Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಆದಿವಾಸಿಗಳ ಭೂಮಿ ಕಿತ್ತುಕೊಂಡು ಕಾರ್ಪೊರೇಟ್ ಸ್ನೇಹಿತರಿಗೆ ಹಂಚಲು ಬಿಜೆಪಿ ಬಯಸುತ್ತಿದೆ;...

ಭಾರತ್‌ ಜೋಡೋ ನ್ಯಾಯ ಯಾತ್ರೆ: ಆದಿವಾಸಿಗಳ ಭೂಮಿ ಕಿತ್ತುಕೊಂಡು ಕಾರ್ಪೊರೇಟ್ ಸ್ನೇಹಿತರಿಗೆ ಹಂಚಲು ಬಿಜೆಪಿ ಬಯಸುತ್ತಿದೆ; ರಾಹುಲ್‌ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ ಜಾರ್ಖಂಡ್‌ನಲ್ಲಿ ಮೂರನೇ ದಿನ ಮುಂದುವರಿದಿದ್ದು, ಧನ್‌ಬಾದ್‌ನ ಬಿರ್ಸಾ ಮುಂಡಾ ಚೌಕ್‌ನಲ್ಲಿ ರಾಹುಲ್‌ ಗಾಂಧಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ್ದಾರೆ.

ಶನಿವಾರ ಗೊಡ್ಡಾದ ಸರ್ಕಂದ ಚೌಕ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಬಿಜೆಪಿ ದ್ವೇಷವನ್ನು ಉತ್ತೇಜಿಸುತ್ತಿದೆ ಮತ್ತು ದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸುತ್ತಿದೆ. ಜಾರ್ಖಂಡ್‌ನ ರಾಜಕೀಯ ಪರಿಸ್ಥಿತಿ ಅನ್ಯಾಯದಿಂದ ಕೂಡಿದೆ. ಜಾರ್ಖಂಡ್‌ ಜನರು ಕಾಂಗ್ರೆಸ್ ಬೆಂಬಲಿತ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಆದರೆ ನರೇಂದ್ರ ಮೋದಿ ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಂಡು ಸರಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಬಿಜೆಪಿಯನ್ನು ವಿರೋಧಿಸುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡುತ್ತಾರೆ ಎಂದು ಹೇಳಿದ್ದಾರೆ.

ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ರಕ್ಷಿಸುವಲ್ಲಿ ಕಾಂಗ್ರೆಸ್‌ನ ಪಾತ್ರವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ, ಬಿಜೆಪಿಯ ಸಿದ್ಧಾಂತವನ್ನು ವಿರೋಧಿಸುವ ಕಾಂಗ್ರೆಸ್‌ನ ಬದ್ಧತೆಯನ್ನು ಒತ್ತಿ ಹೇಳಿದ್ದಾರೆ. ದೇಶದ ಯುವಕರು ಉದ್ಯೋಗ ಬಯಸುತ್ತಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ದೇಶದಲ್ಲಿ ನಿರುದ್ಯೋಗದ ರೋಗವನ್ನು ಹರಡಿದ್ದಾರೆ. ಈ ಹೊಸ ರೋಗವು ಭಾರತೀಯ ಯುವಜನರಿಗೆ ಸೋಂಕು ತಗುಲಿ ಅವರ ಭವಿಷ್ಯವನ್ನು ನಾಶಪಡಿಸಿದೆ. ದೇಶದ ಆದಿವಾಸಿಗಳು, ದಲಿತರು ಮತ್ತು ಹಿಂದುಳಿದ ವರ್ಗದ ಜನರಿಗೆ ನೈಜ ಪ್ರಾಶಸ್ತ್ಯ ನೀಡಲು ಜಾತಿ ಗಣತಿಯನ್ನು ನಡೆಸಬೇಕು ಎಂದು ಹೇಳಿದ್ದಾರೆ.

ಬಿಜೆಪಿ ಗುರಿ ಆದಿವಾಸಿಗಳ ಭೂಮಿ ಮತ್ತು ಸಂಪನ್ಮೂಲಗಳನ್ನು ಕಿತ್ತುಕೊಂಡು ತನ್ನ ಕಾರ್ಪೊರೇಟ್ ಸ್ನೇಹಿತರಿಗೆ ನೀಡುವುದಾಗಿದೆ. ಇಂದು ಭಾರತದಲ್ಲಿ ಷಡ್ಯಂತ್ರದ ಭಾಗವಾಗಿ ಆದಿವಾಸಿಗಳ ಹಕ್ಕುಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಮೋದಿಯ ಪ್ರಚೋದನೆಯಿಂದ ಅವರ ‘ಮಾಧ್ಯಮ ಮಿತ್ರ’ ಆದಿವಾಸಿಗಳನ್ನು ಬಹಿರಂಗವಾಗಿ ನಿಂದಿಸುತ್ತಾನೆ ಮತ್ತು ಅವರ ‘ಕಾರ್ಪೊರೇಟ್ ಸ್ನೇಹಿತ’ ಅವರ ಸಂಪನ್ಮೂಲಗಳನ್ನು ಲೂಟಿ ಮಾಡುತ್ತಾನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಆದಿವಾಸಿಗಳಿಗೆ ಅರಣ್ಯ ಹಕ್ಕುಗಳಂತಹ ಕಾನೂನುಗಳು, ಬುಡಕಟ್ಟು ಮಸೂದೆಗಳನ್ನು ಜಾರಿಗೆ ತಂದಿದೆ, ಆದರೆ ಆದಿವಾಸಿಗಳ ಹಿತಾಸಕ್ತಿಗಳನ್ನು ಕಾಪಾಡುವ ಯಾವುದೇ ಕಾನೂನನ್ನು ಜಾರಿಗೆ ತರಲು ಬಿಜೆಪಿ ಅನುಮತಿಸುವುದಿಲ್ಲ ಏಕೆಂದರೆ ಅವರು ಭೂಮಿಯನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿದ್ದಾರೆ. ಆದಿವಾಸಿಗಳ ಸಂಪನ್ಮೂಲಗಳನ್ನು ಕಸಿದುಕೊಂಡು ಅವರ ಕಾರ್ಪೊರೇಟ್ ಸ್ನೇಹಿತರಿಗೆ ನೀಡಲಾಗುತ್ತಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ರಾಜಕೀಯ ಪ್ರಕ್ಷುಬ್ಧ ಸಮಯದಲ್ಲೇ ರಾಜ್ಯದಲ್ಲಿ ರಾಹುಲ್‌ ಗಾಂಧಿಯ ಯಾತ್ರೆ ಸಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಮಂತ್ ಸೊರೆನ್ ಅವರನ್ನು ಬಂಧಿಸಿದ ಬೆನ್ನಲ್ಲಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ ಚಂಪೈ ಸೊರೆನ್ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ರಾಹುಲ್‌ ಗಾಂಧಿಗೆ ಖರ್ಗೆ ಪ್ರಶಂಸೆ:

ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಪ್ರತಿಕೂಲ ಪರಿಸ್ಥಿತಿಗಳಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ನಡೆಸುತ್ತಿದ್ದು, ಈ ಹೋರಾಟ ವಿಫಲವಾದರೆ ಮೋದಿ ಸರ್ಕಾರದಲ್ಲಿ ಜನರು ತೊಂದರೆ ಅನುಭವಿಸುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಪರವಾಗಿ ಖರ್ಗೆ ರಾಹುಲ್‌ ಗಾಂಧಿಗೆ ಧನ್ಯವಾದ ಅರ್ಪಿಸಿದ್ದು, ಯಾತ್ರೆ ಕೈಗೊಳ್ಳುವ ನಿರ್ಧಾರ ಬಹುಶಃ ಪಕ್ಷದ ಯಾವುದೇ ನಾಯಕರು ತೆಗೆದುಕೊಳ್ಳದ ದೊಡ್ಡ ಹೆಜ್ಜೆಯಾಗಿದೆ. ಅವರು ಯುವಕರು, ಮಹಿಳೆಯರು, ರೈತರು ಮತ್ತು ಬಡವರು ಸೇರಿದಂತೆ ಎಲ್ಲರಿಗೂ ನ್ಯಾಯವನ್ನು ಕೋರುತ್ತಿದ್ದಾರೆ. ಇಂತಹ ಪ್ರತಿಕೂಲ ಪರಿಸ್ಥಿತಿ ಮತ್ತು ಚಳಿಯ ನಡುವೆಯೂ ಅವರು ಯಾತ್ರೆ ಹೋಗುತ್ತಿದ್ದಾರೆ. ಅವರು ಬಿಜೆಪಿ ಸರ್ಕಾರದ ದೌರ್ಜನ್ಯದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಇದು ಪ್ರಜಾಪ್ರಭುತ್ವ ಮತ್ತು ದೇಶದ ಸಂವಿಧಾನವನ್ನು ಉಳಿಸುವ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್‌ನ್ನು ನೀವು ಬೆಂಬಲಿಸಲು ವಿಫಲವಾದರೆ ನೀವು ಮೋದಿಯ ಗುಲಾಮರಾಗುತ್ತೀರಿ, ಯುವಕರಿಗೆ ಉದ್ಯೋಗ ಒದಗಿಸುವ ಮತ್ತು ಕಪ್ಪುಹಣವನ್ನು ಮರಳಿ ಪಡೆಯುವ ಭರವಸೆಗಳನ್ನು ಅವರು ಈಡೇರಿಸಿಲ್ಲ ಎಂದು ಖರ್ಗೆ ಹೇಳಿದ್ದಾರೆ.

ಪ್ರಧಾನಿಯವರು ದೇಶದ ಮೇಲೆ ತಮ್ಮ ಅಭಿಪ್ರಾಯಗಳನ್ನು ಹೇರಲು ಮತ್ತು ಅಧಿಕಾರಕ್ಕಾಗಿ ಪ್ರತಿಯೊಬ್ಬರನ್ನು ಶಿಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಹೋರಾಟ ಆರೆಸ್ಸೆಸ್ ಮತ್ತು ಬಿಜೆಪಿ ವಿರುದ್ಧವಾಗಿದೆ. ಅವರು ದೇಶವನ್ನು ಮುಗಿಸಲು ಮತ್ತು ಬಡವರನ್ನು ದೂರ ಮಾಡಲು ಬಯಸುತ್ತಾರೆ. ಬಿಜೆಪಿಯ ಒಡೆದು ಆಳುವ ನೀತಿಯ ವಿರುದ್ಧ ಜನಜಾಗೃತಿ ಮೂಡಿಸಲು ಕಾಂಗ್ರೆಸ್ ಪ್ರತಿ ಮನೆಗೂ ತೆರಳಿ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಡ್ವಾಣಿ: ರಥಯಾತ್ರೆಯಿಂದ ಭಾರತ ರತ್ನದವರೆಗೆ; ಹಿಂಸಾಚಾರ, ಧ್ರುವೀಕರಣದಿಂದ ಮುನ್ನಡೆದ ರಾಜಕೀಯ ಪಯಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...