ಒಬ್ಬ ಮುಸ್ಲಿಂ ಸಂಸದನಿಲ್ಲದ ಬಿಜೆಪಿ ವಕ್ಫ್‌ ಆಸ್ತಿ ರಕ್ಷಣೆ ಮಾಡುತ್ತದೆ ಎನ್ನುವುದು ವಿಪರ್ಯಾಸ: ಡಿಎಂಕೆ ಸಂಸದ ಎ. ರಾಜ

ಕೇಂದ್ರದ ವಕ್ಫ್ ಮಸೂದೆಯು ವಕ್ಫ್ ಸಂಸ್ಥೆಗಳನ್ನು ದುರ್ಬಲಗೊಳಿಸುವ ಮತ್ತು ಮುಸ್ಲಿಂ ಸಮುದಾಯಕ್ಕೆ ಹಾನಿ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಡಿಎಂಕೆ ಸಂಸದ ಎ. ರಾಜಾ ಹೇಳಿದ್ದಾರೆ. ಮಸೂದೆಯನ್ನು ಹಿಂತೆಗೆದುಕೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ ಅವರು, “ಮುಸ್ಲಿಂ ಸಮುದಾಯದ ಒಬ್ಬ ಸಂಸದರನ್ನೂ ಹೊಂದಿರದ ಬಿಜೆಪಿ ತಂದಿರುವ ಈ ಮಸೂದೆಯ ಮೂಲಕ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲಾಗುವುದು ಎಂಬುದು ವಿಪರ್ಯಾಸ” ಎಂದು ಅವರು ಹೇಳಿದ್ದಾರೆ. ಅವರು ಲೋಕಸಭೆಯಲ್ಲಿ ವಕ್ಫ್‌ ಮಸೂದೆ ವಿಚಾರವಾಗಿ ಭಾಷಣ ಮಾಡುತ್ತಿದ್ದರು. ಒಬ್ಬ ಮುಸ್ಲಿಂ ಸಂಸದನಿಲ್ಲದ ವಕ್ಫ್ ಮಸೂದೆಯನ್ನು ಪರಿಚಯಿಸಲು … Continue reading ಒಬ್ಬ ಮುಸ್ಲಿಂ ಸಂಸದನಿಲ್ಲದ ಬಿಜೆಪಿ ವಕ್ಫ್‌ ಆಸ್ತಿ ರಕ್ಷಣೆ ಮಾಡುತ್ತದೆ ಎನ್ನುವುದು ವಿಪರ್ಯಾಸ: ಡಿಎಂಕೆ ಸಂಸದ ಎ. ರಾಜ