Homeಮುಖಪುಟ‘ಉತ್ತರಾಖಂಡದಲ್ಲಿ ಬಿಜೆಪಿ ಸೋಲಲಿದೆ’: ಬಿಜೆಪಿ ಸ್ಟಾರ್‌ ಪ್ರಚಾರಕ, ಮಧ್ಯಪ್ರದೇಶ ಸಿಎಂ ಚೌಹಾಣ್ ಹೇಳಿಕೆ

‘ಉತ್ತರಾಖಂಡದಲ್ಲಿ ಬಿಜೆಪಿ ಸೋಲಲಿದೆ’: ಬಿಜೆಪಿ ಸ್ಟಾರ್‌ ಪ್ರಚಾರಕ, ಮಧ್ಯಪ್ರದೇಶ ಸಿಎಂ ಚೌಹಾಣ್ ಹೇಳಿಕೆ

- Advertisement -
- Advertisement -

ಉತ್ತರಾಖಂಡ ಬಿಜೆಪಿಯ ಸ್ಟಾರ್‌ ಪ್ರಚಾರಕ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್‌ ಚೌಹಣ್‌ ಅವರು, “ಉತ್ತರಾಖಂಡದಲ್ಲಿ ಬಿಜೆಪಿ ತನ್ನ ಅಧಿಕಾರವನ್ನು ಕಳೆದುಕೊಳ್ಳಲಿದೆ” ಎಂದು ಹೇಳಿದ್ದಾರೆ. ಶಿವರಾಜ್ ಸಿಂಗ್ ಚೌಹಾಣ್‌ ಈಗಾಗಲೇ ಉತ್ತರಾಖಂಡದಲ್ಲಿ ಚುನಾವಣಾ ರ್‍ಯಾಲಿಗಳನ್ನು ನಡೆಸುತ್ತಾ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.

ಶಿವರಾಜ್ ಚೌಹಾಣ್ ಅವರ ಈ ವಿಡಿಯೊವನ್ನು ಕಾಂಗ್ರೆಸ್ಸಿಗರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ವೈರಲ್ ಆಗಿದೆ. ಹಿರಿಯ ಕಾಂಗ್ರೆಸ್ ನಾಯಕ, ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್‌‌ ಅವರು ವೀಡಿಯೊವನ್ನು ಬಳಸಿಕೊಂಡು ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಕೈತಪ್ಪಿದ ಟಿಕೆಟ್‌: ಬಿಜೆಪಿಗೆ ರಾಜೀನಾಮೆ ನೀಡುವತ್ತ ಉತ್ತರಾಖಂಡದ ಹಲವು ಶಾಸಕರು!

ಟ್ವಿಟರ್‌ನಲ್ಲಿ ಅವರು, “ಉತ್ತರಾಖಂಡದಿಂದ ಪ್ರಚಾರ ಮುಗಿಸಿ ವಾಪಸಾದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಉತ್ತರಾಖಂಡದ ಬಿಜೆಪಿಯ ವಾಸ್ತವವನ್ನು ಹೇಳಿದ್ದು, ಉತ್ತರಾಖಂಡದಿಂದ ಬಿಜೆಪಿ ಹೋಗಿದೆ ಎಂದು ಹೇಳಿದ್ದಾರೆ. ಉತ್ತರಾಖಂಡದಲ್ಲಿ ಬಿಜೆಪಿ ಹೊರಟು ಹೋಗಿದೆ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಚೌಹಾಣ್‌ ಅವರು ಊಟದ ಸಮಯದಲ್ಲಿ ಕೆಲವು ಜನರೊಂದಿಗೆ ಸಂವಹನ ನಡೆಸುತ್ತಾ, ಚುನಾವಣೆ ನಡೆಯುತ್ತಿರುವ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ತಮ್ಮ ಪಕ್ಷವಾದ ಬಿಜೆಪಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ:  ಉತ್ತರಾಖಂಡ: ಬಿಜೆಪಿ ಸರ್ಕಾರದ ಸಂಪುಟ ಸಚಿವ ಕಾಂಗ್ರೆಸ್‌‌‌ಗೆ ಸೇರ್ಪಡೆ

ವಿಡಿಯೊದಲ್ಲಿನ ಧ್ವನಿಯಯು ಸ್ಪಷ್ಟವಾಗಿಲ್ಲವಾದರೂ, ಎರಡೂ ರಾಜ್ಯಗಳಲ್ಲಿ ಪಕ್ಷದ ನಿರೀಕ್ಷಿತ ಕಾರ್ಯಕ್ಷಮತೆಯ ಬಗ್ಗೆ ಮತ್ತೊಬ್ಬರು ಕೇಳಿದಾಗ, ಶಿವರಾಜ್ ಸಿಂಗ್ ಚೌಹಾಣ್, “ಯುಪಿಯಲ್ಲಿ ಯಾವುದೇ ಅನುಮಾನವಿಲ್ಲ ಎಂದು ನಾನು ಭಾವಿಸುತ್ತೇನೆ. ಉತ್ತರಾಖಂಡದಲ್ಲಿ ಬಿಜೆಪಿ ಸೋಲುತ್ತಿದೆ. ಇದು ಬಿಗಿ ಸ್ಪರ್ಧೆಯಾಗಿದೆ (ಮುಝೆ ತೊ ಲಗ್ತಾ ಹೈ ಯುಪಿ ಮೆ ಕೋಯಿ ಸಂದೇಹ್ ನಹೀ ಹೈ, ಉತ್ತರಾಖಂಡ ಮೇ ಭೀ ಬಿಜೆಪಿ ಗಯಿ, ಕಡಾ ಮುಕಾಬ್ಲಾ ಹೈ)” ಎಂದು ಹೇಳುತ್ತಾರೆ. ಈ ವೇಳೆ ಅವರ ಮಾತನ್ನು ವಿಡಿಯೊ ಮಾಡುತ್ತಿರುವುದನ್ನು ಗಮನಸಿ, ವಿಡಿಯೊ ಮಾಡಬೇಡ ಎಂದು ಅದನ್ನು ನಿಲ್ಲಿಸುತ್ತಾರೆ.

ಮುಖ್ಯಮಂತ್ರಿ ಈ ವಿಡಿಯೊ  ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ. ರಾಜ್ಯದ ಹರಿದ್ವಾರದಲ್ಲಿ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಚೌಹಾಣ್, ಈ ಬಾರಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಪಡೆಯುತ್ತದೆ ಎಂದು ಹೇಳಿದ್ದಾರೆ. “ನಾನು ಇದನ್ನು ಆನ್‌ದ ರೆಕಾರ್ಡ್‌‌ ಹೇಳುತ್ತಿದ್ದೇನೆ. ಬಿಜೆಪಿ ಕಳೆದ ಚುನಾವಣೆಗಿಂತ ಹೆಚ್ಚು ಸ್ಥಾನ ಪಡೆಯಲಿದೆ. ಪುಷ್ಕರ್ ಸಿಂಗ್ ಧಾಮಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆ” ಎಂದು ಶುಕ್ರವಾರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿರುವ ಅವರು ಹೇಳಿದ್ದಾರೆ.

ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಹರಿದ್ವಾರ ದ್ವೇಷ ಭಾಷಣ: ಉತ್ತರಾಖಂಡ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...