Homeಕರ್ನಾಟಕಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ವಿರುದ್ಧ ಎಫ್‌ಐಆರ್‌

ಎಫ್‌ಐಆರ್‌ನಲ್ಲಿ ಶಾಸಕರ ಹೆಸರು ಸೇರಿಸಲು ಕುಟುಂಬಸ್ಥರ ಆಗ್ರಹ

- Advertisement -
- Advertisement -

ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಹಾಗೂ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತನ್ನೀರಾ ಮೈನಾ ವಿರುದ್ದ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೃತನ ಸಹೋದರ ಜೀವನ್ ನೀಡಿದ ದೂರಿನ ಮೇರೆಗೆ ತನ್ನೀರಾ ಮೈನಾ ವಿರುದ್ದ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಸೆಕ್ಷನ್‌ 108 (ಆತ್ಮಹತ್ಯೆಗೆ ಪ್ರಚೋದನೆ), 3(5) (ಅಪರಾಧಿಕ ಒಳಸಂಚು), 351 (2) (ಬೆದರಿಕೆ), 352 (ಉದ್ದೇಶಪೂರ್ವ ಅವಮಾನ) ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

“ಮೃತ ವಿನಯ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಪತ್ನಿ ಹಾಗೂ ಒಂದು ಹೆಣ್ಣು ಮಗುವಿದೆ. ಸದಾ ಸಾಮಾಜಿಕ ಚಟುವಟಿಕೆಯಲ್ಲಿ ಕ್ರಿಯಾಶೀಲರಾಗಿದ್ದರು. ಇದಕ್ಕಾಗಿ ‘ಕೊಡಗಿನ ಸಮಸ್ಯೆಗಳು ಹಾಗೂ ಪರಿಹಾರಗಳು’ ಎಂಬ ಹೆಸರಿನಲ್ಲಿ ವಾಟ್ಸಾಪ್ ಗ್ರೂಪ್‌ ರಚಿಸಿದ್ದರು. ಈ ಗ್ರೂಪ್‌ಗೆ ವಿನಯ್‌ ಸಹ ಅಡ್ಮಿನ್ ಆಗಿದ್ದರು. ಕಳೆದ ಫೆಬ್ರವರಿಯಲ್ಲಿ ತನ್ನಿರಾ ಮೈನಾ ಅವರು ಗ್ರೂಪ್ ಅಡ್ಮಿನ್ ಆದ ತನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿರುವುದಾಗಿ ವಿನಯ್ ತನಗೆ ಕರೆ ಮಾಡಿ ಹೇಳಿದ್ದ” ಎಂದು ಸಹೋದರ ಜೀವನ್ ತಿಳಿಸಿದ್ದಾರೆ.

“ನ್ಯಾಯಾಲಯದಿಂದ ತಡೆಯಾಜ್ಞೆ ತಂದರೂ ತನ್ನೀರಾ ಅವರು ಪೊಲೀಸರ ಸಹಾಯದಿಂದ ಕುಟುಂಬಸ್ಥರು ಹಾಗೂ ಸ್ನೇಹಿತರ ಬಳಿ ವಿನಯ್ ಬಗ್ಗೆ ವಿಚಾರಿಸಿ ರೌಡಿ ಪಟ್ಟಿಯಲ್ಲಿ ಹಾಕುವುದಾಗಿ ಬೆದರಿಸಿದ್ದರು” ಎಂದು ದೂರಿನಲ್ಲಿ ಜೀವನ್ ಆರೋಪಿಸಿದ್ದಾರೆ.

ಎಫ್‌ಐಆರ್‌ನಲ್ಲಿ ಹೆಸರು ಕೈಬಿಟ್ಟಿದ್ದಕ್ಕೆ ಆಕ್ರೋಶ

ಸಹೋದರ ಸಾವಿಗೆ ಕಾಂಗ್ರೆಸ್ ಶಾಸಕರಾದ ಎ.ಎಸ್‌ ಪೊನ್ನಣ್ಣ ಹಾಗೂ ಮಂಥರ್‌ಗೌಡ ಕಾರಣರಾಗಿದ್ದಾರೆ. ಹೀಗಿದ್ದರೂ ಎಫ್‌ಐಆರ್‌ನಲ್ಲಿ ಅವರ ಹೆಸರುಗಳನ್ನು ಕೈ ಬಿಡಲಾಗಿದೆ. ಪೊಲೀಸರು ಒತ್ತಡದಿಂದ ಶಾಸಕರ ಹೆಸರನ್ನು ಎಫ್‌ಐಆರ್‌ನಲ್ಲಿ ನಮೂದಿಸಿಲ್ಲ. ಅವರ ಹೆಸರುಗಳನ್ನೂ ಎಫ್‌ಐಆರ್‌ನಲ್ಲಿ ಸೇರಿಸುವವರೆಗೂ ಸಹೋದರನ ಮೃತದೇಹ ಕೊಂಡೊಯ್ಯುದಿಲ್ಲ” ಎಂದು ಜೀವನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತನ್ನೀರಾ ಮೈನಾಗೆ ನೋಟಿಸ್ ನೀಡಲು ಸಿದ್ದತೆ

ವಿನಯ್ ಆತ್ಮಹತ್ಯೆ ‌ಪ್ರಕರಣದ ತನಿಖೆಯನ್ನು ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಆರಂಭಿಸಿದ್ದಾರೆ. ತನ್ನೀರಾ ಮೈನಾಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರಕರಣದ ಕುರಿತು ಪ್ರಾಥಮಿಕ ಮಾಹಿತಿ ಕಲೆ ಹಾಕಲಾಗಿದೆ. ವಿನಯ್ ಅವರ ಮೊಬೈಲ್, ಲ್ಯಾಪ್‌ಟಾಪ್ ಹಾಗೂ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದ ಬರಹವನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.

ವಿನಯ್ ಅವರು ಆತ್ಮಹತ್ಯೆ ‌ಮಾಡಿಕೊಳ್ಳುವ ಮೊದಲು ಯಾರ ಜೊತೆ ಮೊಬೈಲ್‌ನಲ್ಲಿ ಮಾತನಾಡಿದ್ದರು. ಅವರ ಮೊಬೈಲ್‌ನಲ್ಲಿ ಏನೆಲ್ಲಾ ದಾಖಲೆಗಳಿವೆ ಎಂಬುದನ್ನೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾಗಿ ವರದಿ ತಿಳಿಸಿದೆ.

ಕಾನೂನು ತಜ್ಞರ ಮೊರೆ ಹೋದ ಪೊಲೀಸರು

ವಿನಯ್ ಸಾವಿಗೆ ಸಂಬಂಧಿಸಿದಂತೆ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ.ಮಂಥರ್‌ಗೌಡ ವಿರುದ್ಧವೂ ಎಫ್‌ಐಆರ್ ದಾಖಲಿಸುವಂತೆ ಬಿಜೆಪಿ ಹಾಗೂ ವಿನಯ್ ಕುಟುಂಬದ ಸದಸ್ಯರು ಆಗ್ರಹಿಸಿ ಎರಡನೇ ಬಾರಿಗೆ ದೂರು ನೀಡಿದ್ದು, ಹೆಣ್ಣೂರು ಪೊಲೀಸರು ಕಾನೂನು ತಜ್ಞರ ಮೊರೆ ಹೋಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಸೌಜನ್ಯ ಪ್ರಕರಣ | ಧರ್ಮಸ್ಥಳದಲ್ಲಿ ನಡೆಯಬೇಕಿದ್ದ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...