Homeಮುಖಪುಟ'ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ': ಚರ್ಚೆಗೆ ಕಾರಣವಾದ ಕೇರಳ...

‘ಬಿಜೆಪಿ ಗೆಲ್ಲಬೇಕೆಂದು ಬಯಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳಿಂದ ಜನರನ್ನು ಕರೆ ತರಲಿದೆ’: ಚರ್ಚೆಗೆ ಕಾರಣವಾದ ಕೇರಳ ಬಿಜೆಪಿ ನಾಯಕನ ಹೇಳಿಕೆ

- Advertisement -
- Advertisement -

ತಮ್ಮ ಪಕ್ಷ ಗೆಲ್ಲಲು ಉದ್ದೇಶಿಸುವ ಕ್ಷೇತ್ರಗಳಿಗೆ ಇತರ ರಾಜ್ಯಗಳ ಜನರನ್ನು ಕರೆತರಲಿದೆ ಎಂದು ಬಿಜೆಪಿ ಕೇರಳ ಘಟಕದ ಉಪಾಧ್ಯಕ್ಷ ಬಿ. ಗೋಪಾಲಕೃಷ್ಣನ್ ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

“ನಾವು ಗೆಲ್ಲಲು ಉದ್ದೇಶಿಸಿರುವ ಕ್ಷೇತ್ರಗಳಿಗೆ ಜಮ್ಮುಕಾಶ್ಮೀರದಿಂದಲೂ ಜನರನ್ನು ಕರೆತರುತ್ತೇವೆ, ಅವರನ್ನು ಒಂದು ವರ್ಷದ ಅವಧಿಗೆ ಅಲ್ಲಿ ನೆಲೆಗೊಳಿಸಿ ಅವರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮಾಡುತ್ತೇವೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಭವಿಷ್ಯದಲ್ಲಿಯೂ ಅದನ್ನು ಮತ್ತೆ ಮಾಡುತ್ತೇವೆ” ಎಂದು ಗೋಪಾಲಕೃಷ್ಣನ್‌ ಹೇಳಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

2024ರ ಲೋಕಸಭಾ ಚುನಾವಣೆಗೆ ಮುನ್ನ ತ್ರಿಶೂರ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾರರ ನೋಂದಣಿ ಅಕ್ರಮಗಳು ನಡೆದಿವೆ ಎಂಬ ಕಾಂಗ್ರೆಸ್ ಆರೋಪಗಳ ನಡುವೆಯೇ ಗೋಪಾಲಕೃಷ್ಣನ್‌ರ ಈ ಹೇಳಿಕೆ ಹೊರಬಿದ್ದಿದೆ. ತ್ರಿಶೂರಿನ ಬಿಜೆಪಿ ಸಂಸದ ಸುರೇಶ್ ಗೋಪಿಯವರು ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಸುಳ್ಳು ಘೋಷಣೆಯನ್ನು ಸಲ್ಲಿಸಿದ್ದರು ಎಂದೂ ಕಾಂಗ್ರೆಸ್ ಆರೋಪಿಸಿದೆ.

ಸುರೇಶ್ ಗೋಪಿ ಮೂಲಕ ಬಿಜೆಪಿ ಕೇರಳದಲ್ಲಿ ತನ್ನ ಮೊದಲ ಲೋಕಸಭಾ ಕ್ಷೇತ್ರವನ್ನು ಗೆದ್ದಿದೆ. ಸುರೇಶ್ ಗೋಪಿ ಸಿಪಿಐ ಅಭ್ಯರ್ಥಿ ವಿ.ಎಸ್ ಸುನಿಲ್‌ ಕುಮಾರ್ ಅವರನ್ನು 74,600ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ, 2019 ಮತ್ತು 2024ರ ನಡುವೆ ತ್ರಿಶೂರಿನಲ್ಲಿ ಮತದಾರರ ಸಂಖ್ಯೆಯಲ್ಲಿ 1,46,656ರಷ್ಟು ಶಂಕಾಸ್ಪದ ಮತ್ತು ಅಸಹಜ ಏರಿಕೆ ಕಂಡು ಬಂದಿದ್ದು,ಇದು ಜನಸಂಖ್ಯಾ ಪ್ರವೃತ್ತಿಗೆ ಅನುಗುಣವಾಗಿಲ್ಲ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

ತ್ರಿಶೂರಿನಲ್ಲಿ ಮತದಾರರ ನೋಂದಣಿಗಾಗಿ ಬಿಜೆಪಿಯು ಸುಳ್ಳು ವಿಳಾಸಗಳನ್ನು ಬಳಸಿಕೊಂಡಿತ್ತು ಎಂಬ ಆರೋಪಗಳನ್ನು ನಿರಾಕರಿಸಿದ ಗೋಪಾಲಕೃಷ್ಣನ್,‌ ತಮ್ಮ ವಿಳಾಸಗಳಲ್ಲಿ ಹೊರಗಿನವರ ಹೆಸರುಗಳನ್ನು ಹೇಗೆ ಸೇರಿಸಲಾಗಿದೆ ಎನ್ನುವುದು ಮನೆ ಮಾಲಿಕರಿಗೆ ತಿಳಿದಿರಲಿಲ್ಲ ಎಂಬ ಆರೋಪಗಳು ಕೇಳಿ ಬಂದ ಒಂದೆರಡು ಪ್ರಕರಣಗಳಿರಬಹುದು ಎಂದು ಹೇಳಿದ್ದಾರೆ. ಕ್ಷೇತ್ರದಲ್ಲಿ ನಕಲಿ ಮತದಾನ ನಡೆದಿಲ್ಲ ಎಂದಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ಟಿ ರಮೇಶ್ ಅವರೂ ಆರೋಪಗಳನ್ನು ತಳ್ಳಿಹಾಕಿದ್ದು, ತ್ರಿಶೂರ್ ನಿವಾಸಿಗಳನ್ನು ಮಾತ್ರ ಮತದಾರರನ್ನಾಗಿ ನೋಂದಾಯಿಸಲಾಗಿತ್ತು ಎಂದಿದ್ದಾರೆ. ಚುನಾವಣಾ ಆಯೋಗವು ಮಾನ್ಯತೆ ನೀಡಿರುವ ಆರು ಗುರುತಿನ ಚೀಟಿಗಳಲ್ಲಿ ಒಂದನ್ನು, ಆರು ತಿಂಗಳು ವಾಸವಾಗಿರುವ ಪುರಾವೆ ಮತ್ತು ನೆರೆಹೊರೆಯವರ ದೃಢೀಕರಣ ಹೊಂದಿರುವ ಯಾರೇ ಆದರೂ ಕಾಶ್ಮೀರ ಸೇರಿದಂತೆ ಭಾರತದಲ್ಲಿ ಎಲ್ಲಿಯೇ ಆದರೂ ಮತದಾರರಾಗಿ ನೋಂದಾಯಿಸಿಕೊಳ್ಳಬಹುದು ಎಂದು ಬೆಟ್ಟು ಮಾಡಿದ ಅವರು, ನಕಲಿ ಮತದಾರರನ್ನು ಸೇರಿಸಿದ್ದು ಬಿಜೆಪಿಯಲ್ಲ, ಸಿಪಿಎಂ ಮತ್ತು ಕಾಂಗ್ರೆಸ್ ಎಂದು ಆರೋಪಿಸಿದ್ದಾರೆ.

ಕಳೆದ ವಾರ ಸುದ್ದಿಗಾರರೊಂದಿಗೆ ಮಾತನಾಡುತ್ತ ಕಾಂಗ್ರೆಸ್‌ನ ಆರೋಪಗಳಿಗೆ ಪ್ರತಿಕ್ರಿಯಿಸಿದ್ದ ಸುರೇಶ್ ಗೋಪಿ,‌ “ಮತದಾರರ ಪಟ್ಟಿಯಲ್ಲಿ ಕೈವಾಡ ನಡೆದಿದೆ ಎಂಬ ಆರೋಪಕ್ಕೆ ಚುನಾವಣಾ ಆಯೋಗವು ಉತ್ತರಿಸಬೇಕು. ನಾನು ಓರ್ವ ಸಚಿವ ಮತ್ತು ನಾನು ನನ್ನ ಕರ್ತವ್ಯಗಳನ್ನು ಪೂರೈಸಿದ್ದೇನೆ. ಉತ್ತರಿಸಬೇಕಾದವರು ಉತ್ತರಿಸುತ್ತಾರೆ. ನಿಮಗೆ ಹೆಚ್ಚಿನ ಪ್ರಶ್ನೆಗಳಿದ್ದರೆ ಅವರನ್ನು ಕೇಳಿ ಅಥವಾ ವಿಷಯವು ಸರ್ವೋಚ್ಚ ನ್ಯಾಯಾಲಯದ ಮುಂದೆ ಬರುವವರೆಗೆ ಕಾಯಿರಿ” ಎಂದು ಹೇಳಿದ್ದರು.

ಸಮಾಜವಾದಿ ಪಕ್ಷದಿಂದ ಟಿಎಂಸಿ, ಬಿಜೆಡಿ ಮತ್ತು ಎಎಪಿಯವರೆಗೆ: ಮತದಾರರ ಪಟ್ಟಿಯ ಅಕ್ರಮಗಳೊಂದಿಗೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗದ ಬಾಗಿಲು ತಟ್ಟಿದ ಬಗೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...