Homeಮುಖಪುಟಗುಜರಾತ್‌ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು: ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದೇನು?

ಗುಜರಾತ್‌ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು: ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದೇನು?

- Advertisement -
- Advertisement -

ಪಾಕಿಸ್ತಾನದ ವಿದೇಶಾಂಗ ಸಚಿವರ ಹೇಳಿಕೆ ವಿರೋಧಿಸಿ ಗುಜರಾತ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ಪ್ರಸಂಗ ಜರುಗಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಭಾರತದ ಪ್ರಧಾನಿ ನರೇಂದ್ರಮೋದಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಖಂಡಿಸಿ ಪ್ರತಿಕೃತಿ ದಹನ ಪ್ರತಿಭಟನೆಯನ್ನು ಬಿಜೆಪಿ ಹಮ್ಮಿಕೊಂಡಿತ್ತು. ಆ ಸಂದರ್ಭದಲ್ಲಿ ತಾನಾಶಾಹಿ ನಹೀ ಚಲೇಗಿ, ನಹೀ ಚಲೇಗಿ ಎಂದು ಕೂಗಿದ ನಂತರ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಆಗ ಉಳಿದವರು ಗಾಬರಿಯಾಗುವುದನ್ನು ನೋಡಬಹುದು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ, “ಗುಜರಾತ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದರು. ಈ ಘೋಷಣೆಗಳು ಬಾಯಿತಪ್ಪಿನಿಂದ ಕೂಗಲಾಗಿದೆ ಎಂದು ನಾನು ನಂಬುತ್ತೇನೆ. ಆದರೆ ಯಾವುದೇ ವಿರೋಧ ಪಕ್ಷವು ತಪ್ಪಾಗಿ ಈ ಘೋಷಣೆಯನ್ನು ಕೂಗಿದ್ದರೆ, ಇಡೀ ಬಿಜೆಪಿ ದೊಡ್ಡ ದನಿಯಲ್ಲಿ ಅವರ ದೇಶಭಕ್ತಿಯ ಪ್ರಮಾಣಪತ್ರವನ್ನು ಕೇಳುತ್ತಿತ್ತು” ಎಂದು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿಯೂ ಸಹ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಶನಿವಾರ ವರದಿಯಾಗಿತ್ತು. ಬಿಜೆಪಿ ವತಿಯಿಂದ ಶನಿವಾರ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಪದೇ ಪದೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಪ್ರಸಂಗ ನಡೆದಿದೆ. ಆ ಸಂದರ್ಭದಲ್ಲಿ ಅವರ ಪಕ್ಕದಲ್ಲಿಯೇ ಇದ್ದ ಬಿಜೆಪಿ ಮುಖಂಡರು ನಗುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಸಂಜಯ ವೃತ್ತದಲ್ಲಿ ಶನಿವಾರ ಬಿಜೆಪಿ ಪ್ರತಿಭಟನೆ ನಡೆಸಿತು. ಆ ಸಂದರ್ಭದಲ್ಲಿ ಕೆಳಗೆ ಕೂತಿದ್ದವರು ಉದ್ದೇಶಪೂರ್ವಕವಾಗಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗುವುದು ನಂತರ ಇತರ ಮುಖಂಡರು ನಗುತ್ತಾ ಅವರ ಬಾಯಿ ಮುಚ್ಚಿಸುವುದು ಕಂಡುಬಂದಿದೆ.

ಇದನ್ನೂ ಓದಿ: ಮಂಡ್ಯ: ಪದೇ ಪದೇ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...