Homeಮುಖಪುಟಒಡಿಶಾದಲ್ಲಿ ಬಿಜೆಪಿ-ಬಿಜೆಡಿ ಬೆಂಬಲಿಗರ ನಡುವೆ  ಘರ್ಷಣೆ: ಓರ್ವ ಮೃತ್ಯು, ಹಲವರಿಗೆ ಗಾಯ

ಒಡಿಶಾದಲ್ಲಿ ಬಿಜೆಪಿ-ಬಿಜೆಡಿ ಬೆಂಬಲಿಗರ ನಡುವೆ  ಘರ್ಷಣೆ: ಓರ್ವ ಮೃತ್ಯು, ಹಲವರಿಗೆ ಗಾಯ

- Advertisement -
- Advertisement -

ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಬಿಜು ಜನತಾದಳ (ಬಿಜೆಡಿ) ಮತ್ತು ಬಿಜೆಪಿ ಬೆಂಬಲಿಗರ ನಡುವೆ ಘರ್ಷಣೆ ನಡೆದಿದ್ದು, ಓರ್ವ ಮೃತಪಟ್ಟು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮೃತರನ್ನು ಶ್ರೀ ಕೃಷ್ಣ ಶರಣಾಪುರ ಗ್ರಾಮದ ನಿವಾಸಿ ದಿಲೀಪ್ ಕುಮಾರ್ ಪಹಾನ (28) ಎಂದು ಗುರುತಿಸಲಾಗಿದೆ. ಘರ್ಷಣೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಿಲೀಪ್ ಕುಮಾರ್ ಎಂಕೆಸಿಜಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚುನಾವಣಾ ಪ್ರಚಾರಕ್ಕಾಗಿ ಪೋಸ್ಟರ್ ಅಳವಡಿಕೆ ವೇಳೆ ಕಲ್ಲಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಕೃಷ್ಣ ಶರಣಾಪುರ ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. ಬಿಜೆಡಿ ಮತ್ತು ಬಿಜೆಪಿ ಬೆಂಬಲಿಗರು ಹರಿತವಾದ ಆಯುಧಗಳನ್ನು ಬಳಸಿ ಹೊಡೆದಾಟ ನಡೆಸಿದ್ದಾರೆ. ಗಾಯಗೊಂಡವರು ಪ್ರಸ್ತುತ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ.

ಬಿಜೆಪಿ ಕಾರ್ಯಕರ್ತನ ಸಾವಿನ ಬೆನ್ನಲ್ಲಿ ಬಿಜೆಪಿ ಬೆಂಬಲಿಗರು ಬಿಜೆಡಿ ಅಭ್ಯರ್ಥಿ ಹಾಗೂ ಕಲ್ಲಿಕೋಟೆ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಸೂರ್ಯಮಣಿ ಬೈದ್ಯ ಅವರ ನಿವಾಸದ ಬಳಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿಗೊಳಿಸಿದ್ದಾರೆ. ಪೊಲೀಸ್ ಠಾಣೆ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಘಟನೆಯನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಖಂಡಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕಲ್ಲಿಕೋಟೆ ಪ್ರದೇಶದಲ್ಲಿ ನಡೆದ ಅತ್ಯಂತ ದುರದೃಷ್ಟಕರ ಮತ್ತು ದುರಂತ ಹಿಂಸಾಚಾರದ ಘಟನೆಯಿಂದ ತೀವ್ರವಾಗಿ ದುಃಖಿತನಾಗಿದ್ದೇನೆ. ಇಂತಹ ಹಿಂಸಾಚಾರದ ಘಟನೆಗಳಿಗೆ ನಮ್ಮ ಪ್ರಜಾಪ್ರಭುತ್ವ ಮತ್ತು ನಾಗರಿಕ ಸಮಾಜದಲ್ಲಿ ಸ್ಥಾನವಿಲ್ಲ. ಈ ಘಟನೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬದ ಸದಸ್ಯರಿಗೆ ನನ್ನ ಆಳವಾದ ಸಂತಾಪಗಳು ಮತ್ತು ಗಾಯಗಳಿಗೆ ಒಳಗಾದವರು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಪ್ರಾರ್ಥಿಸುತ್ತೇನೆ. ಘಟನೆ ಬಗ್ಗೆ ಪೊಲೀಸರು  ಸೂಕ್ತವಾದ ಕ್ರಮವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಘರ್ಷಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಇಂತಹ ಘಟನೆಗಳು ಸಂಭವಿಸಬಾರದು ಎಂದು ಹೇಳಿದ್ದಾರೆ.

ಕಲ್ಲಿಕೋಟೆ ಕ್ಷೇತ್ರದಿಂದ ಶಾಸಕ ಸೂರ್ಯಮಣಿ ಬೈದ್ಯ ಪುನರಾಯ್ಕೆ ಬಯಸುತ್ತಿದ್ದರೆ, ಬಿಜೆಪಿಯು ಕ್ಷೇತ್ರದಲ್ಲಿ ಮಾಜಿ ಶಾಸಕ ಪೂರ್ಣಚಂದ್ರ ಸೇಠಿ ಅವರನ್ನು ಕಣಕ್ಕಿಳಿಸಿದೆ. ಕಲ್ಲಿಕೋಟೆಯಲ್ಲಿ ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆ ಮೇ.20ರಂದು ನಿಗದಿಯಾಗಿದೆ.

ಒಡಿಶಾದ ಮುಖ್ಯ ಚುನಾವಣಾಧಿಕಾರಿ (ಸಿಇಒ) ನಿಕುಂಜ ಬಿಹಾರಿ ಧಾಲ್ ಅವರು ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಕ್ಷಣವೇ ಶಾಂತಿಯನ್ನು ಪುನಃಸ್ಥಾಪಿಸಲು ಮತ್ತು ಚುನಾವಣಾ ಹಿಂಸಾಚಾರವನ್ನು ತಡೆಯಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಇದನ್ನು ಓದಿ: ಕೇಂದ್ರದಲ್ಲಿ ಸರ್ಕಾರ ರಚನೆಗೆ ‘ಇಂಡಿಯಾ ಮೈತ್ರಿಕೂಟ’ಕ್ಕೆ ಟಿಎಂಸಿಯಿಂದ ಬಾಹ್ಯ ಬೆಂಬಲ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...