Homeಮುಖಪುಟನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

ನಿತೀಶ್ ಕುಮಾರ್ ಆಗಮನದಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ: ಪ್ರಶಾಂತ್ ಕಿಶೋರ್

- Advertisement -
- Advertisement -

ನಿತೀಶ್ ಕುಮಾರ್ ಮತ್ತು ಅವರ ಜೆಡಿಯು ಪಕ್ಷವನ್ನು ಎನ್‌ಡಿಎ ತೆಕ್ಕೆಗೆ ಮರಳಿ ಕರೆತಂದಿರುವುದರಿಂದ ಬಿಜೆಪಿಗೆ ಹೆಚ್ಚಿನ ಲಾಭವಿಲ್ಲ ಎಂದು ರಾಜಕೀಯ ತಜ್ಞ ಪ್ರಶಾಂತ್ ಕಿಶೋರ್ ಹೇಳಿದರು.

ಬಿಹಾರದಿಂದ ಬಿಜೆಪಿಯ ಗೆಲ್ಲುವ ಸ್ಥಾನಗಳಲ್ಲಿ ಭಾರಿ ವ್ಯತ್ಯಾಸವಾಗುವುದಿಲ್ಲ. ಆದರೆ, ಈ ಬೆಳವಣಿಗೆ ಪ್ರತಿಪಕ್ಷಗಳ ಮಾನಸಿಕ ಸ್ಥೈರ್ಯವನ್ನು ಕಡಿಮೆಯಾಗಿಸಿದೆ ಎಂದು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆಗೆ ಮುನ್ನ ನಡೆದ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ, ಕಳೆದ ವರ್ಷ ಬಿಜೆಪಿ ವಿರುದ್ಧ ಒಗ್ಗಟ್ಟಿನಿಂದ ಹೋರಾಡಲು ವಿರೋಧ ಪಕ್ಷಗಳನ್ನು ಮುನ್ನಡೆಸಿದ್ದ ನಿತೀಶ್ ಕುಮಾರ್ ಅವರು ಇಂಡಿಯಾ ಬಣವನ್ನು ತೊರೆದು ಎನ್‌ಡಿಎ ಸೇರಿದ್ದಾರೆ. ಹಲವಾರು ಸಂದರ್ಭಗಳಲ್ಲಿ ಪರಸ್ಪರ ಕೆಸರೆರಚಾಟದ ಹೊರತಾಗಿಯೂ, ಜೆಡಿಯು ಮತ್ತು ಬಿಜೆಪಿ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ತೋರುತ್ತದೆ. ಆದರೆ, ನಿತೀಶ್ ಕುಮಾರ್ ಅವರು ಇಂಡಿಯಾ ಬಣದಿಂದ ನಿರ್ಗಮಿಸಿದ್ದರಿಂದ ಮೈತ್ರಿಗೆ ಯಾವುದೇ ಹಾನಿಯಾಗುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು ಯಾರೊಂದಿಗೆ ಸ್ಪರ್ಧಿಸಿದರೂ, ಅದು 20ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಪ್ರಶಾಂತ್ ಕಿಶೋರ್ ಹೇಳಿದರು.

ನಿತೀಶ್ ಕುಮಾರ್ ಅವರನ್ನು ಬಿಜೆಪಿಯು ವಾಪಸ್ ಕರೆಸಿಕೊಳ್ಳುವ ಮೂಲಕ ಗೆಲ್ಲುವ ಯುದ್ಧದಲ್ಲಿ ಸೋಲುವ ತಂತ್ರಕ್ಕೆ ಹೊರಟಿದೆ. ಬಿಜೆಪಿಯ ಸಂಖ್ಯೆಯೂ ಕಡಿಮೆಯಾಗಲಿದೆ. ಏಕೆಂದರೆ ಅವರು ಜೆಡಿಯು ಜೊತೆ ಸೀಟುಗಳನ್ನು ಹಂಚಿಕೊಳ್ಳುತ್ತಾರೆ. ಈ ನಿರ್ಧಾರದಿಂದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬೆಲೆ ತೆರಬೇಕಾಗುತ್ತದೆ; ಇದು ಬಿಜೆಪಿಗೆ ತಿಳಿದಿದೆ’ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿಗೆ ಯಾರು ಸಲಹೆ ನೀಡುತ್ತಿದ್ದಾರೊ ಗೊತ್ತಿಲ್ಲ:

ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ರಾಹುಲ್ ಗಾಂಧಿ ತೆಗೆದುಕೊಂಡಿರುವ ಸಮಯ ತಪ್ಪಾಗಿದೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. “ಈಗ ಅವರು ಪ್ರಧಾನ ಕಚೇರಿಯಲ್ಲಿರಬೇಕು; ಅವರು ಫಿಲ್ಡ್‌ನಲ್ಲಿ ಇರಬೇಕಾದಾಗ, ಪ್ರಧಾನ ಕಚೇರಿಯಲ್ಲಿದ್ದರು. ಪ್ರಧಾನ ಕಚೇರಿಯಲ್ಲಿ ಅವರ ಅಗತ್ಯವಿದ್ದಾಗ, ಈಗ ಯಾತ್ರೆಯಲ್ಲಿದ್ದಾರೆ. ಇದು ಅವರ ಸಮಯದ ಉತ್ತಮ ಬಳಕೆ ಎಂದು ನಾನು ಭಾವಿಸುವುದಿಲ್ಲ’ ಎಂದು ಪ್ರಶಾಂತ್ ಕಿಶೋರ್ ಹೇಳಿದರು.

ಇಂಡಿಯಾ ಬ್ಲಾಕ್ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಏಕೆಂದರೆ, ಸಾಕಷ್ಟು ತಡವಾಗಿ ಅಸ್ತಿತ್ವಕ್ಕೆ ಬಂದಿತು. ‘2021 ಅಥವಾ 2022 ರಲ್ಲಿ ಅವರು ಒಟ್ಟಿಗೆ ಸೇರುವುದನ್ನು ಯಾವುದು ತಡೆಯಿತು? 2024 ರಲ್ಲಿ ಚುನಾವಣೆ ನಡೆಯಲಿದೆ ಮತ್ತು ಸೀಟು ಹಂಚಿಕೆ ನಡೆಯಲಿದೆ ಎಂದು ಅವರಿಗೆಲ್ಲ ಮೊದಲೆ ತಿಳಿದಿತ್ತು’ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

2024ಕ್ಕೂ ಮೋದಿಯೆ ಪ್ರಧಾನಿ:

ರಾಮಮಂದಿರವು ಹೊಸ ಮತಗಳನ್ನು ಸೇರಿಸುವುದಿಲ್ಲ; ಆದರೆ ಮತಗಳನ್ನು ಕ್ರೋಢೀಕರಿಸುತ್ತದೆ. ನರೇಂದ್ರ ಮೋದಿ ಅವರ ಶಕ್ತಿ ಅವರು ಮತ್ತು ಅವರ ಕಾರ್ಯಸೂಚಿಗಳು ಪ್ರತಿ 5 ವರ್ಷಗಳಿಗೊಮ್ಮೆ ವಿಕಸನಗೊಳ್ಳುತ್ತವೆ. 2002ರಲ್ಲಿ ಅವರು ಹಿಂದೂ ಹೃದಯ ಸಾಮ್ರಾಟ್ ಆಗಿದ್ದರು. 2007ರ ಹೊತ್ತಿಗೆ ಅವರು ಗುಜರಾತ್‌ನಲ್ಲಿ ಅಭಿವೃದ್ಧಿಯನ್ನು ತರಬಲ್ಲ ಈ ಸಮರ್ಥ ಆಡಳಿತಗಾರರಾದರು. 2014ರ ಹೊತ್ತಿಗೆ ಅವರು ಭಾರತವನ್ನು ಬದಲಾಯಿಸಬಲ್ಲ ವ್ಯಕ್ತಿಯಾದರು. 2019, ಅವರು ಭಾರತದ ಕಥೆಗಳಿಗೆ ದೊಡ್ಡ ಹೆಮ್ಮೆ, ಧೈರ್ಯ ಮತ್ತು ದೃಢತೆಯನ್ನು ತರಬಲ್ಲ ವ್ಯಕ್ತಿಯಾದರು. 2024 ರಲ್ಲಿ ಅವರನ್ನು ದೇಶಕ್ಕೆ ರಾಮನನ್ನು ತಂದ ವ್ಯಕ್ತಿ ಎಂದು ಗುರುತಿಸಲಾಗುತ್ತದೆ. ಬಿಜೆಪಿ ಮಾಡುವುದೆಲ್ಲವೂ ಮೋದಿಯ ಈ ಬ್ರ್ಯಾಂಡಿಂಗ್‌ಗೆ ಅಧೀನವಾಗಿದೆ… ಅವರು ಬಿಜೆಪಿಯ ಇಂದಿರಾಗಾಂಧಿ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ಹೊಸದಾಗಿ ಮತದಾನ ನಡೆಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...