Homeಕರ್ನಾಟಕಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

ಬಿಜೆಪಿ v/s ಬಿಜೆಪಿ: ‘ಸಿಡಿ’ ವಿಚಾರವಾಗಿ ಕಿತ್ತಾಡಿಕೊಂಡ ಬಿಜೆಪಿ ಶಾಸಕ ಯತ್ನಾಳ್ & ಸಚಿವ ನಿರಾಣಿ

- Advertisement -
- Advertisement -

ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಆಡಳಿತರೂಢ ಬಿಜೆಪಿ ಪಕ್ಷದ ಶಾಸಕ ಬಸನಗೌಡ ಯತ್ನಾಳ್ ಮತ್ತು ಸಚಿವ ಮುರುಗೇಶ ನಿರಾಣಿ  ಪರಸ್ಪರ ಆರೋಪ ಪ್ರತ್ಯಾರೋಪಗಳು ಮಾಡುತ್ತಿದ್ದು, ಮಾಧ್ಯಮಗಳ ಮೂಲಕ ಏಕವಚನದಲ್ಲೇ ಕಿತ್ತಾಡಿಕೊಂಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಶಾಸಕ ಯತ್ನಾಳ್, “ನಿರಾಣಿ ಅವರು ಯಾರದ್ದೋ ಸಿ.ಡಿ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಸಿ.ಡಿ ಮೂಲಕವೇ ಮಂತ್ರಿಯಾಗುತ್ತಾರೆ. ನಾನು ಅಂಥಹ ಹಲ್ಕಾ ಕೆಲಸ ಮಾಡುವುದಿಲ್ಲ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರಿಗೆ ತಾಕತ್ತಿದ್ದರೆ, ಅಪ್ಪನಿಗೆ ಹುಟ್ಟಿದ್ದರೆ ಸಿ.ಡಿ ಬಿಡುಗಡೆ ಮಾಡಲಿ. ನನಗೆ ಟಿಕೆಟ್ ಕೊಡುಲು ಇವರು ಯಾರು?. ಇತ್ತೀಚೆಗೆ ವಿಜಯಪುರ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ನಿರಾಣಿ ಮತ್ತು ವಿಜಯೇಂದ್ರ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಗಳಿಗೆ ಹಣ ನೀಡಿ, ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪ್ರಯತ್ನಿಸಿದ್ದರು. ಬಿಜೆಪಿಯಿಂದ ಬಂಡಾಯವೆದ್ದು ಪಕ್ಷೇತರವಾಗಿ ನಿಂತ ಅಭ್ಯರ್ಥಿಗಳಿಗೆ ಹಣ ನೀಡಿಲ್ಲ ಎಂದಾದರೆ ವಿಜಯೇಂದ್ರ ಮತ್ತು ನಿರಾಣಿ ಧರ್ಮಸ್ಥಳದಲ್ಲಿ ಆಣೆ ಮಾಡಿ ಹೇಳಲಿ” ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.

ಇದಕ್ಕೆ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದ ಸಚಿವ ಮುರುಗೇಶ ನಿರಾಣಿ ಅವರು, “ನಿನಗೆ ತಾಕತ್ತು ಇದ್ದರೆ 2023ರ ಚುನಾವಣೆಯಲ್ಲಿ ನಾನೂ ಸ್ಪರ್ಧಿಸುತ್ತೇನೆ. ನೀನು ಸ್ಪರ್ಧೆ ಮಾಡು ಜನ ಯಾರಿಗೆ ಆಶೀರ್ವಾದ ಮಾಡುತ್ತಾರೆ ನೋಡೋಣ. ಈ ಬಾರಿ ವಿಜಯಪುರದಲ್ಲಿ ನಿನಗೆ ತಕ್ಕ ಪಾಠ ಕಲಿಸಲು ಸಜ್ಜಾಗಿದ್ದಾರೆ. ನನ್ನ ಬಗ್ಗೆ ಹಗುರವಾಗಿ ಮಾತನಾಡುವ ಮುನ್ನ ಆಲೋಚಿಸುವುದು ಒಳಿತು. ನನ್ನ ವಿರುದ್ಧ ನಾಲಿಗೆ ಹರಿಯಬಿಟ್ಟರೆ ಅದೇ ದಾಟಿಯಲ್ಲೇ ನಾನು ಉತ್ತರ ಕೊಡಬೇಕಾಗುತ್ತದೆ” ಎಂದು ಏಕವಚನದಲ್ಲೇ ಶಾಸಕ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಹರಿಹರ ಪೀಠ ಮತ್ತು ನನ್ನ ಬಗ್ಗೆ ಹಗುರವಾಗಿ ಮಾತನಾಡಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ. ಬೊಮ್ಮಾಯಿ ತಾಯಿ ಆಣೆ ಮಾಡಿದ್ದಾರೆ, ಮೋಸ ಮಾಡಿದ್ದಾರೆಂದು ಲೂಸ್ ಟಾಕ್ ಮಾಡುವುದನ್ನು ಬಿಡು. ಇನ್ನು ಮುಂದೆ ಮಾತನಾಡುವಾಗ ಎಚ್ಚರ ಇರಲಿ” ಎಂದು ನಿರಾಣಿ ಎಚ್ಚರಿಕೆ ನೀಡಿದ್ದಾರೆ.

“ಕೃಷ್ಣಾ ನದಿ ನೀರು ನಾನು ಕೂಡಾ ಕುಡಿದು ಬೆಳೆದಿದ್ದೇನೆ. ಇಲ್ಲೇ ನನ್ನ ಎಲ್ಲ ಸಂಬಂಧಗಳಿವೆ. ನಿನಗೆ ಗೊತ್ತಿರುವ ಭಾಷೆ, ಬೈಗುಳಕ್ಕಿಂತ ಹೆಚ್ಚು ನನಗೂ ಗೊತ್ತಿವೆ, ಹಾಗಂತ ನಾನು ಅವುಗಳನ್ನು ಬಳಸುವುದಿಲ್ಲ. ನೀನು ರಾಜಕಾರಣಕ್ಕೆ ಬರುವ ಮೊದಲು ನೀವು ಹೇಗಿದ್ದೀರಿ? ಯಾವ ಫುಟ್‍ಪಾತ್ ಮೇಲೆ ನಿಲ್ಲುತ್ತಿದ್ದೀರಿ? ಎಲ್ಲಿ ಕೂರುತ್ತಿದ್ದಿರೀ, ಎಲ್ಲವೂ ಗೊತ್ತಿದೆ”

“ಲಿಂಗಾಯತ ಪಂಚಮಸಾಲಿ ಮತ್ತು ಬಣಜಿಗ ಸಮುದಾಯದವರು ಬಹಳ ಹಿಂದಿನಿಂದಲೂ ಅಣ್ಣ-ತಮ್ಮಂದಿರಂತೆ ಇದ್ದಾರೆ. ಯಾವುದೇ ಸಮಾಜದ ಜೊತೆ ಬೇಧಬಾವ ಇಲ್ಲದೆ ನಡೆದಕೊಂಡು ಬಂದಿದ್ದೇವೆ. ಸಭೆ, ಸಮಾರಂಭದಲ್ಲಿ ಅನ್ಯ ಸಮಾಜದ ಬಗ್ಗೆ ಹಗುರವಾಗಿ ಮಾತನಾಡಿ, ಚಪ್ಪಾಳೆ ಹೊಡೆಸಿಕೊಳ್ಳುವುದು ಬಿಡಿ”

“ನೀವು ಬೇರೆ ಪಕ್ಷದಲ್ಲಿ ಇದ್ದಾಗ ಟೊಪ್ಪಿ ಹಾಕಿಕೊಂಡು ಹಿಂದೂಗಳನ್ನು ಬೈಯ್ದಿದ್ದೀರಿ. ಈಗ ಟೊಪ್ಪಿ ತೆಗೆದು ಅವರನ್ನೇ ಬೈಯುತ್ತಿದ್ದೀರಿ. ನಿಮಗೆ ಎರಡು ನಾಲಿಗೆ ಇವೆಯೇ?. ನನಗೆ ಪಕ್ಷ ಮತ್ತು ಸಮಾಜ ಎರಡನೆ ತಾಯಿ ಇದ್ದ ಹಾಗೆ. ಎಂದೂ ಪಕ್ಷ ಬಿಟ್ಟು ಹೋಗಿಲ್ಲ, ಸಮಾಜದ ಬಗ್ಗೆ ಒಡಕಿನ ಮಾತು ಆಡಿಲ್ಲ” ಎಂದು ನಿರಾಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಪಕ್ಷೀಯ ಸಚಿವ ಮತ್ತು ಶಾಸಕ ಕಿತ್ತಾಡಿಕೊಂಡ ಬಗ್ಗೆ ಕಾಂಗ್ರೆಸ್ ವ್ಯಂಗ್ಯವಾಡಿದ್ದು, “BJP vs BJP ಕಿತ್ತಾಟದಲ್ಲಿ ಎಲ್ಲವೂ ಹೊರಬರುತ್ತಿದೆ. ಕರ್ನಾಟಕದ ಸುಬ್ರಹ್ಮಣ್ಯ ಸ್ವಾಮಿಯಾದ ಯತ್ನಾಳ್ ಸಿಡಿ ಬ್ಲಾಕ್ಮೇಲ್ ಮಾಡಿ ನಿರಾಣಿ ಮಂತ್ರಿಯಾಗಿದ್ದಾರೆ ಎಂದಿದ್ದಾರೆ. ಯಾರ ಸಿಡಿ? ಸಿಡಿ ಮಾಡಿಕೊಟ್ಟಿದ್ದು ಸ್ಯಾಂಟ್ರೋ ರವಿಯೇ? ನಿರಾಣಿ ಹಣ ಕೊಟ್ಟಿದ್ದು ಯಾರಿಗೆ? ಆ ಹಣದ ಬಗ್ಗೆ ಇಡಿ ತನಿಖೆ ಏಕಿಲ್ಲ? ಇದಕ್ಕೆ ರಾಜ್ಯ BJP ಉತ್ತರಿಸಬೇಕಿದೆ” ಎಂದು ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Bjp is communal and dividing india on religion basis and they have become highly corrupt, ppl don’t keep any trust in bjp leaders from top to bottom hence better to make bjp mukth Bharat 👏

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...