HomeUncategorizedಬಿಜೆಪಿ ಸಂಸದ ಪಿ.ಸಿ ಮೋಹನ್ ವಿರುದ್ಧ ತಿರುಗಿ ಬಿದ್ದ ಸ್ವಪಕ್ಷದ ಕಾರ್ಯಕರ್ತರು: ಧಿಕ್ಕಾರ ಕೂಗಿ ಆಕ್ರೋಶ

ಬಿಜೆಪಿ ಸಂಸದ ಪಿ.ಸಿ ಮೋಹನ್ ವಿರುದ್ಧ ತಿರುಗಿ ಬಿದ್ದ ಸ್ವಪಕ್ಷದ ಕಾರ್ಯಕರ್ತರು: ಧಿಕ್ಕಾರ ಕೂಗಿ ಆಕ್ರೋಶ

- Advertisement -
- Advertisement -

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದ ವಿವಿದೆಡೆ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಅವರದ್ದೇ ಪಕ್ಷದ ಕಾರ್ಯಕರ್ತರು ತಿರುಗಿ ಬೀಳುತ್ತಿದ್ದಾರೆ. ಇದರಿಂದ ಬಹಿರಂಗ ಸಭೆಗಳಲ್ಲಿ ಅಭ್ಯರ್ಥಿಗಳು ಮುಜುಗರಕ್ಕೊಳಗಾಗುವ ಪರಿಸ್ಥಿತಿ ಎದುರಾಗಿದೆ.

ಗುರುವಾರ(ಮಾ.28) ಶಾಂತಿನಗರದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಹಾಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿಯಾಗಿರುವ ಪಿ.ಸಿ ಮೋಹನ್ ವಿರುದ್ದ ಧಿಕ್ಕಾರ ಕೂಗಿ ಬಿಜೆಪಿ ಕಾರ್ಯರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಿಮ್ಮನ್ನು ಮೂರಿ ಬಾರಿ ಸಂಸದರನ್ನಾಗಿ ಮಾಡಿ ಲೋಕಸಭೆಗೆ ಕಳಿಸಿದ್ದೇವೆ, ನಮ್ಮ ಪ್ರದೇಶಕ್ಕೆ ಏನು ಮಾಡಿದ್ದೀರಾ? ನಿಮ್ಮ ಸಾಧನೆ ಏನು? ನಾವು ಮೋದಿಯವರನ್ನು ನೋಡಿ ನಿಮಗೆ ಓಟು ಕೊಟ್ಟೆವು. ಆದರೆ, ನೀವು ನಮಗೆ ಏನು ಮಾಡಿದ್ದೀರಾ?” ಎಂದು ಬಿಜೆಪಿ ಕಾರ್ಯಕರ್ತರು ಕೇಳಿದರು.

ಕೇಂದ್ರ ಸರ್ಕಾರದ ಕೆಲವು ಯೋಜನೆಗಳನ್ನು ಉಲ್ಲೇಖಿಸುತ್ತಾ ಇದಕ್ಕೆ ಸಮಜಾಯಿಷಿ ನೀಡಲು ಸಂಸದ ಪಿ.ಸಿ ಮೋಹನ್ ಯತ್ನಿಸಿದರು. ಆದರೆ, ಕಾರ್ಯಕರ್ತರು ಸುಮ್ಮನಾಗದೆ ಧಿಕ್ಕಾರ ಕೂಗಿದರು. ಈ ನಡುವೆ ಪಿ.ಸಿ ಮೋಹನ್ ಅಭಿಮಾನಿಗಳು ಬಿಜೆಪಿ ಕಾರ್ಯಕರ್ತರೊಂದಿಗೆ ವಾಗ್ವಾದಕ್ಕೆ ಇಳಿದರು. ಇದರಿಂದ ಜಗಳ ತಾರಕಕ್ಕೇರಿತು. ಪಿ.ಸಿ ಮೋಹನ್ ಬಿಜೆಪಿ ಕಾರ್ಯಕರ್ತರನ್ನು ಎಷ್ಟೇ ಸಮಾಧಾನಿಸಲು ಯತ್ನಿಸಿದರಾದರೂ, ಅವರು ಸಮಾಧಾನಗೊಳ್ಳಲಿಲ್ಲ. ಕೊನೆಗೆ ಬೇರೆ ದಾರಿ ಕಾಣದೆ ಚುನಾವಣಾ ಪ್ರಚಾರವನ್ನು ಅರ್ಧಕ್ಕೆ ಮೊಟಕುಗೊಳಿಸಿ ಸ್ಥಳದಿಂದ ತೆರಳಿದರು.

4ನೇ ಬಾರಿ ಬಿಜೆಪಿಯಿಂದ ಕಣಕ್ಕೆ ಇಳಿದಿರುವ ಪಿ.ಸಿ ಮೋಹನ್

ಅಲ್ಪಸಂಖ್ಯಾತರೇ ಹೆಚ್ಚಿರುವ ಬೆಂಗಳೂರು ಸೆಂಟ್ರಲ್‌ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ 4ನೇ ಬಾರಿ ಪಿ.ಸಿ ಮೋಹನ್ ಕಣಕ್ಕೆ ಇಳಿದಿದ್ದಾರೆ. ಬೆಂಗಳೂರಿನ ಹೃದಯ ಭಾಗದ 8 ವಿಧಾನಸಭಾ ಕ್ಷೇತ್ರಗಳು ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟಿದ್ದು, 2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯಾದಾಗಿನಿಂದ ಈ ಕ್ಷೇತ್ರದಲ್ಲಿ ನಡೆದ ಎಲ್ಲ ಲೋಕಸಭಾ ಚುನಾವಣೆಗಳನ್ನು ಬಿಜೆಪಿ ಗೆದ್ದುಕೊಂಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೆಂಟ್ರಲ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 5 ಮತ್ತು ಬಿಜೆಪಿ 3ರಲ್ಲಿ ಗೆಲುವು ಸಾಧಿಸಿದೆ. ಸಚಿವರಾದ ಕೆ.ಜೆ.ಜಾರ್ಜ್ (ಸರ್ವಜ್ಞ ನಗರ), ದಿನೇಶ್ ಗುಂಡೂರಾವ್ (ಗಾಂಧಿನಗರ), ಝಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ರಿಝ್ವಾನ್ ಅರ್ಷದ್ (ಶಿವಾಜಿನಗರ), ಎನ್.ಎ.ಹ್ಯಾರಿಸ್ (ಶಾಂತಿನಗರ) ಕಾಂಗ್ರೆಸ್ ಶಾಸಕರು. ಸುರೇಶ್ ಕುಮಾರ್ (ರಾಜಾಜಿನಗರ), ಎಸ್ ರಘು (ಸಿವಿ ರಾಮನ್ ನಗರ) ಮತ್ತು ಮಂಜುಳಾ ಲಿಂಬಾವಳಿ (ಮಹದೇವಪುರ) ಬಿಜೆಪಿ ಶಾಸಕರಾಗಿದ್ದಾರೆ.

ಕಾಂಗ್ರೆಸ್‌ನಿಂದ ಈ ಬಾರಿ ಮಾಜಿ ಕೇಂದ್ರ ಸಚಿವ ರೆಹಮಾನ್ ಖಾನ್ ಪುತ್ರ ಮನ್ಸೂರ್ ಅಲಿ ಖಾನ್‌ ಸ್ಪರ್ಧಿಸುತ್ತಿದ್ದಾರೆ. ಪಿ.ಸಿ ಮೋಹನ್‌ ಸ್ಪರ್ಧೆಗೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿರುವ ಹಿನ್ನೆಲೆ, ಮನ್ಸೂರ್ ಅಲಿ ಖಾನ್ ಅವರಿಗೆ ಗೆಲ್ಲುವ ಅವಕಾಶವಿದೆ ಎಂಬ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ನಡೆಯುತ್ತಿವೆ.

ಇದನ್ನೂ ಓದಿ : ‘ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಕುಟುಂಬದವರು ಎಲ್ಲಿದ್ದರು..?’: ಡಿಕೆ ಶಿವಕುಮಾರ್ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

0
ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್‌ ಆಗಿರುವ ದೆಹಲಿ ರಿಜ್‌ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ)...