Homeಕರ್ನಾಟಕ‘ರಾಮರಾಜ್ಯ’ ಬಗ್ಗೆ ಮಾತನಾಡುವ BJP, ನಾಡನ್ನು ‘ಪಾನರಾಜ್ಯ’ ಮಾಡುತ್ತಿದೆ: ಮದ್ಯ ಖರೀದಿ ವಯಸ್ಸಿನ ಇಳಿಕೆಗೆ ವಿದ್ಯಾರ್ಥಿ...

‘ರಾಮರಾಜ್ಯ’ ಬಗ್ಗೆ ಮಾತನಾಡುವ BJP, ನಾಡನ್ನು ‘ಪಾನರಾಜ್ಯ’ ಮಾಡುತ್ತಿದೆ: ಮದ್ಯ ಖರೀದಿ ವಯಸ್ಸಿನ ಇಳಿಕೆಗೆ ವಿದ್ಯಾರ್ಥಿ ಸಂಘಟನೆಗಳ ವಿರೋಧ

ಲಜ್ಜೆಗೆಟ್ಟ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ ಎಂದು ಸಂಘಟನೆಗಳು ಆಕ್ರೊಶ ವ್ಯಕ್ತಪಡಿಸಿವೆ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರ ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ತೀರ್ಮಾನದ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ‘‘ರಾಮ ರಾಜ್ಯದ ಬಗ್ಗೆ ಮಾತನಾಡುವ ಬಿಜೆಪಿ ಸರ್ಕಾರ, ನಾಡನ್ನು ಪಾನ ರಾಜ್ಯವನ್ನಾಗಿ ಮಾಡಲು ಹೊರಟಿದೆ’’ ಎಂದು ಹೇಳಿವೆ. ಸರ್ಕಾರದ ನೀತಿಯನ್ನು ತೀವ್ರವಾಗಿ ಖಂಡಿಸಿರುವ ವಿದ್ಯಾರ್ಥಿ ಸಂಘಟನೆಗಳು ಅಧಿಸೂಚನೆಯನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸಿವೆ.

ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು 21 ರಿಂದ 18ಕ್ಕೆ ಇಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದ್ದು, ಈ ನಿಟ್ಟಿನಲ್ಲಿ ಅಭಿಪ್ರಾಯಗಳನ್ನು, ಸಲಹೆಗಳನ್ನು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನಾಗರೀಕರೊಂದಿಗೆ ಕೇಳಿದೆ. ಪ್ರಸ್ತುತ ಮದ್ಯ ಮಾರಾಟಕ್ಕೆ ಕಾನೂನುಬದ್ಧ ವಯಸ್ಸು 21 ಆಗಿದ್ದು, ಅಧಿಸೂಚನೆ ಜಾರಿಗೆ ಬಂದರೆ ಅದು 18 ಆಗಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರದ ನೀತಿಗೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕೆವಿಎಸ್‌‌‌ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಸರ್ಕಾರದ ಈ ನಡೆ ನನಗೆ ಆಶ್ಚರ್ಯ ತರಿಸಿಲ್ಲ, ಅಘಾತವಷ್ಟೆ ನೀಡಿದೆ. ಲಜ್ಜೆಗೆಟ್ಟ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು 18 ಮಾತ್ರವಲ್ಲ, 16 ಇಳಿಸಲು ಕೂಡಾ ಹೇಸಲ್ಲ. ಜನರನ್ನು ಕುಡಿಸಲು ಸರ್ಕಾರವೇ ಅಬಕಾರಿ ಇಲಾಖೆಗೆ ಟಾರ್ಗೆಟ್‌ ನೀಡುತ್ತದೆ. ಈ ಟಾರ್ಗೆಟ್‌ ಅನ್ನು ಇನ್ನಷ್ಟು ವಿಸ್ತಾರ ಮಾಡಲು ಸರ್ಕಾರ ಮುಂದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಬಿಜೆಪಿ ಸರ್ಕಾರ ಈಗಾಗಲೆ ಯುವಜನರನ್ನು ಜಾತಿ-ಧರ್ಮ, ಕೋಮುಗಲಭೆ ಅನ್ನುವ ಅಮಲಿನಲ್ಲಿ ಮುಳುಗಿಸಿದೆ. ಇದೀಗ ಮತ್ತೇ ದೈಹಿಕ ಮತ್ತು ಮಾನಸಿಕ ಅಮಲಿನಲ್ಲೆ ಯುವಜನರು ಇರಬೇಕು ಎಂದು ಬಯಸುತ್ತಿದೆ. ಒಟ್ಟಿನಲ್ಲಿ ಯುವಜನರ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಗೂ ಅವರ ಭವಿಷ್ಯವನ್ನು ಹಾಳುಮಾಡಲು ಪಣತೊಟ್ಟು ನಿಂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಧನೆ ಮಾಡದ ಸರ್ಕಾರ, ಚುನಾವಣೆ ಬರುವಂತಹ ಸಮಯದಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಲು ಇದನ್ನೆಲ್ಲಾ ಮಾಡುತ್ತಿದೆ. ಉದ್ಯೋಗ, ಉಚಿತ ಶಿಕ್ಷಣ, ಸಮಾನ ಶಿಕ್ಷಣದ ಕುರಿತಾಗಿ ಈ ವರೆಗೆ ಯಾವುದೆ ಸಾಧನೆ ಮಾಡದ ಸರ್ಕಾರ, ಇದೀಗ ಮದ್ಯದ ಅಮಲಿನಲ್ಲಿ ತೇಲಿಸುವಂತೆ ಕೆಲಸ ಮಾಡುತ್ತಿದೆ. ರಾಜಕಾರಣಿಗಳೆ ಕುಡಿದ ಮತ್ತಿನಲ್ಲಿ ಆಕ್ಸಿಡೆಂಟ್‌ಗಳು ಮಾಡುತ್ತಿರುವಂತಹ ಸಂದರ್ಭದಲ್ಲಿ ಮತ್ತೊಂದಷ್ಟು ಜನರನ್ನು ಮತ್ತಿನಲ್ಲಿ ಮುಳುಗುವಂತೆ ಮಾಡಲು ಸರ್ಕಾರ ಹೊರಡುತ್ತಿದೆ” ಎಂದು ಅವರು ಹೇಳಿದರು.

“ಯುವ ಜನರು ಇದನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಶಿಕ್ಷಣ-ಆರೋಗ್ಯ-ಉದ್ಯೋಗದಂತಹ ನೈಜ ಸಮಸ್ಯೆಗಳ ವಿಚಾರಗಳನ್ನು ಇಟ್ಟುಕೊಂಡು ಮುಂಬರುವ ಚುನಾವಣೆಯಲ್ಲಿ ಎದುರಿಸಬೇಕಾಗಿದೆ” ಎಂದು ಸರೋವರ್‌ ಆಗ್ರಹಿಸಿದರು.

ಎಸ್‌ಎಫ್‌ಐ ವಿದ್ಯಾರ್ಥಿ ಸಂಘಟನೆಯ ರಾಜ್ಯಾಧ್ಯಕ್ಷ ವಾಸುದೇವ ರೆಡ್ಡಿ ಮಾತನಾಡಿ, “ನಿನ್ನೆಯಷ್ಟೆ ಪ್ರಧಾನಿ ಮೋದಿ ಹುಬ್ಬಳ್ಳಿಯಲ್ಲಿ ಯುವಜನೋತ್ಸವ ಉದ್ಘಾಟನೆ ಮಾಡಿದ್ದಾರೆ. ಆದರೆ ನಮ್ಮ ರಾಜ್ಯದಲ್ಲಿ ಯುವಜನ ನೀತಿ ಎಂಬುವುದೆ ಇಲ್ಲ. ಯುವಜನರು ಎದುರಿಸುತ್ತಿರುವ ನಿರುದ್ಯೋಗ ಸೇರಿದಂತೆ ಹಲವಾರು ಸಮಾಜಘಾತುಕ ಶಕ್ತಿಗಳಿಗೆ, ಕೋಮುವಾದಕ್ಕೆ, ಜಾತಿ – ಅಸ್ಪೃಶ್ಯತೆಗೆ ಒಳಗಾಗುತ್ತಿದ್ದಾರೆ. ಇದೆಲ್ಲದರ ಜೊತೆಗೆ ಆನ್‌ಲೈನ್ ಜೂಜಾಟ ಹೆಚ್ಚಾಗಿದ್ದು, ಯುವಜನರು ಇವುಗಳಲ್ಲಿ ತೊಡಗಿದ್ದಾರೆ” ಎಂದು ಹೇಳಿದರು.

“ಇಷ್ಟೆಲ್ಲಾ ಸಮಸ್ಯೆಗಳಿರುವಾಗ ಸರ್ಕಾರ ಮದ್ಯ ಖರೀದಿಯ ವಯಸ್ಸನ್ನು ಇಳಿಸಿ ದೊಡ್ಡ ಪ್ರಮಾಣದಲ್ಲಿ ಯುವ ಜನರನ್ನು ಕುಡುಕರನ್ನಾಗಿ ಮಾಡುವ ಹುನ್ನಾರ ಮಾಡುತ್ತಿದೆ” ಎಂದು ಸರ್ಕಾರದ ನೀತಿಯನ್ನು ಖಂಡಿಸಿದ್ದಾರೆ.

“ಬಿಜೆಪಿ ಸರ್ಕಾರ ಬಾಯಿ ಬಿಟ್ಟರೆ ನೈತಿಕತೆ, ಸಂಸ್ಕೃತಿ, ಸಂಸ್ಕಾರದ ಬಗ್ಗೆ ಮಾತನಾಡುತ್ತದೆ. ಆದರೆ ಕಾನೂನು ಮೂಲಕ ಯುವಕರು ಮದ್ಯಪಾನಕ್ಕೆ ತೆರೆದುಕೊಳ್ಳಲು ಅವಕಾಶ ನೀಡುತ್ತಿದೆ. ರಾಮ ರಾಜ್ಯದ ಬಗ್ಗೆ ಹೇಳುವ ಈ ಸರ್ಕಾರ ಯುವಕರಿಗೆ ಮದ್ಯ ಬೇಗನೇ ಸಿಗುವಂತೆ ಮಾಡಿ ಪಾನ ರಾಜ್ಯ ಮಾಡುತ್ತಿದೆ. ಇದನ್ನು ಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ ಮತ್ತು ಇದನ್ನು ವಾಪಾಸು ಪಡೆಯಬೇಕು ಎಂದು ಆಗ್ರಹಿಸುತ್ತದೆ” ಎಂದು ವಾಸುದೇವ್‌ ರೆಡ್ಡಿ ಹೇಳಿದ್ದಾರೆ.

ವಿಶ್ವದಲ್ಲಿ ನಡೆಯುವ ಅಕಾಲಿಕ ಮರಣ ಮತ್ತು ಅಂಗವೈಕಲ್ಯಕ್ಕೆ 5 ನೇ ಪ್ರಮುಖ ಕಾರಣ ಆಲ್ಕೋಹಾಲ್ ಬಳಕೆಯಾಗಿದೆ ಎಂದು ವರದಿಗಳು ಹೇಳುತ್ತವೆ. ಆಲ್ಕೋಹಾಲ್ ಬಳಕೆಯಿಂದಾಗಿ 200 ಕ್ಕೂ ಹೆಚ್ಚು ಕಾಯಿಲೆಗಳು ಅದರಲ್ಲೂ ಮುಖ್ಯವಾಗಿ ಲಿವರ್ ಸಿರೋಸಿಸ್, ಕ್ಯಾನ್ಸರ್ ಕಾಯಿಲೆಗಳು ಬರುವ ಸಂಭವವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...