Homeಮುಖಪುಟಉತ್ತರಪ್ರದೇಶ: 8 ಬಾರಿ ಮತದಾನದ ವಿಡಿಯೋ ವೈರಲ್‌; ಬಿಜೆಪಿ ಕಾರ್ಯಕರ್ತನ ಪುತ್ರ ಅರೆಸ್ಟ್

ಉತ್ತರಪ್ರದೇಶ: 8 ಬಾರಿ ಮತದಾನದ ವಿಡಿಯೋ ವೈರಲ್‌; ಬಿಜೆಪಿ ಕಾರ್ಯಕರ್ತನ ಪುತ್ರ ಅರೆಸ್ಟ್

- Advertisement -
- Advertisement -

ಉತ್ತರಪ್ರದೇಶದ ಇಟಾಹ್ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತನೋರ್ವನ ಹದಿಹರೆಯದ ಪುತ್ರನೋರ್ವ 8 ಬಾರಿ ಬಿಜೆಪಿಗೆ ಮತ ಹಾಕಿದ್ದು, ಆತನನ್ನು ವಿಡಿಯೋ ಆಧರಿಸಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಖಿರಿಯಾ ಪಮರನ್‌ ಗ್ರಾಮದ ಅನಿಲ್‌ ಸಿಂಗ್‌ ಎಂಬವರ ಪುತ್ರ ರಾಜನ್‌ ಸಿಂಗ್‌ ಎಂದು ಗುರುತಿಸಲಾಗಿದೆ ಎಂದು ಬಂಧನದ ಕುರಿತು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ನವದೀಪ್‌ ರಿನ್ವಾ ಮಾಹಿತಿ ನೀಡಿದ್ದಾರೆ. ಆರೋಪಿ ಯುವಕನ ತಂದೆ ಅನಿಲ್‌ ಸಿಂಗ್‌ ಖಿರಿ ಪಮರನ್‌ ಗ್ರಾಮ ಪ್ರಧಾನರಾಗಿದ್ದು ಬಿಜೆಪಿಯ ಸಕ್ರಿಯ ಸದಸ್ಯನಾಗಿದ್ದಾನೆ.

ವಿಡಿಯೋ ಆಧಾರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮತ್ತು ಇತರ ಅಪರಾಧದ ಆರೋಪದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ವಿಡಿಯೋದಲ್ಲಿ ಹದಿಹರೆಯದ ಯುವಕನೋರ್ವ ಬಿಜೆಪಿಗೆ ಎಂಟು ಬಾರಿ ಮತ ಹಾಕುವುದು ಸೆರೆಯಾಗಿತ್ತು.

ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಪಿ ತ್ರಿಪಾಠಿ ನೀಡಿದ ದೂರಿನ ಆಧಾರದ ಮೇಲೆ ಹದಿಹರೆಯದ ಯುವಕನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ವೀಡಿಯೊದಲ್ಲಿ ಕಂಡುಬರುವ ಅಪ್ರಾಪ್ತ ವಯಸ್ಕನಂತೆ ಕಾಣುವ ವ್ಯಕ್ತಿಯನ್ನು ಪತ್ತೆಹಚ್ಚಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ನಯಾ ಗಾಂವ್ ಎಸ್‌ಎಚ್‌ಒ ರಿತೇಶ್ ಠಾಕೂರ್ ಈ ಮೊದಲು ಹೇಳಿದ್ದರು.

ಒಬ್ಬ ವ್ಯಕ್ತಿ ಬಿಜೆಪಿಗೆ 8 ಬಾರಿ ಮತದಾನ ಮಾಡಿದ್ದಾನೆ ಎನ್ನಲಾದ ವಿಡಿಯೊವನ್ನು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇದರ ಬೆನ್ನಲ್ಲೇ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಈ ವಿಡಿಯೊ ನೋಡಿದರೆ ತಮ್ಮ ಸೋಲಿನಿಂದ ತಪ್ಪಿಸಿಕೊಳ್ಳಲು ಬಿಜೆಪಿ, ಜನರ ನಿರ್ಣಯವನ್ನು ಬದಿಗೊತ್ತಿ ಆಡಳಿತ ಯಂತ್ರದ ಮೇಲೆ ಒತ್ತಡ ಹಾಕಿ ಪ್ರಜಾಪ್ರಭುತ್ವದ ಲೂಟಿಗೆ ಮುಂದಾಗಿದೆ ಎಂದು ಹೇಳಿದ್ದರು.

ಆಡಳಿತದಲ್ಲಿರುವವರ ಒತ್ತಡಕ್ಕೆ ಮಣಿಯದೆ ಚುನಾವಣೆ ಸಿಬ್ಬಂದಿ ತಮ್ಮ ಸಾಂವಿಧಾನಿಕ ಕರ್ತವ್ಯ ಅರಿತು ಕೆಲಸ ಮಾಡುತ್ತಾರೆ ಎಂದು ಕಾಂಗ್ರೆಸ್ ನಂಬಿದೆ. ಇಲ್ಲವಾದರೆ, ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ ಕೂಡಲೇ ಕರ್ತವ್ಯ ಲೋಪ ಎಸಗಿದವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಸಾಂವಿಧಾನಿಕ ಪ್ರತಿಜ್ಞೆ ಉಲ್ಲಂಘಿಸುವ ಮುನ್ನ 10 ಬಾರಿ ಯೋಚಿಸಿ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಫರೂಕಾಬಾದ್‌ ಕ್ಷೇತ್ರದಿದ ಬಿಜೆಪಿಯಿಂದ ಮುಕೇಶ್‌ ರಾಜಪುತ್‌ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ನಾಲ್ಕನೇ ಹಂತದಲ್ಲಿ ಮೇ 13ರಂದು ಮತದಾನ ನಡೆದಿತ್ತು. ಘಟನೆ ಬಯಲಾಗುತ್ತಿದ್ದಂತೆ ಈ ನಿರ್ದಿಷ್ಟ ಮತಗಟ್ಟೆಯಲ್ಲಿದ್ದ ಎಲ್ಲಾ ಅಧಿಕಾರಿಗಳನ್ನು ವಜಾಗೊಳಿಸಲು ಹಾಗೂ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಮತಗಟ್ಟೆಯಲ್ಲಿ ಮರುಮತದಾನಕ್ಕೂ ಶಿಫಾರಸು ಮಾಡಲಾಗಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ.

ಇದನ್ನು ಓದಿ: ಇರಾನ್‌ನ ಹಂಗಾಮಿ ಅಧ್ಯಕ್ಷರಾಗಿ ನೇಮಕಗೊಂಡ ಮೊಹಮ್ಮದ್ ಮೊಖ್ಬರ್ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...