Homeಮುಖಪುಟಗಾಳಿ ಹೆಚ್ಚು ಬಲವಾಗಿ ಬೀಸಿದರೆ ಎನ್‌ಡಿಎಗೆ ಬಹುಮತ ಪಡೆಯುವುದು ಕಷ್ಟ: ಯೋಗೇಂದ್ರ ಯಾದವ್

ಗಾಳಿ ಹೆಚ್ಚು ಬಲವಾಗಿ ಬೀಸಿದರೆ ಎನ್‌ಡಿಎಗೆ ಬಹುಮತ ಪಡೆಯುವುದು ಕಷ್ಟ: ಯೋಗೇಂದ್ರ ಯಾದವ್

- Advertisement -
- Advertisement -

ಪ್ರಸಿದ್ಧ ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಮತ್ತು ಯುಎಸ್ ಸಮೀಕ್ಷೆ ತಜ್ಞ ಇಯಾನ್ ಬ್ರೆಮ್ಮರ್ ನಂತರ, ಮತ್ತೋರ್ವ ಚುನಾವಣಾ ವಿಶ್ಲೇಷಕ ಯೋಗೇಂದ್ರ ಯಾದವ್ ಈಗ ಭಾರತೀಯ ಜನತಾ ಪಕ್ಷವು (ಬಿಜೆಪಿ) ಮತ್ತೊಮ್ಮೆ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯ ಸಾಧಿಸುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಆದರೆ, ಬಿಜೆಪಿ 400 ಸೀಟುಗಳನ್ನು ತಪುಪುವುದು ಕಷ್ಟ ಎಂದು ಹೇಳಿದ್ದಾರೆ.

ಆದಾಗ್ಯೂ, ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಮಾಧಾನ ತರಲಿದ್ದು, ಅದರ ಸ್ಥಾನಗಳ ಸಂಖ್ಯೆ 100 ದಾಟಬಹುದು ಎಂದು ಅಂದಾಜಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ಈ ಹೊಸ ವೀಡಿಯೊದಲ್ಲಿ, ಚುನಾವಣಾ ಟ್ರೆಂಡ್‌ಗಳ ಅಂತಿಮ ಮೌಲ್ಯಮಾಪನವನ್ನು ಪ್ರಸ್ತುತಪಡಿಸಲಾಗಿದೆ. 400 ಅಥವಾ 303 ಅನ್ನು ಮರೆತುಬಿಡಿ, ಬಿಜೆಪಿ 272 ಅನ್ನು ದಾಟುವುದಿಲ್ಲ. ಗಾಳಿ ಹೆಚ್ಚು ಬಲವಾಗಿ ಬೀಸಿದರೆ, ಎನ್‌ಡಿಎಗೆ ಬಹುಮತ ಸಿಗದಿರುವ ಸಾಧ್ಯತೆಯಿದೆ” ಎಂದು ಹೇಳಿದ್ದಾರೆ.

“ಚುನಾವಣಾ ಟ್ರೆಂಡ್‌ಗಳ ಬಗ್ಗೆ ಸತ್ಯವನ್ನು ಬಹಿರಂಗಪಡಿಸುವ ನನ್ನ ಹಿಂದಿನ ವೀಡಿಯೊವನ್ನು ಒಂದು ಕೋಟಿಗೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ಎಲ್ಲ ಒಪ್ಪಂದಗಳು, ಭಿನ್ನಾಭಿಪ್ರಾಯಗಳು, ಟೀಕೆಗಳು ಮತ್ತು ಪ್ರಶ್ನೆಗಳಿಗೆ ಧನ್ಯವಾದಗಳು. ಮಾಧ್ಯಮದ ಭ್ರಮೆಗಳಿಂದ ಇತರರನ್ನು ತಪ್ಪಿಸಲು ಮತ್ತು ಉಳಿಸಲು, ಈ ವೀಡಿಯೊವನ್ನು ವೀಕ್ಷಿಸಿ ಮತ್ತು ತೋರಿಸಿ” ಎಂದು ಮನವಿ ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷದ ಪರವಾಗಿ ತಮ್ಮ ಭವಿಷ್ಯವಾಣಿಗಾಗಿ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕೆಗೆ ಗುರಿಯಾಗಿರುವ ಕಿಶೋರ್, ಯಾದವ್ ಅವರ ಸ್ಥಾನದ ಮುನ್ಸೂಚನೆಯನ್ನು ಬೆಂಬಲಿಸಿದ್ದಾರೆ. ಯಾದವ್ ಪ್ರಕಾರ, ಬಿಜೆಪಿ 240-260 ಸ್ಥಾನಗಳನ್ನು ಮತ್ತು ಅದರ ಮಿತ್ರಪಕ್ಷಗಳು 34-45 ಸ್ಥಾನಗಳನ್ನು ಗೆಲ್ಲುತ್ತವೆ. ಅಂದರೆ, ಎನ್‌ಡಿಎ ಒಟ್ಟು 275 ಮತ್ತು 305 ಸ್ಥಾನಗಳ ನಡುವೆ ಇರಬಹುದು ಎಂದಿದ್ದಾರೆ.

ಭವಿಷ್ಯ ನುಡಿದಿರುವ ಯಾದವ್, ಕಾಂಗ್ರೆಸ್ 85 ರಿಂದ 100 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಬಿಜೆಪಿ ಜಗ್ಗಾಟವನ್ನು ತನ್ನ ಹಾದಿಯಲ್ಲಿ ನಿಲ್ಲಿಸುವ ಆಶಯ ಹೊಂದಿರುವ ಇಂಡಿಯಾ ಬ್ಲಾಕ್ 120-135 ಸ್ಥಾನಗಳಿಗೆ ಇಳಿಯುವ ಸಾಧ್ಯತೆಯಿದೆ. ಎಂದು ಹೇಳಿದ್ದಾರೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಗೆದ್ದಿತ್ತು.

ಈ ವಾರ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಕಿಶೋರ್, ಆಡಳಿತಾರೂಢ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಯಾವುದೇ ಗಮನಾರ್ಹ ಅತೃಪ್ತಿ ಇಲ್ಲದ ಕಾರಣ ಬಿಜೆಪಿ ಆರಾಮವಾಗಿ ಬಹುಮತದ ಅಂಕವನ್ನು ದಾಟುತ್ತದೆ ಎಂದು ಹೇಳಿದ್ದರು.

“ನಿರಾಶೆಗಳು, ಈಡೇರದ ಆಕಾಂಕ್ಷೆಗಳು ಇರಬಹುದು. ಆದರೆ, ವ್ಯಾಪಕ ಕೋಪದ ಬಗ್ಗೆ ನಾವು ಕೇಳಿಲ್ಲ” ಎಂದು ಪ್ರಶಾಂತ್ ಕಿಶೋರ್ ಖಾಸಗಿ ಮಾಧ್ಯಮದ ಸಂದರ್ಶನದಲ್ಲಿ ತಿಳಿಸಿದರು. ಬಿಜೆಪಿ ತನ್ನ ಮಹತ್ವಾಕಾಂಕ್ಷೆಯ ‘370 ಸ್ಥಾನ’ ಗುರಿಯನ್ನು ಸಾಧಿಸಲು ಸಾಧ್ಯವಾಗದಿರಬಹುದು ಎಂದು ಸುಳಿವು ನೀಡಿದರು.

ಬಿಜೆಪಿ 295 ರಿಂದ 315 ಸ್ಥಾನಗಳನ್ನು ಗೆಲ್ಲಬಹುದು ಎಂದು ಅಮೆರಿಕದ ರಾಜಕೀಯ ವಿಜ್ಞಾನಿ ಇಯಾನ್ ಬ್ರೆಮ್ಮರ್ ವಾಹಿನಿಗೆ ತಿಳಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ 303 ಲೋಕಸಭಾ ಸ್ಥಾನಗಳನ್ನು ಗೆದ್ದು, ಹಿಂದಿ ಹೃದಯ ರಾಜ್ಯಗಳಲ್ಲಿ ‘ಮೋದಿ ಅಲೆ’ಯ ಮೇಲೆ ಸವಾರಿ ಮಾಡಿತ್ತು. 370 ಸ್ಥಾನಗಳನ್ನು ಗೆಲ್ಲಬೇಕಾದರೆ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಪಕ್ಷಕ್ಕೆ ಭರ್ಜರಿ ಜಯಗಳಿಸಬೇಕಿದೆ.

ಇದನ್ನೂ ಓದಿ; ಆನಂದ ಬೋಸ್ ವಿರುದ್ಧ ಕಿರುಕುಳ ಪ್ರಕರಣ: ರಾಜಭವನದ ಸಿಬ್ಬಂದಿ ವಿರುದ್ಧದ ತನಿಖೆಗೆ ಕಲ್ಕತ್ತಾ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...