ರಯತ್ನಿಸುತ್ತಿದೆ: ಖರ್ಗೆ ಆರೋಪ