Homeಮುಖಪುಟಜಮ್ಮು ಕಾಶ್ಮೀರ ಕಂದಾಯ ಇಲಾಖೆ ಪರೀಕ್ಷೆಯಿಂದ ಉರ್ದು ಭಾಷೆ ಕೈಬಿಡಲು ಬಿಜೆಪಿ ಒತ್ತಾಯ

ಜಮ್ಮು ಕಾಶ್ಮೀರ ಕಂದಾಯ ಇಲಾಖೆ ಪರೀಕ್ಷೆಯಿಂದ ಉರ್ದು ಭಾಷೆ ಕೈಬಿಡಲು ಬಿಜೆಪಿ ಒತ್ತಾಯ

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಮುಂಬರುವ ನಯಾಬ್ ತಹಶೀಲ್ದಾರ್ ಪರೀಕ್ಷೆಯಲ್ಲಿ ಉರ್ದು ಭಾಷೆಯನ್ನು ಕೈ ಬಿಡಬೇಕು ಎಂಬ ಬಿಜೆಪಿ ಬೇಡಿಕೆಯನ್ನು ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಮತ್ತು ವಿರೋಧ ಪಕ್ಷ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ (ಪಿಡಿಪಿ) ಟೀಕೆಗೆ ಗುರಿಯಾಗಿದೆ. ಬಿಜೆಪಿಯ ಈ ಬೇಡಿಕೆಯು ಸಾಂಸ್ಕೃತಿಕ ಅಸ್ಮಿತೆಯನ್ನು ಅಳಿಸುವಂತಿದೆ ಎಂದು ಈ ಪಕ್ಷಗಳು ಆರೋಪಿಸಿವೆ ಎಂದು ದಿ ಹಿಂದೂ ಶನಿವಾರ ವರದಿ ಮಾಡಿದೆ. ಜಮ್ಮು ಕಾಶ್ಮೀರ ಕಂದಾಯ

75 ಕಂದಾಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೋಮವಾರ ಹೊರಡಿಸಲಾದ ಅಧಿಸೂಚನೆಯ ಮೂಲಕ, ಜಮ್ಮು ಕಾಶ್ಮೀರ ಸೇವೆಗಳ ಆಯ್ಕೆ ಮಂಡಳಿಯು ಅಭ್ಯರ್ಥಿಗಳ “ಉರ್ದುವಿನಲ್ಲಿ ಕೆಲಸ ಮಾಡುವ ಅರಿವು” ಅನ್ನು ಒಂದು ಪರೀಕ್ಷೆಯಲ್ಲಿ ಮೌಲ್ಯಮಾಪನ ಮಾಡಲಾಗುತ್ತದೆ ಎಂದು ತಿಳಿಸಿತ್ತು.

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದಲ್ಲಿ ಉರ್ದು ಭಾಷೆಯನ್ನು ಸಾಮಾನ್ಯವಾಗಿ ಕಂದಾಯ ದಾಖಲೆಗಳು, ಭೂ ವ್ಯವಹಾರಗಳು, ನ್ಯಾಯಾಲಯದ ತೀರ್ಪುಗಳು ಮತ್ತು ಕಾನೂನು ಪತ್ರವ್ಯವಹಾರಗಳಲ್ಲಿ ಬಳಸುವುದರಿಂದ, ಆದಾಯಕ್ಕೆ ಸಂಬಂಧಿಸಿದ ಹುದ್ದೆಗಳಿಗೆ ಭಾಷೆಯ ಮೂಲಭೂತ ತಿಳುವಳಿಕೆ ಅತ್ಯಗತ್ಯ ಎಂದು ಪರಿಗಣಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿರುವ ಬಿಜೆಪಿ ಶಾಸಕ ಸುನಿಲ್ ಶರ್ಮಾ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಸತ್ ಶರ್ಮಾ ಅವರು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಗುರುವಾರ ಭೇಟಿಯಾಗಿ ನಯಾಬ್ ತಹಶೀಲ್ದಾರ್ ಪರೀಕ್ಷೆಯಲ್ಲಿ ಉರ್ದು ಭಾಷೆಯನ್ನು ತೆಗೆದುಹಾಕುವ ವಿಷಯದಲ್ಲಿ ಮಧ್ಯಪ್ರವೇಶ ಮಾಡುವಂತೆ ಕೋರಿದ್ದಾರೆ.

ಜಮ್ಮು ಕಾಶ್ಮೀರವು ಐದು ಅಧಿಕೃತ ಭಾಷೆಗಳನ್ನು ಹೊಂದಿರುವುದರಿಂದ, ಅವುಗಳಲ್ಲಿ ಒಂದನ್ನು ಮಾತ್ರ ಪರೀಕ್ಷೆಗೆ ಕಡ್ಡಾಯಗೊಳಿಸುವುದು “ಸಮಾನ ಅವಕಾಶ ಮತ್ತು ಆಡಳಿತಾತ್ಮಕ ನಿಷ್ಪಕ್ಷಪಾತದ ಸಾಂವಿಧಾನಿಕ ತತ್ವಗಳನ್ನು ಉಲ್ಲಂಘಿಸುತ್ತದೆ” ಎಂದು ಸುನಿಲ್ ಶರ್ಮಾ ಸಿನ್ಹಾಗೆ ಹೇಳಿರುವುದಾಗಿ ವರದಿಯಾಗಿದೆ.

“ಇದು ಅನ್ಯಾಯದ ತಡೆಗೋಡೆಯನ್ನು ಸೃಷ್ಟಿಸುತ್ತದೆ. ವಿಶೇಷವಾಗಿ ಜಮ್ಮು ವಿಭಾಗದ ಆಕಾಂಕ್ಷಿಗಳಿಗೆ ಇದು ಅನನುಕೂಲಕರ  ಆಗಿದೆ” ಎಂದು ಅವರು ಹೇಳಿದ್ದಾಗಿ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅದಾಗ್ಯೂ, ಬಿಜೆಪಿಯ ಈ ಬೇಡಿಕೆಗೆ ಆಡಳಿತರೂಢ ನ್ಯಾಷನಲ್ ಕಾನ್ಫರೆನ್ಸ್‌ ಮತ್ತು ಮತ್ತು ವಿಪಕ್ಷ ಪೀಪಲ್ಸ್ ಡೆಮಾಕ್ರಟಿಕ್ ವಿರೋಧಿಸಿವೆ.

ಜಮ್ಮು ಕಾಶ್ಮೀರದ ಆದಾಯ, ನ್ಯಾಯಾಂಗ ಮತ್ತು ಆಡಳಿತ ವ್ಯವಸ್ಥೆಗಳಲ್ಲಿ ಉರ್ದುವಿನ ಪಾತ್ರವು “ಐತಿಹಾಸಿಕವಾಗಿ ಸ್ಥಾಪಿತವಾಗಿದೆ” ಮತ್ತು “ಯಾವುದೇ ರಾಜಕೀಯ ಅಥವಾ ಪಂಥೀಯ ಕಾರ್ಯಸೂಚಿಯಲ್ಲಿಲ್ಲ” ಎಂದು ನ್ಯಾಷನಲ್ ಕಾನ್ಫರೆನ್ಸ್‌ ಶಾಸಕ ತನ್ವೀರ್ ಸಾದಿಕ್ ಹೇಳಿರುವುದಾಗಿ ಶನಿವಾರ ದಿ ಹಿಂದೂ ಉಲ್ಲೇಖಿಸಿದೆ. ಭಾಷೆಯ ಪಾತ್ರವನ್ನು ದುರ್ಬಲಗೊಳಿಸುವುದು “ಐತಿಹಾಸಿಕವಾಗಿ ಅಪ್ರಾಮಾಣಿಕ” ಎಂದು ಅವರು ಹೇಳಿದ್ದು, ಇದು ಭಾರಿ ಆಡಳಿತಾತ್ಮಕ ಮತ್ತು ಕಾನೂನು ಅಡಚಣೆಗಳಿಗೆ ಕಾರಣವಾಗಬಹುದು ಎಂದು ಅವರು ತಿಳಿಸಿದ್ದಾರೆ.

“ಜಮ್ಮು ಕಾಶ್ಮೀರದ ಐತಿಹಾಸಿಕ ಸಂಸ್ಥೆಗಳು, ಸಾಂಸ್ಕೃತಿಕ ಗುರುತು ಮತ್ತು ಆಡಳಿತಾತ್ಮಕ ನಿರಂತರತೆಯನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ. ಅಲ್ಪಾವಧಿಯ ಲಾಭಕ್ಕಾಗಿ ಉರ್ದುವಿನ ಸ್ಥಾನಮಾನವನ್ನು ರಾಜಕೀಯಗೊಳಿಸುವ ಅಥವಾ ಕೋಮುವಾದೀಕರಿಸುವ ಯಾವುದೇ ಪ್ರಯತ್ನವನ್ನು ನಾವು ತಿರಸ್ಕರಿಸುತ್ತೇವೆ.” ಎಂದು ಅವರು ಹೇಳಿದ್ದಾರೆ.

ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕ ಮತ್ತು ಪುಲ್ವಾಮಾ ಶಾಸಕ ವಹೀದ್-ಉರ್-ರೆಹಮಾನ್ ಪರ್ರಾ ಪ್ರತಿಕ್ರಿಯಿಸಿ, ಬಿಜೆಪಿಯ ಬೇಡಿಕೆಯನ್ನು ಜಮ್ಮು ಕಾಶ್ಮೀರದ ಶ್ರೀಮಂತ ದಾಖಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅಳಿಸಿಹಾಕುವ ಅಪಾಯಕಾರಿ ನಡೆ ಎಂದು ಬಣ್ಣಿಸಿದ್ದಾರೆ.

“ಉರ್ದು ಒಂದು ಭಾಷೆ ಮಾತ್ರವಲ್ಲ, ಅದು ಈ ಪ್ರದೇಶದ ಪರಂಪರೆಯ ಪ್ರಮುಖ ಭಾಗವಾಗಿದೆ. ಅದನ್ನು ದುರ್ಬಲಗೊಳಿಸುವುದು ಸಮುದಾಯಗಳನ್ನು ವಿಭಜಿಸುತ್ತದೆ ಮತ್ತು ಸ್ಮರಣೆಯನ್ನು ಪುನಃ ಬರೆಯುತ್ತದೆ” ಎಂದು ಅವರು ಎಚ್ಚರಿಸಿದ್ದಾರೆ. ಪಿಡಿಪಿ ಮತ್ತೊಬ್ಬ ಶಾಸಕ ನಯೀಮ್ ಅಖ್ತರ್, ಉರ್ದು ಶತಮಾನಗಳಿಂದ ಜಮ್ಮು ಕಾಶ್ಮೀರದ ಅಧಿಕೃತ ಭಾಷೆಯಾಗಿದೆ. ಜಮ್ಮು ಕಾಶ್ಮೀರ ಕಂದಾಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

ಛತ್ತೀಸ್‌ಗಢ | ಪೊಲೀಸ್ ದಾಖಲೆಗಳಲ್ಲಿ ಬಳಸುವ ಉರ್ದು, ಪರ್ಷಿಯನ್ ಪದಗಳನ್ನು ತೆಗೆದುಹಾಕಿದ ಬಿಜೆಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...

ಹತ್ಯೆಯ ಕೆಲವೇ ಗಂಟೆಗಳ ಮೊದಲು ನಾನು ಹಮಾಸ್ ಮುಖ್ಯಸ್ಥರನ್ನು ಭೇಟಿಯಾಗಿದ್ದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಟೆಹ್ರಾನ್‌ನಲ್ಲಿ ಹಮಾಸ್‌ನ ಮಾಜಿ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಅವರನ್ನು ಭೇಟಿಯಾಗಿದ್ದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಹಿರಂಗಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಧ್ಯಕ್ಷ...

ಕರ್ನಾಟಕ ಜನಶಕ್ತಿ ಸಕ್ರಿಯ ಕಾರ್ಯಕರ್ತೆ, ಹೋರಾಟದ ಒಡನಾಡಿ ಕೆ.ಪದ್ಮಾ ಇನ್ನಿಲ್ಲ

ಹಿರಿಯ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿ ಸಂಘಟನೆಯ ಸಕ್ರಿಯ ಕಾರ್ಯಕರ್ತೆ ಕೆ ಪದ್ಮಾ ಅವರು ಹೋರಾಟದ ಬದುಕನ್ನು ಮುಗಿಸಿದ್ದಾರೆ. ಬುಧವಾರ ರಾತ್ರಿ, ಬೆಂಗಳೂರಿನಲ್ಲಿ ಕೊನೆಯುಸಿಳೆದಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ತಮ್ಮನ್ನು ಬಾಧಿಸುತ್ತಿದ್ದ...

ದೇಶದ ಹಲವೆಡೆ ಕ್ರೈಸ್ತರ ಮೇಲೆ ಮತಾಂಧ ಕೋಮುವಾದಿಗಳ ದಾಳಿ : ಕ್ರಿಸ್‌ಮಸ್ ಆಚರಣೆಗೆ ಅಡ್ಡಿ

ಪ್ರತಿ ವರ್ಷದಂತೆ ಈ ವರ್ಷವೂ ಡಿಸೆಂಬರ್ ತಿಂಗಳಲ್ಲಿ, ವಿಶೇಷವಾಗಿ ಡಿಸೆಂಬರ್ 25ರಂದು ಇಡೀ ಜಗತ್ತು ಕ್ರಿಸ್‌ಮಸ್ ಹಬ್ಬದ ಸಂಭ್ರಮದಲ್ಲಿದೆ. ಏಸು ಕ್ರಿಸ್ತನ ಜನ್ಮದಿನದ ಪ್ರಯುಕ್ತ ಜನರು ಗಡಿಗಳನ್ನು ಮೀರಿ ಪರಸ್ಪರ ಸಂತಸ ಹಂಚಿಕೊಳ್ಳುತ್ತಿದ್ದಾರೆ. ಈ...

ಹರಿಯಾಣ| ಕಳ್ಳತನ ಆರೋಪದ ಮೇಲೆ 12 ವರ್ಷದ ದಲಿತ ಬಾಲಕನಿಗೆ ಚಿತ್ರಹಿಂಸೆ; ಕಟ್ಟಿಹಾಕಿ ದೌರ್ಜನ್ಯ

12 ವರ್ಷದ ದಲಿತ ಬಾಲಕನ ಮೇಲೆ ಕಳ್ಳತನದ ಶಂಕೆಯಿಂದ ಹಲವಾರು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿ ಅಕ್ರಮ ಬಂಧನದಲ್ಲಿಟ್ಟ ಆರೋಪದ ಮೇಲೆ ಕುಟುಂಬವೊಂದರ 10 ಸದಸ್ಯರ ವಿರುದ್ಧ ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಪ್ರಕರಣ...

ಉನ್ನಾವೋ ಅತ್ಯಾಚಾರಿಯ ಶಿಕ್ಷೆ ಅಮಾನತು : ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲು ಮುಂದಾದ ಸಿಬಿಐ

ಉನ್ನಾವೋ ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತಿನಲ್ಲಿಟ್ಟ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕೇಂದ್ರ ತನಿಖಾ ದಳ (ಸಿಬಿಐ) ಮುಂದಾಗಿದೆ ಎಂದು ಬುಧವಾರ (ಡಿ.24) ವರದಿಯಾಗಿದೆ. ಸಿಬಿಐ ಈ ಪ್ರಕರಣದ ತನಿಖೆ...

ಚಿತ್ರದುರ್ಗ | ಹೊತ್ತಿ ಉರಿದ ಖಾಸಗಿ ಬಸ್​​​​ : 10ಕ್ಕೂ ಹೆಚ್ಚು ಜನರು ಸಜೀವ ದಹನ, ಹಲವರಿಗೆ ಗಾಯ

ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದ ಪರಿಣಾಮ 10ಕ್ಕೂ ಹೆಚ್ಚು ಜನರು ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಗುರುವಾರ (ಡಿ.25) ನಡೆದಿದೆ. ರಾಷ್ಟ್ರೀಯ ಹೆದ್ದಾರಿ...