Homeಕರ್ನಾಟಕಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

ಆರ್‌‌ಎಸ್‌ಎಸ್‌ ಬಗ್ಗೆ ಎಚ್‌ಡಿಕೆ ಎತ್ತಿದ ಪ್ರಶ್ನೆಗೆ ಉತ್ತರ ನೀಡದ ಬಿಜೆಪಿ: ಜಾ.ದಳ ಟೀಕೆ

"ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು?"

- Advertisement -
- Advertisement -

“ಸ್ವಯಂ ಘೋಷಿತ ಸೇವಾ ಸಂಸ್ಥೆ ಆರ್‌‌ಎಸ್‌‌ಎಸ್‌‌ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವನ್ನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ” ಎಂದು ಜಾ.ದಳ ಆರೋಪಿಸಿದೆ.

ಜಾ.ದಳ ಅಧಿಕೃತ ಟ್ವಿಟರ್‌ ಖಾತೆಯಿಂದ ಸರಣಿ ಟ್ವೀಟ್‌ ಮಾಡಲಾಗಿದ್ದು, ಬಿಜೆಪಿ ಮೌನವನ್ನು ಪ್ರಶ್ನಿಸಲಾಗಿದೆ. ಅಲ್ಲದೇ ದಾಸರ ಪದಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ‘ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ’ ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ ಎಂದು ಜೆಡಿಎಸ್ ಟೀಕಿಸಿದೆ.

ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು? ಎಂದು ಪ್ರಶ್ನಿಸಿದೆ.

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ವಾಗ್ದಾಳಿ ನಡೆಸಿದೆ.

ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯು.ಪಿ.ಎಸ್.ಸಿ.ಗೆ ಸಮೀಕರಣ ಮಾಡಿ ಕೆ.ಪಿ.ಎಸ್.ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆ.ಪಿ.ಎಸ್.ಸಿ. ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಎಂದು ಕೇಳಿದೆ.

ಕುಮಾರಸ್ವಾಮಿ ಅವರೆಂದೂ ಕೆ.ಪಿ.ಎಸ್.ಸಿ.ಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು? ಎಂದು ಪ್ರಶ್ನಿಸಿದೆ.

ಕೆ.ಪಿ.ಎಸ್.ಸಿ.ಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆ.ಪಿ.ಎಸ್.ಸಿ.ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡೋದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ಎಂದು ಜಾ.ದಳ ದೂರಿದೆ.

ಇದನ್ನೂ ಓದಿರಿ: ಉಡುಪಿಯಲ್ಲಿ ದುರ್ಗಾ ದೌಡ್: ಹಿಂದೂ ಜಾಗರಣ ವೇದಿಕೆ ಪ್ರಮುಖರ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...