Homeದಲಿತ್ ಫೈಲ್ಸ್ದಲಿತ ಇಂಜಿನಿಯರ್‌ಗೆ ಶೂನಿಂದ ಹಲ್ಲೆ: ಬಿಜೆಪಿ ಕಾರ್ಯಕರ್ತನ ಬಂಧನ

ದಲಿತ ಇಂಜಿನಿಯರ್‌ಗೆ ಶೂನಿಂದ ಹಲ್ಲೆ: ಬಿಜೆಪಿ ಕಾರ್ಯಕರ್ತನ ಬಂಧನ

- Advertisement -
- Advertisement -

ದಲಿತ ಇಂಜಿನಿಯರ್‌ಗೆ ಕಚೇರಿಯೊಳಗೆ ಶೂನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಉತ್ತರ ಪ್ರದೇಶದ ಬಲಿಯಾದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಭಾನುವಾರ (ಆ.24) ಬಂಧಿಸಿದ್ದಾರೆ.

ಘಟನೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ವಿದ್ಯುತ್ ಇಲಾಖೆಯ ಸೂಪರಿಂಟೆಂಡಿಂಗ್ ಇಂಜಿನಿಯರ್‌ ಲಾಲ್ ಸಿಂಗ್ ಅವರಿಗೆ ಥಳಿಸಿರುವುದನ್ನು ನೋಡಬಹುದು.

ಪೊಲೀಸ್ ದೂರಿನ ಪ್ರಕಾರ, ಈ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ.

“ಲಾಲ್ ಸಿಂಗ್ ತಮ್ಮ ದೂರಿನಲ್ಲಿ, ಮುನ್ನಾ ಬಹದ್ದೂರ್ ಎಂಬ ವ್ಯಕ್ತಿ ಕೆಲವು ಅಪರಿಚಿತ ವ್ಯಕ್ತಿಗಳೊಂದಿಗೆ ತಮ್ಮ ಕಚೇರಿಗೆ ಅನುಮತಿಯಿಲ್ಲದೆ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಶೂನಿಂದ ಥಳಿಸಿದ್ದಾರೆ” ಎಂದು ಹೇಳಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಓಂವೀರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಅಧಿಕಾರಿ ಮೇಲೆ ಹಲ್ಲೆ ನಡೆಸಿದವರು ಕೆಲವು ಪ್ರಮುಖ ಕಡತಗಳನ್ನು ಹರಿದು ಹಾಕಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಲಾಲ್ ಸಿಂಗ್ ಮತ್ತು ಅವರ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು  “ಅಧಿಕಾರದ ಅರ್ಥ ಹಿಂಸೆ ನೀಡುವುದಲ್ಲ” ಎಂಬ ಸಂದೇಶದೊಂದಿಗೆ ವಿಡಿಯೋ ಹಂಚಿಕೊಂಡಿದ್ದಾರೆ.

ಬಂಧನಕ್ಕೊಳಗಾಗುವ ಮೊದಲು ಮುನ್ನಾ ಬಹದ್ದೂರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, “ತನ್ನ ಪ್ರದೇಶದಲ್ಲಿನ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲು ಲಾಲ್ ಸಿಂಗ್ ಅವರ ಕಚೇರಿಗೆ ಹೋಗಿದ್ದಾಗ ಅವರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಮುನ್ನಾ ಬಹದ್ದೂರ್ ಮತ್ತು ಆತನ ಜೊತೆಗಿನ ಇತರರ ವಿರುದ್ಧ ಬಿಎನ್‌ಎಸ್‌ನ ಸಂಬಂಧಿತ ಸೆಕ್ಷನ್‌ಗಳು ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಪಿ ಓಂವೀರ್ ಸಿಂಗ್ ತಿಳಿಸಿದ್ದಾರೆ.

“ನಾವು ಮುನ್ನಾ ಬಹದ್ದೂರ್ ಅವರನ್ನು ಬಂಧಿಸಿದ್ದೇವೆ ಮತ್ತು ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಬೇರೆ ಯಾರಾದರೂ ಭಾಗಿಯಾಗಿರುವುದು ಕಂಡುಬಂದರೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅಧಿಕಾರಿ ಹೇಳಿದ್ದಾರೆ.

ಮುನ್ನಾ ಬಹದ್ದೂರ್ ಪಕ್ಷದ ಕಾರ್ಯಕರ್ತ ಮತ್ತು ಪಕ್ಷದ ಮಾಜಿ ಪದಾಧಿಕಾರಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಮಿಶ್ರಾ ದೃಢಪಡಿಸಿದ್ದು, ಹಲ್ಲೆ ಘಟನೆ ಸಂಬಂಧ ಮುನ್ನಾ ವಿರುದ್ದ ಪಕ್ಷದಿಂದ ಕ್ರಮ ಕೈಗೊಳ್ಳುವ ಬಗ್ಗೆ ಸಾರಿಗೆ ಸಚಿವ ದಯಾಶಂಕರ್ ಸಿಂಗ್ ಮತ್ತು ಇತರ ಪಕ್ಷದ ನಾಯಕರೊಂದಿಗೆ ಮಾತುಕತೆ ನಡೆಸುತ್ತಿರುವುದಾಗಿ ಮಿಶ್ರಾ ತಿಳಿಸಿದ್ದಾರೆ.

36 ಲಕ್ಷ ರೂ. ವರದಕ್ಷಿಣೆ ತರುವಂತೆ ಮಹಿಳೆಗೆ ಬೆಂಕಿ ಹಚ್ಚಿ ಕೊಂದ ಗಂಡನ ಮನೆಯವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...