Homeಮುಖಪುಟ'ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ'; ಭಗವಂತ್...

‘ಕೇಜ್ರಿವಾಲ್ ಚುನಾವಣಾ ಪ್ರಚಾರ ಮಾಡಬಾರದೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಪ್ರಚಾರ ಮಾಡುತ್ತೇನೆ’; ಭಗವಂತ್ ಮಾನ್

- Advertisement -
- Advertisement -

ಎಎಪಿ ಎನ್‌ಜಿಒ ಅಲ್ಲ, ಅದು ರಾಷ್ಟ್ರೀಯ ಪಕ್ಷ, ಕೇಜ್ರಿವಾಲ್ ಅವರು ಚುನಾವಣಾ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಪಂಜಾಬ್‌ ಸಿಎಂ ಭಗವಂತ್ ಸಿಂಗ್ ಮಾನ್ ಹೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪಂಜಾಬ್ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಭಗವಂತ್ ಸಿಂಗ್ ಮಾನ್, ನನಗೆ ಲೋಕಸಭೆ ಚುನಾವಣೆ ಎರಡು ವಿಚಾರದಲ್ಲಿ ಮಹತ್ವದ್ದಾಗಿದೆ. ಮೊದಲನೆಯದಾಗಿ, ಈ ಲೋಕಸಭೆ ಚುನಾವಣೆ ದೇಶದ ಪ್ರಜಾಪ್ರಭುತ್ವದ ಭವಿಷ್ಯದ ದೃಷ್ಟಿಯಿಂದ ಅಗ್ನಿಪರೀಕ್ಷೆಯಾಗಿದೆ. ಎರಡನೆಯದಾಗಿ, ಪಂಜಾಬ್‌ನ ಎಎಪಿ ಸರಕಾರದ ಎರಡು ವರ್ಷದ ಆಡಳಿತದ ಸಾಧನೆಯ ರಿಯಾಲಿಟಿ ಚೆಕ್ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಚುನಾವಣೆ ಸೋಲು-ಗೆಲುವಿನ ಪ್ರಶ್ನೆಯಲ್ಲ, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸುವ ಚುನಾವಣೆಯಾಗಿದೆ. ಎರಡು-ಮೂರು ಬಿಜೆಪಿ ಪ್ರಮುಖ ನಾಯಕರು ನಮಗೆ 400 ಸ್ಥಾನಗಳನ್ನು ನೀಡಿ ಮತ್ತು ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ. ಅವರಿಗೆ ಎಷ್ಟು ಧೈರ್ಯ? ಹಾಗೆ ನೋಡಿದರೆ ಅವರು ಸಂವಿಧಾನವನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಸರ್ವೋಚ್ಚವಾಗಿದೆ, ಆದರೆ ಅವರು ಅದರ ನಿರ್ದೇಶನಗಳನ್ನು ಪಾಲಿಸುವುದಿಲ್ಲ. ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಪರವಾಗಿ 5-0 ತೀರ್ಪು ನೀಡಿತು, ಆದರೆ ಅವರು ಸಂಜೆ 6 ಗಂಟೆಗೆ ಸುಗ್ರೀವಾಜ್ಞೆಯನ್ನು ತಂದು ತೀರ್ಪನ್ನು ಬದಲಾಯಿಸಿದರು. ಚುನಾವಣಾ ಆಯೋಗದ ಮಾತನ್ನೂ ಅವರು ಕೇಳುವುದಿಲ್ಲ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಅವರ ಜೀಬು ತುಂಬಿಸುವ ಸಾಧನವಾಗಿದೆ. ಮೊದಲು ಇಡಿ ದಾಳಿ ನಡೆಸಿ ನಂತರ ಕಂಪನಿಗಳು ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸುವಂತೆ ಮಾಡುತ್ತಾರೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಬಿಜೆಪಿಯೇತರ ರಾಜ್ಯಗಳ ರಾಜ್ಯಪಾಲರು ಮಾತ್ರ ಇಷ್ಟೊಂದು ಪ್ರಶ್ನೆಗಳನ್ನು ಕೇಳುವುದು ಹೇಗೆ? ಅವರು ಮಮತಾ ದೀದಿ, ಸ್ಟಾಲಿನ್, ಹೇಮಂತ್ ಸೋರೆನ್, ನವೀನ್ ಜಿ ಅವರನ್ನು ತೊಂದರೆಗೊಳಿಸುತ್ತಿದ್ದಾರೆ.  ನನ್ನ ಪ್ರಕರಣದಲ್ಲಿ, ನಾನು ಸುಪ್ರೀಂ ಕೋರ್ಟ್‌ನ್ನು ಸಂಪರ್ಕಿಸುವವರೆಗೆ ಬಜೆಟ್ ಅಧಿವೇಶನವನ್ನು ಕರೆಯಲು ರಾಜ್ಯಪಾಲರು ನಿರಾಕರಿಸಿದ್ದರು. ಎಲ್ಲಿ ಚುನಾಯಿತರಾಗುವುದಿಲ್ಲವೋ ಅಲ್ಲಿ ಆಯ್ಕೆಯಾದವರಿಗೆ ತೊಂದರೆ ಕೊಡುತ್ತಾರೆ. ಇದು ಬಿಜೆಪಿಯ ನೀತಿ ಎಂದು ಹೇಳಿದ್ದಾರೆ. ಜನರು ಈ ಬಾರಿಯ ಅವಕಾಶವನ್ನು ತಪ್ಪಿಸಿಕೊಂಡರೆ, ಭಾರತದ ಆಡಳಿತವು ರಷ್ಯಾದಲ್ಲಿ ಪುಟಿನ್ ಆಡಳಿತದಂತೆ ಇರುತ್ತದೆ ಮತ್ತು ಯಾವುದೇ ವಿರೋಧ ಪಕ್ಷಗಳು ಇರುವುದಿಲ್ಲ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ದೇಶದಾದ್ಯಂತ ವಿವಿಧ ರಾಜ್ಯಗಳಿಂದ ನನಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಮಮತಾ ಅವರು ಪಶ್ಚಿಮ ಬಂಗಾಳದಿಂದ ಹೋರಾಡುತ್ತಿದ್ದಾರೆ, ನಾನು ಪಂಜಾಬ್‌ನಿಂದ ಹೋರಾಡುತ್ತಿದ್ದೇನೆ, ಅಖಿಲೇಶ್ ಯಾದವ್‌ ಯುಪಿಯಿಂದ, ತೇಜಸ್ವಿ ಬಿಹಾರದಿಂದ, ಠಾಕ್ರೆ ಮತ್ತು ಪವಾರ್ ಮಹಾರಾಷ್ಟ್ರದಿಂದ, ಸ್ಟಾಲಿನ್ ತಮಿಳುನಾಡಿನಿಂದ ಹೋರಾಡುತ್ತಿದ್ದಾರೆ. ನಮ್ಮ ಇಂಡಿಯಾ ಬಣ ಅವರನ್ನು ಪೂರ್ಣವಾಗಿ ಸೋಲಿಸುತ್ತದೆ. ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ. ಮೊದಲ ಹಂತದ ಮತದಾನದ ನಂತರ ಹೊರಬಿದ್ದಿರುವ ಎಕ್ಸಿಟ್ ಪೋಲ್ ಫಲಿತಾಂಶಗಳು ಬಿಜೆಪಿ ಪಕ್ಷಕ್ಕೆ ಉತ್ತಮ ಬೆಂಬಲ ಇಲ್ಲ ಎನ್ನುವುದನ್ನು ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಒಬ್ಬ ವ್ಯಕ್ತಿಯಲ್ಲ, ಅವರು ಒಂದು ಚಿಂತನೆಯಾಗಿದ್ದಾರೆ. ನೀವು ಒಬ್ಬ ವ್ಯಕ್ತಿಯನ್ನು ಬಂಧಿಸಬಹುದು ಆದರೆ ಅವನ ಆಲೋಚನೆಯಲ್ಲ. ಎಎಪಿ ಎನ್‌ಜಿಒ ಅಲ್ಲ, ರಾಷ್ಟ್ರೀಯ ಪಕ್ಷ, ಗುಜರಾತ್‌ನಲ್ಲಿ ಐದು ಶಾಸಕರಿದ್ದಾರೆ, ಗೋವಾದಲ್ಲಿ ಇಬ್ಬರು, ರಾಜ್ಯಸಭೆಯಲ್ಲಿ 13 ಜನರಿದ್ದಾರೆ, ಇಬ್ಬರು ಮೇಯರ್‌ಗಳಿದ್ದಾರೆ. ಕೇಜ್ರಿವಾಲ್ ಅವರನ್ನು ಸುಳ್ಳು ಪ್ರಕರಣದಲ್ಲಿ ಜೈಲಿಗೆ ಕಳುಹಿಸಲಾಗಿದೆ ಆದರೆ ಎಎಪಿ ಅವರ ಹಿಂದೆ ಬಂಡೆಯಂತೆ ನಿಂತಿದೆ. ನಿನ್ನೆ ಸುನೀತಾ ಜಿ ಕೂಡ ರಾಂಚಿಗೆ ಹೋಗಿದ್ದರು. ಕೇಜ್ರಿವಾಲ್‌ ಪ್ರಚಾರದಿಂದ ದೂರವಿರಬೇಕೆಂದು ಬಿಜೆಪಿ ಬಯಸುತ್ತದೆ, ಅವರ ಪರವಾಗಿ ನಾನು ಅದನ್ನು ಮಾಡುತ್ತೇನೆ. ನಮ್ಮದು ಕಿರಿಯ ಮತ್ತು ಇತ್ತೀಚೆಗೆ ವೇಗವಾಗಿ ಬೆಳೆಯುತ್ತಿರುವ ಪಕ್ಷ. ಜನಸಂಘವು 1958ರಲ್ಲಿ ಹುಟ್ಟಿತು ಮತ್ತು 26 ವರ್ಷಗಳ ನಂತರ 1984ರಲ್ಲಿ ಇಬ್ಬರು ಸಂಸದರನ್ನು ಪಡೆದರು. ಕಾಂಗ್ರೆಸ್ 1885ರಲ್ಲಿ ಹುಟ್ಟಿಕೊಂಡಿತು, ಆದರೆ ಅದು 1930ರಲ್ಲಿ ಇಬ್ಬರು ಕೌನ್ಸಿಲರ್‌ಗಳನ್ನು ಪಡೆದಿದೆ. ನಾವು 2012ರಲ್ಲಿ ಹುಟ್ಟಿದ್ದೇವೆ ಮತ್ತು ನಾವು ಈಗಾಗಲೇ ಎರಡು ರಾಜ್ಯಗಳಲ್ಲಿ ಎರಡು ಸರ್ಕಾರಗಳನ್ನು ಹೊಂದಿದ್ದೇವೆ ಎಂದು ಭಗವಂತ್‌ ಮಾನ್‌ ಹೇಳಿದ್ದಾರೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....