Homeಕರ್ನಾಟಕಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

- Advertisement -
- Advertisement -

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. 

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹ ನೀಡಬೇಕು, ಈ ಮೂಲಕ ಯುವ ರೈತರ ಮದುವೆಯನ್ನು ಪ್ರೋತ್ಸಾಹಿಸುವ ಕೆಲಸ ಇನ್ನಾದರೂ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೆಲೆ ಸರ್ಕಾರಿ ಕೆಲಸಕ್ಕೆ ನೇಮಕಾತಿ ಆಗುವುದು ತೀರಾ ವಿಳಂಬವಾಗಿದೆ. ಇದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಸರ್ಕಾರದ ನೀತಿಯಿಂದಾಗಿ ಖಾಸಗಿ ಕಂಪನಿಗಳು ಕರ್ನಾಟಕಕ್ಕೆ ಉದ್ಯಮ ಸ್ಥಾಪನೆಗಾಗಿ ಬರುತ್ತಿಲ್ಲ ಎಂದು ಆರೋಪಿಸಿದರು.

ರೈತರ ಬೆಳೆಗಳಿಗೆ ಬೆಂಬಲ ಬೆಲೆ ಇಲ್ಲ, ಸಮರ್ಪಕವಾಗಿ ಬೆಳೆ ಬೆಳೆಯಲು ನೀರು ಇಲ್ಲ. ಕೃಷಿ ನಂಬಿಕೊಂಡಿರುವವರ ಬದುಕು ಮೂರಾ ಬಟ್ಟೆಯಾಗಿದೆ. ಇತ್ತ ಕೃಷಿಯನ್ನು ನಂಬಿಕೊಂಡು ಬದುಕು ಕಟ್ಟಿಕೊಳ್ಳಬೇಕೆಂದಿರುವ ಯುವ ರೈತರಿಗೆ ಹೆಣ್ಣು ಸಿಗುತ್ತಿಲ್ಲ. ಇದರಿಂದ ಯುವ ರೈತರಿಗೆ ಬದುಕಿನ ಗ್ಯಾರಂಟಿ ಇಲ್ಲವಾಗಿದೆ ಎಂದು ವಿಷಾದಿಸಿದರು.

ರೈತರನ್ನು ಮದುವೆಯಾಗುವ ಹುಡುಗಿಯರಿಗೆ ₹5 ಲಕ್ಷ ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವನ್ನು ಕೆಆರ್‌ಆರ್‌ಎಸ್ ಒತ್ತಾಯಿಸಿದೆ.

ರೈತ ಯುವಕರನ್ನು ಮದುವೆಯಾಗುವ ಹುಡುಗಿಯರ ಸಂಖ್ಯೆ ತೀವ್ರವಾಗಿ ಕಡಿಮೆಯಾಗುತ್ತಿದೆ ಮತ್ತು ಇದು ಒಂದು ಉದಯೋನ್ಮುಖ ಸಾಮಾಜಿಕ ಸಮಸ್ಯೆಯಾಗಿದ್ದು, ಸರ್ಕಾರ ಇನ್ನೂ ಇದರ ಬಗ್ಗೆ ಗಮನ ಹರಿಸಿಲ್ಲ ಎಂದು ಕೆಆರ್‌ಆರ್‌ಎಸ್ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ಇದೇ ತಿಂಗಳ 5ನೇ ತಾರೀಖಿನಂದು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಸಹ ಈ ಬೇಡಿಕೆಯನ್ನು ಸರ್ಕಾರದ ಮುಂದೆ ಇಟ್ಟಿತ್ತು.  

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಕೃಷಿಯಲ್ಲಿ ತೊಡಗಿರುವ ಹುಡುಗರನ್ನು ಮದುವೆಯಾಗುವ ಹುಡುಗಿಯರ ಸಂಖ್ಯೆ ತೀವ್ರ ಮಟ್ಟದಲ್ಲಿ ಇಳಿಕೆ ಆಗಿದೆ. ಇದು ಹೊಸ ರೀತಿಯ ಸಾಮಾಜಿಕ ಸಮಸ್ಯೆಯಾಗಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದ್ದರು. 

ಇನ್ನು ಯುವ ಕೃಷಿಕರನ್ನು ಮದುವೆಯಾಗುವ ವಧುಗಳಿಗೆ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಸರ್ಕಾರವನ್ನು ಈ ಮೂಲಕ ಒತ್ತಾಯಿಸುತ್ತಿದೆ. ಇದು ವೈವಾಹಿಕ ಮೈತ್ರಿಗಳನ್ನು ಪ್ರೋತ್ಸಾಹಿಸುವ ಪ್ರಯತ್ನವಾಗಿದೆ ಎಂದು ಹೇಳಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...