Homeಮುಖಪುಟಉತ್ತರ ಪ್ರದೇಶ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು, ಎಸ್‌ಪಿಗೆ ಹಿನ್ನಡೆ

ಉತ್ತರ ಪ್ರದೇಶ: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು, ಎಸ್‌ಪಿಗೆ ಹಿನ್ನಡೆ

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳಿರುವಾಗ ಬಿಜೆಪಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 75 ಸ್ಥಾನಗಳಲ್ಲಿ 67 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಕೇವಳ 5 ಜಿಲ್ಲಾ ಪಂಚಾಯತ್‌ಗಳಲ್ಲಿ ಮಾತ್ರ ಗೆಲುವನ್ನು ಸಾಧಿಸಿದ್ದಾರೆ. ರಾಷ್ಟ್ರೀಯ ಲೋಕ ದಳ, ಜನಸತ್ತಾದಳ, ಮತ್ತು ಸ್ವತಂತ್ರ ಅಭ್ಯರ್ಥಿಗಳು ತಲಾ ಒಂದೊಂದು ಸ್ಥಾನವನ್ನು ಪಡೆದುಕೊಂಡಿದ್ದಾರೆ.

2016ರಲ್ಲಿ ನಡೆದ ಹಿಂದಿನ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ 75 ಸ್ಥಾನಗಳಲ್ಲಿ 60 ಸ್ಥಾನವನ್ನು ಗೆದ್ದುಕೊಂಡಿತ್ತು. ಈ ಚುನಾವಣೆಯಲ್ಲಿ ಫಲಿತಾಂಶವು ವ್ಯತಿರಿಕ್ತವಾಗಿ ಬಂದಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ 2022ರ ಉತ್ತರ ಪ್ರದೇಶ ವಿಧಾಸಭೆ ಚುನಾವಣೆಯ ಮೇಲೆ ಹೆಚ್ಚಿನ ಪರಿಣಾಮವನ್ನು ಬೀರಲಾರದು ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ನಿನ್ನೆಯ ಫಲಿತಾಂಶ ಮುಂದಿನವರ್ಷದ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಎಂದು ಬಿಜೆಪಿ ನಾಯಕರು ಬಣ್ಣಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಪ್ರದೇಶ ಜಿಲ್ಲಾ ಪಂಚಾಯತ್ ಚುನಾವಣೆಯ ಗೆಲುವಿಗೆ ಹರ್ಷ ವ್ಯಕ್ತಪಡಿಸಿ ಈ ಫಲಿತಾಂಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಸರ್ಕಾರದ ಅಭಿವೃದ್ಧಿ ಕೆಲಸಗಳಿಗೆ ಜನರು ನೀಡಿದ ಉಡುಗೊರೆ ಎಂದು ಟ್ವೀಟ್‌ ಮಾಡಿದ್ದಾರೆ.

ಬಿಜೆಪಿ 21 ಸ್ಥಾನಗಳಲ್ಲಿ ಮತ್ತು ಸಮಾಜವಾದಿ ಪಕ್ಷ 1 ಸ್ಥಾನದಲ್ಲಿ ಅವಿರೋಧವಾಗಿ ಗೆಲುವು ಸಾಧಿಸಿವೆ. ಮಾಜಿ ಮುಖ್ಯಮಂತ್ರಿ ಮಾಯಾವತಿಯವರ ಬಿಎಸ್‌ಪಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಗವಹಿಸಿರಲಿಲ್ಲ.


ಇದನ್ನೂ ಓದಿ: ಯೋಗಿ ಸರ್ಕಾರದ ವಿರುದ್ಧ ಜನಾಕ್ರೋಶ: ಕೋವಿಡ್ ಬಿಕ್ಕಟ್ಟಿನಲ್ಲಿ ಮುಂದಿನ ಚುನಾವಣೆಯ ಚರ್ಚೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...