Homeಕರ್ನಾಟಕಅಧಿಕಾರ ಕಳೆದುಕೊಂಡ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌: ಬೊಮ್ಮಾಯಿಗೆ ದಿನೇಶ್ ಗುಂಡೂರಾವ್ ತಿರುಗೇಟು

ಅಧಿಕಾರ ಕಳೆದುಕೊಂಡ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌: ಬೊಮ್ಮಾಯಿಗೆ ದಿನೇಶ್ ಗುಂಡೂರಾವ್ ತಿರುಗೇಟು

- Advertisement -
- Advertisement -

ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿರುವ ನಿಮ್ಮ ಮೋದಿ ಸರ್ಕಾರದ ನಡೆ ನಿಮಗೆ ತುರ್ತುಪರಿಸ್ಥಿತಿ ಎಂದು ಅನ್ನಿಸುತ್ತಿಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶ್ನೆ ಮಾಡಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ‘ಅತೀ ಶೀಘ್ರದಲ್ಲೇ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ತಲೆದೋರಬಹುದು’ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಸಚಿವ ದಿನೇಶ್ ಗುಂಡೂರಾವ್ ಅವರು ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

”ಬೊಮ್ಮಾಯಿಯವರೇ, ಯಾವ ತುರ್ತು ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದೀರಿ? ತನ್ನ ರಾಜಕೀಯ ವಿರೋಧಿಗಳನ್ನ ಮಟ್ಟ ಹಾಕಲು ತನಿಖಾ ಏಜೇನ್ಸಿಗಳನ್ನು, ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಾಕ್ ಸ್ವಾತಂತ್ರ್ಯ ಹತ್ತಿಕ್ಕುತ್ತಿರುವ ನಿಮ್ಮ ಮೋದಿ ಸರ್ಕಾರದ ನಡೆ ನಿಮಗೆ ತುರ್ತುಪರಿಸ್ಥಿತಿ ಎಂದು ಅನ್ನಿಸುತ್ತಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

”ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌. ಬೊಮ್ಮಾಯಿಯವರೇ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ತುರ್ತು ಪರಿಸ್ಥಿತಿಯ ಲಕ್ಷಣವಲ್ಲ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಜವಬ್ಧಾರಿಯುತ ಸರ್ಕಾರದ ಕರ್ತವ್ಯ. ನಮ್ಮ ಸರ್ಕಾರ ಮಾಡುತ್ತಿರುವುದು ಅದನ್ನೆ” ಎಂದು ಹೇಳಿದ್ದಾರೆ.

”ಬೊಮ್ಮಾಯಿಯವರೇ ಒಂದು ಜವಾಬ್ಧಾರಿಯುತ ಸರ್ಕಾರವಾಗಿ ಸಮಾಜದ ಸ್ವಾಸ್ಥ್ಯ ಕಾಪಾಡುವುದು ನಮ್ಮ ಕರ್ತವ್ಯ. ಕಾನೂನು ಕೈಗೆತ್ತಿಕೊಳ್ಳುವವರ, ಸಂವಿಧಾನ ಬಾಹಿರ ಕೃತ್ಯ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ನಿಮ್ಮ ಪ್ರಕಾರ ತುರ್ತುಪರಿಸ್ಥಿತಿಯಾದರೆ ನಿಮ್ಮ ವಿವೇಚನಾ ಶಕ್ತಿಯ ಬಗ್ಗೆ ಅನುಕಂಪವಿದೆ. ನೀವು ಕಾನೂನು ಉಲ್ಲಂಘಿಸುವವರ ಪರವೇ?” ಎಂದು ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಬೊಮ್ಮಾಯಿ ಹೇಳಿಕೆ:

”ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ಗೆ ಈಗಾಗಲೇ ಅಧಿಕಾರದ ಅಮಲು ಏರಿದೆ. ಪ್ರತಿಯೊಬ್ಬ ಸಚಿವರೂ ವಿವಾದಾತ್ಮಕ ಮತ್ತು ಜನವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನು ನೋಡಿದರೆ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ದಿನಗಳು ಬರುವ ಆತಂಕ ಕಾಣುತ್ತಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಳಗಾವಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಹಸುಗಳನ್ನು ಏಕೆ ಕಡಿಯಬಾರದು ಎಂಬ ಸಚಿವರ ಹೇಳಿಕೆಗೆ ಬೊಮ್ಮಾಯಿ ಖಂಡನೆ

”ಒಬ್ಬ ಸಚಿವರು ಗೋಹತ್ಯೆ ನಿಷೇಧ ಕಾನೂನು ತಿದ್ದುಪಡಿ ಮಾಡುತ್ತೇವೆ ಎನ್ನುತ್ತಾರೆ. ಇನ್ನೊಬ್ಬ ಸಚಿವರು ಸರಕಾರದ ವಿರುದ್ಧ ಮಾತನಾ ಡಿದರೆ ಜೈಲಿಗೆ ಹಾಕುತ್ತಾರೆಂದು ಬೆದರಿಸುತ್ತಾರೆ. ಜನರ ವಾಕ್‌ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ” ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ.

”ಪಶುಸಂಗೋಪನೆ ಸಚಿವರು ಗೋ ಹತ್ಯೆ ಕಾಯ್ದೆ ತಿದ್ದುಪಡಿ ಮಾಡುತ್ತೇವೆಂದು ಹೇಳಿದ್ದಾರೆ. ಇದಕ್ಕೆ ಕೆಲವು ಸಚಿವರು ದನಿಗೂಡಿಸಿದ್ದಾರೆ. ಗೋಹತ್ಯೆ ಕಾಯ್ದೆ ನಾವು ಜಾರಿ ಮಾಡಿದ್ದಲ್ಲ. 1960ರ ಅವಧಿಯಲ್ಲೇ ಇದು ಜಾರಿಗೆ ಬಂದಿದೆ. ನಾವು ಗೋ ಹತ್ಯೆ ಮಾಡಿದರೆ ಅದಕ್ಕೆ ಕಠಿನ ಶಿಕ್ಷೆ ಕಾಯ್ದೆ ಜಾರಿ ಮಾಡಿದ್ದೇವೆ. ಒಂದು ವೇಳೆ ಕಾಂಗ್ರೆಸ್‌ ಸರಕಾರ ಗೋ ಹತ್ಯೆ ಕಾಯ್ದೆ ತಿದ್ದುಪಡಿ ಮಾಡಲು ಮುಂದಾದರೆ ಖಂಡಿತ ಅದಕ್ಕೆ ಆಪತ್ತು ಕಾದಿದೆ” ಎಂದು ಎಚ್ಚರಿಕೆ ನೀಡಿದರು.

”ರಾಜ್ಯದ ಅಭಿವೃದ್ಧಿ ಮಾಡಲು ಜನರು ನಿಮಗೆ ಅಧಿಕಾರ ಕೊಟ್ಟಿದ್ದಾರೆ. ನಾವು ವಿಪಕ್ಷವಾಗಿ ಸುಮ್ಮನೆ ಕುಳಿತುಕೊಳ್ಳು ವುದಿಲ್ಲ. ಯಾರನ್ನು ಜೈಲಿಗೆ ಹಾಕುತ್ತೀರಿ ಹಾಕಲಿ. ನಿಮ್ಮ ನೀತಿಯಿಂದ ಜನ ತಿರುಗಿ ಬಿದ್ದರೆ ಯಾವ ಜೈಲುಗಳು ಸಾಕಾಗುವುದಿಲ್ಲ. ಚಾಬೂಕಿನಿಂದ ಹೊಡೆಯಲು ಇದು ಇಸ್ಲಾಂ ರಾಷ್ಟ್ರವೂ ಅಲ್ಲ. ತುರ್ತು ಪರಿಸ್ಥಿತಿ ತರುವ ಪ್ರಯತ್ನಕ್ಕೆ ಪ್ರಜಾಪ್ರಭುತ್ವದಲ್ಲಿ ಜನರ ಶಕ್ತಿ ದೊಡ್ಡದಿದೆ” ಎಂದು ಹೇಳಿದ್ದರು.

ಬೊಮ್ಮಾಯಿ ಅವರ ಈ ಹೇಳಿಕೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ”ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ಬಾಲ ಸುಟ್ಟ ಬೆಕ್ಕಿನಂತೆ ಚಡಪಡಿಸುತ್ತಿದ್ದಾರೆ‌” ಎಂದು ವ್ಯಂಗ್ಯ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...