Homeಅಂತರಾಷ್ಟ್ರೀಯಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನರೇಂದ್ರ ಮೋದಿ ನೇತೃತ್ವದ ಪಕ್ಷದ ಸದಸ್ಯರು ಮಾಡುವ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡಿದರೆ ಮುಂದಿನ ದಿನಗಳಲ್ಲಿ ಸಂಸ್ಥೆಯ ವ್ಯವಹಾರಕ್ಕೆ ಸಮಸ್ಯೆಯಾಗಬಹುದು ಎಂದು ಸಿಬ್ಬಂದಿಗೆ ಸೂಚಿಸಿದ್ದರು ಎಂದು ಹೆಸರು ಹೇಳದ ಸಿಬ್ಬಂದಿಯೋರ್ವರು ಹೇಳಿದ್ದಾರೆ.

- Advertisement -
- Advertisement -

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ. ಅವರು ಪ್ರತಿನಿತ್ಯ ಸುಳ್ಳು ಸುದ್ದಿಗಳು ಮತ್ತು ದ್ವೇಷಭಾಷಣವನ್ನು ಹರಡುವ ಮೂಲಕ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಕೊನೆಗೂ ಅಮೆರಿಕ ಮೂಲದ ಪತ್ರಿಕೆಯೊಂದು ಫೇಸ್‌ಬುಕ್‌ ಬಗೆಗಿನ ಸತ್ಯವನ್ನು ಹೊರತೆಗೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ತಮ್ಮ ಸಂಸ್ಥೆಯ ನಿಯಮಗಳಿಗೆ ವಿರುದ್ಧವಿದ್ದರೂ ಸಹ ಬಿಜೆಪಿ ಮತ್ತು ಹಿಂದುತ್ವ ನಾಯಕರ ದ್ವೇಷದ ಭಾಷಣಗಳನ್ನು ತೆಗೆದುಹಾಕಲು ಫೇಸ್‌ಬುಕ್ ನಿರಾಕರಿಸಿದೆ ಎಂದು ಫೇಸ್‌ಬುಕ್‌ ಭಾರತದ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ಅಮೇರಿಕದ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಸಾಮಾಜಿಕ ಮಾಧ್ಯಮದ ಕಾರ್ಯನಿರ್ವಾಹಕರೊಬ್ಬರು ಹೇಳಿದ್ದಾರೆ ಎಂದು ಜರ್ನಲ್ ವರದಿ ಮಾಡಿದೆ.

 

 

 

ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಚೋದನಾಕಾರಿ ಭಾಷಣಗಳಿಗೆ ಹಲವು ಬಾರಿ ವಿವಾದಕ್ಕೆ ಈಡಾಗಿದ್ದಾರೆ. ಅವರ ಮುಸ್ಲಿಂ ವಿರೋಧಿ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮುಂದಾಗಿರಲಿಲ್ಲ. ಹಾಗೆಯೇ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾಸಿಂಗ್ ಹಲವು ದ್ವೇ‍ಷ ಭಾಷಣಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‌ಬುಕ್ ಫೇಸ್‌ಬುಕ್ ಭಾರತದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿಣಿ ಆಂಖಿ ದಾಸ್ ನಿರಾಕರಿಸಿದ್ದಾರೆ. ಆಡಳಿತಾರೂಢ ಪಕ್ಷದೊಂದಿಗಿರುವ ಸಂಬಂಧಕ್ಕೆ ಧಕ್ಕೆಯಾದೀತು ಎಂಬ ಹೆದರಿಕೆಯೇ ಇದಕ್ಕೆ ಕಾರಣ ಎಂದು ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ.

ನರೇಂದ್ರ ಮೋದಿ ನೇತೃತ್ವದ ಪಕ್ಷದ ಸದಸ್ಯರು ಮಾಡುವ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡಿದರೆ ಮುಂದಿನ ದಿನಗಳಲ್ಲಿ ಸಂಸ್ಥೆಯ ವ್ಯವಹಾರಕ್ಕೆ ಸಮಸ್ಯೆಯಾಗಬಹುದು ಎಂದು ಸಿಬ್ಬಂದಿಗೆ ಸೂಚಿಸಿದ್ದರು ಎಂದು ಹೆಸರು ಹೇಳದ ಸಿಬ್ಬಂದಿಯೋರ್ವರು ಹೇಳಿದ್ದಾರೆ.

ಮುಸ್ಲೀಮರ ವಿರುದ್ಧದ ಹಲವಾರು ಸುಳ್ಳು ಸುದ್ಧಿ ಹರಡುವ ಪೋಸ್ಟ್ ಗಳನ್ನು ಬಿಜೆಪಿ ನಾಯಕರು ಹಾಕುತ್ತಿದ್ದರೂ ಸಹ ದಾಸ್ ಮತ್ತವರ ತಂಡ ಯಾವುದೇ ಕ್ರಮ ಕೈಗೊಂಡಿಲ್ಲ. ಜೊತೆಗೆ ಚುನಾವಣೆಗೆ ಸಂಬಂಧಿಸಿದ ವಿಷಯಗಳಲ್ಲಿ ದಾಸ್ ಮತ್ತವರ ತಂಡ ಬಿಜೆಪಿಗೆ ಅನುಕೂಲಕರವಾಗಿ ನಡೆದುಕೊಂಡಿದ್ದರು ಎಂದು ಫೇಸ್‌ಬುಕ್‌ನ ಸಿಬ್ಬಂಧಿಯೊಬ್ಬರು ಮಾಹಿತಿ ನೀಡಿರುವುದಾಗಿ ಪತ್ರಿಕೆ ಹೇಳಿದೆ.


ಇದನ್ನೂ ಓದಿ: ಕೊರೊನಾ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಟ್ರಂಪ್ ವೀಡಿಯೊ ನಿರ್ಬಂಧಿಸಿದ ಫೇಸ್‌ಬುಕ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...